ದೇಶದ ಹಣದುಬ್ಬರ ಹೆಚ್ಚಾಗಿದ್ದು, ಈಗ ಶುಭ ಸಮಾರಂಭಗಳು ಸಹ ಹೆಚ್ಚಾಗಿದೆ. ಈ ನಡುವೆ, ಇಂದಿನ ಬಂಗಾರ, ಬೆಳ್ಳಿ ದರದಲ್ಲಿ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆ ಶುಭ ಸಮಾರಂಭಗಳಿಗೆ ಆಭರಣ ಖರೀದಿಸುವವರು ಅನಿವಾಯ್ವಾಗಿ ಈಗ ಚಿನ್ನ, ಬೆಳ್ಳಿ ಖರೀದಿಸಬೇಕಾಗಿದ್ದು, ಅವರ ಜೇಬಿಗೆ ಹೆಚ್ಚು ಹೊರೆ ಬೀಳಲಿದೆ. ಅಲ್ಲದೆ, ಬಂಗಾರದ ಮೇಲೆ ಹೂಡಿಕೆ ಮಾಡುವವರು ಸಹ ಹಿಂದೇಟು ಹಾಕುತ್ತಿದ್ದಾರೆ.

ಶ್ರಾವಣ ಮಾಸದಲ್ಲಿ ಶುಭ ಸಮಾರಂಭಗಳು ಸಾಮಾನ್ಯವಾಗಿ ಹೆಚ್ಚಿರುತ್ತದೆ. ಮದುವೆ, ಗೃಹ ಪ್ರವೇಶದಂತಹ ಸಮಾರಂಭಗಳಿಗೆ ಸಾಮಾನ್ಯವಾಗಿ ಹೆಚ್ಚು ಜನರು ಆಭರಣ ಖರೀದಿ ಮಾಡುತ್ತಾರೆ. ಆದರೆ, ಬಂಗಾರ, ಬೆಳ್ಳಿಯ ಆಭರಣಗಳನ್ನು ಖರೀದಿಸುವವರಿಗೆ ಇಲ್ಲಿದೆ ಶಾಕಿಂಗ್ ಸುದ್ದಿ. ಏಕೆಂದರೆ, ಇಂದು ಚಿನ್ನ, ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಬೆಂಗಳೂರು, ದೆಹಲಿ ಸೇರಿ ದೇಶದ ಪ್ರಮುಖ ನಗರದಗಳಲ್ಲಿ ಬಂಗಾರ, ಬೆಳ್ಳಿ ಬೆಲೆ ಗಗನದತ್ತ ಚಿಮ್ಮಿದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದರೆ, ಬೆಂಗಳೂರಿನಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ.

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,755
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,188

ಇದನ್ನು ಓದಿ: ಉತ್ತರ ಕನ್ನಡದಲ್ಲಿ 1.70 ರೂ. ಇಳಿಕೆಯಾದ ಪೆಟ್ರೋಲ್‌ ಬೆಲೆ: ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್‌ ದರ ಹೀಗಿದೆ..

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,040
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,504

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,550
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,880

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,75,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,18,800

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,550 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,250, ರೂ. 47,500, ರೂ. 47,500 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,650 ರೂ. ಆಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದ ಎಲ್ಲ ಕಡೆ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಆಗಾಗ ಬೆಲೆಯಲ್ಲಿ ಎರಿಳಿತ ಉಂಟಾಗುತ್ತಿರುತ್ತದೆ. ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಕಡಿಮೆಯಾದಂತೆ ಬೆಳ್ಳಿ ದರದಲ್ಲೂ ಏರಿಳಿತ ಕಾಣುತ್ತದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದಲ್ಲಿ ಬೆಳ್ಳಿ ದರ ಏರಿಕೆಯಾದಂತೆ, ರಾಜ್ಯ ರಾಜಧಾನಿ ಅಂದರೆ ಬೆಂಗಳೂರಿನಲ್ಲಿ ಬೆಳ್ಳಿ ದರದಲ್ಲೂ ಸಹ ಹೆಚ್ಚಳ ಕಂಡಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 632, ರೂ. 6,320 ಹಾಗೂ ರೂ. 63,200 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,200 ಆಗಿದ್ದರೆ, ಮುಂಬೈನಲ್ಲಿ ರೂ. 57,700 ಹಾಗೂ ಕೋಲ್ಕತ್ತದಲ್ಲೂ ರೂ. 57,700 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 57,700 ಇದೆ.