Gold and Silver Price: ಆಭರಣ ಪ್ರಿಯರೇ ಇಲ್ನೋಡಿ: ರಾಜ್ಯದಲ್ಲಿ ಬಂಗಾರ, ಬೆಳ್ಳಿ ದರದಲ್ಲಿ ಇಳಿಕೆ

ಹೆಣ್ಮಕ್ಕಳಿಗೆ ಚಿನ್ನವೆಂದರೆ ಅಚ್ಚುಮೆಚ್ಚು. ಈ ಹಿನ್ನೆಲೆ ಈಗ ಚಿನ್ನದ ದರ ಇಳಿಕೆಯಾಗುತ್ತಿರುವುದು, ಚಿನ್ನ ಪ್ರಿಯರ ಖುಷಿಯನ್ನು ಇಮ್ಮಡಿಗೊಳಿಸಿದೆ. ಬೆಳ್ಳಿ ದರ ಸಹ ರಾಜ್ಯದಲ್ಲಿ ಇಳಿಕೆಯಾಗಿದ್ದು, ಈ ಹಿನ್ನೆಲೆ ಆಭರಣ ಪ್ರಿಯರು ಇಂದೇ ಸಹ ಆಭರಣ ಕೊಂಡುಕೊಳ್ಳಬಹುದು. 

gold and silver price 28 july 2022 in karnataka ash

ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕೊರತೆ ಇಲ್ಲ. ಮದುವೆ, ಮುಂತಾದ ಶುಭ ಸಮಾರಂಭಗಳಿಗೆ ಬಂಗಾರ, ಬೆಳ್ಳಿ ಖರೀದಿಸುವವರೂ ಸಹ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅದೇ ರೀತಿ, ನೀವೂ ಸಹ ಚಿನ್ನ, ಬೆಳ್ಳಿಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದರೆ, ನಿಮಗೆ ಇಂದು ಒಳ್ಳೆಯ ಸುದ್ದಿ ಅನ್ಸುತ್ತೆ. ಏಕೆಂದರೆ ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಇಳಿಕೆಯಾಗಿದೆ.  ಬೆಳ್ಳಿ ಬೆಲೆ ಸಹ ಕಡಿಮೆಯಾಗಿದೆ. ಹಾಗಾದ್ರೆ ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ.

ಒಂದು ಗ್ರಾಂ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,650
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,073

Petrol - Diesel Price Today: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ವಿವರ ಇಲ್ಲಿದೆ..

ಎಂಟು ಗ್ರಾಂ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,584

ಹತ್ತು ಗ್ರಾಂ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,730

ನೂರು ಗ್ರಾಂ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,65,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,07,300

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,500 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,350, ರೂ. 46,450, ರೂ. 46,450 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,450 ರೂ. ಆಗಿದೆ.

ಇಂದಿನ ಬೆಳ್ಳಿ ದರ
ಇನ್ನೊಂದೆಡೆ, ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಅಲ್ಪ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದಲ್ಲಿ ಬೆಳ್ಳಿ ದರ ಅಲ್ಪ ಏರಿಕೆಯಾಗಿದ್ದರೂ, ರಾಜ್ಯ ರಾಜಧಾನಿಯಲ್ಲಿ ಇಳಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 600, ರೂ. 6,000 ಹಾಗೂ ರೂ. 60,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 60,000 ಆಗಿದ್ದರೆ, ದೆಹಲಿಯಲ್ಲಿ ರೂ. 54,600, ಮುಂಬೈನಲ್ಲಿ ರೂ. 54,600 ಹಾಗೂ ಕೋಲ್ಕತ್ತದಲ್ಲೂ ರೂ. 54,600 ಗಳಾಗಿದೆ.

Latest Videos
Follow Us:
Download App:
  • android
  • ios