Asianet Suvarna News Asianet Suvarna News

Gold Silver Price Today: ಮತ್ತಷ್ಟು ಗಗನಕ್ಕೇರಿದ ಬಂಗಾರ, ಬೆಳ್ಳಿ ದರ: ಇಂದಿನ ಬೆಲೆ ವಿವರ ಹೀಗಿದೆ..

ಶ್ರಾವಣ ಮಾಸದಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಮುಂತಾದ ಆಭರಣಗಳ ವಹಿವಾಟು ಹೆಚ್ಚಾಗೇ ಇರುತ್ತದೆ. ಆದರೆ, ಸದ್ಯ ಬೆಲೆ ಹೆಚ್ಚಾಗಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಮಾಡಲು ಹಲವರು ಹಿಂದೇಟು ಹಾಕುತ್ತಾರೆ. ಇಂದಿನ ಬೆಲೆ ವಿವರ ಹೀಗಿದೆ..

gold and silver price august 14th 2022 in karnataka ash
Author
Bangalore, First Published Aug 14, 2022, 11:07 AM IST

ಇತ್ತೀಚೆಗೆ ಚಿನ್ನ, ಬೆಳ್ಳಿ ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ದೇಶದಲ್ಲಿಂದು ಚಿನ್ನ, ಬೆಳ್ಳಿ ದರದಲ್ಲಿ ಮತ್ತಷ್ಟು ಗಗನಮುಖಿಯಾಗಿದೆ. ಶ್ರಾವಣ ಮಾಸ ಆರಂಭವಾಗಿರುವುದರಿಂದ ಸಾಲು ಸಾಲು ಹಬ್ಬಗಳು ಹಾಗೂ ಶುಭ ಸಮಾರಂಭಗಳ ಸಂಖ್ಯೆಯೂ ಹೆಚ್ಚಾಗಿದೆ. ಮದುವೆ, ಗೃಹ ಪ್ರವೇಶ ಮುಂತಾದ ಶುಭ ಸಮಾರಂಭಗಳಿಗೆ ಆಭರಣಗಳ ಖರೀದಿ ಇದ್ದೇ ಇರುತ್ತದೆ. ಚಿನ್ನ (Gold), ಬೆಳ್ಳಿ (Silver) ದರ ಹೆಚ್ಚಾದರೂ ಸಹ ಇಂತಹ ಸಮಾರಂಭಗಳಿಗೆ ಜೇಬಿಗೆ ಹೆಚ್ಚು ಹೊರೆಯಾದರೂ ಆಭರಣಗಳನ್ನು ಖರೀದಿಸಬೇಕಿದೆ. ನಿಮಗೂ ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಹಾಗಾದರೆ, ಬೆಂಗಳೂರಿನಲ್ಲಿ (Bengaluru) ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ. 

ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ಏರಿಕೆಯಾಗಿದ್ದು, ಇಂದಿನ ಬೆಲೆ ವಿವರ ಇಲ್ಲಿದೆ..

ಇದನ್ನು ಓದಿ: ಚಿತ್ರದುರ್ಗದಲ್ಲಿ 90 ರೂ. ದಾಟಿದ ಡೀಸೆಲ್‌ ಬೆಲೆ: ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ವಿವರ ಹೀಗಿದೆ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,820
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,258

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,560
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 42,064

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,580

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,82,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,25,800

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,200 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 49,140, ರೂ. 48,150, ರೂ.  48,150 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 48,300 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಮತ್ತಷ್ಟು ಎರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ವ್ಯತ್ಯಾಸವಾದಂತೆ ಚಿನ್ನ, ಬೆಳ್ಳಿ ದರದಲ್ಲೂ ಏರಿಕೆ - ಇಳಿಕೆ ಉಂಟಾಗುತ್ತದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದಲ್ಲಿ ಬೆಳ್ಳಿ ದರದಲ್ಲಿ ಇಂದು ಹೆಚ್ಚಾದಂತೆ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಹ ಬೆಳ್ಳಿ ದರ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 648, ರೂ. 6,480 ಹಾಗೂ ರೂ. 64,800 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,800 ಆಗಿದ್ದರೆ, ಮುಂಬೈನಲ್ಲಿ ರೂ. 59,300 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 59,300 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲೂ ಇಂದಿನ ಬೆಳ್ಳಿ ದರ ರೂ. 59,300 ಆಗಿದೆ.

Follow Us:
Download App:
  • android
  • ios