ದೇಶದ ಹಣದುಬ್ಬರ ಹೆಚ್ಚಾಗಿದ್ದು, ಈಗ ಬಂಗಾರ, ಬೆಳ್ಳಿ ದರವೂ ಹೆಚ್ಚಾಗುತ್ತಿರುವುದು ಆಭರಣ ಪ್ರಿಯರಿಗೆ ನಿರಾಸೆ ತಂದಿದೆ. ಈ ಹಿನ್ನೆಲೆ ಬಂಗಾರದ ಮೇಲೆ ಹೂಡಿಕೆ ಮಾಡುವವರು ಸ್ವಲ್ಪ ಮುಂದೂಡಿಕೆ ಮಾಡುತ್ತಿದ್ದಾರೆ. 

ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಬಂಗಾರ, ಬೆಳ್ಳಿ ದರ ಮತ್ತೆ ಗಗನಕ್ಕೇರುತ್ತಿದೆ. ಈ ಹಿನ್ನೆಲೆ ಆಭರಣ ಮಾಡಿಸಿಕೊಳ್ಳಲು ಪ್ಲ್ಯಾನ್‌ ಮಾಡುತ್ತಿರುವವರು ಸದ್ಯ ಒಡವೆ ಮಾಡಿಸಿಕೊಳ್ಳುವುದೋ ಬೇಡವೋ ಎಂದು ತಲೆ ಕೆಡಿಸಿಕೊಳ್ಳುವಂತಾಗಿದೆ. ಹೌದು, ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರ, ಬೆಳ್ಳಿ ದರದಲ್ಲಿ ಸಾಕಷ್ಟು ವ್ಯತ್ಯಾಸವಾಗುತ್ತಿದೆ. ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕೊರತೆ ಇಲ್ಲ. ಅದೇ ರೀತಿ, ನೀವೂ ಸಹ ಚಿನ್ನ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದರೆ, ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ.

ಒಂದು ಗ್ರಾಂ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,725
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,154


Petrol - Diesel Price Today: ಬಳ್ಳಾರಿಯಲ್ಲಿ ಹೆಚ್ಚಾದ ಪೆಟ್ರೋಲ್‌ ದರ, ಚಿತ್ರದುರ್ಗದಲ್ಲಿ ಇಳಿದ ಬೆಲೆ

ಎಂಟು ಗ್ರಾಂ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,760
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,192

ಹತ್ತು ಗ್ರಾಂ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,540

ನೂರು ಗ್ರಾಂ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,72,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,14,900

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,250 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,050, ರೂ. 47,200, ರೂ. 47,200 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,350 ರೂ. ಆಗಿದೆ.

ಇಂದಿನ ಬೆಳ್ಳಿ ದರ
ಇನ್ನೊಂದೆಡೆ, ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದಲ್ಲಿ ಬೆಳ್ಳಿ ದರ ಏರಿಕೆಯಾದಂತೆ, ರಾಜ್ಯ ರಾಜಧಾನಿಯಲ್ಲಿ ಸಹ ಬೆಲೆ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 623, ರೂ. 6,230 ಹಾಗೂ ರೂ. 62,300 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,200 ಆಗಿದ್ದರೆ, ದೆಹಲಿಯಲ್ಲಿ ರೂ. 58,000, ಮುಂಬೈನಲ್ಲಿ ರೂ. 58,000 ಹಾಗೂ ಕೋಲ್ಕತ್ತದಲ್ಲೂ ರೂ. 58,000 ಗಳಾಗಿದೆ.