Asianet Suvarna News Asianet Suvarna News

ಕ್ರಿಸ್ಮಸ್‌ ದಿನ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದಿನ ಚಿನ್ನ, ಬೆಳ್ಳಿ ದರ ವಿವರ ಹೀಗಿದೆ..

ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

gold and silver price december 25th 2022 in karnataka ash
Author
First Published Dec 25, 2022, 10:38 AM IST

Gold Rate on December 25th 2022: ದೇಶದಲ್ಲಿ ಆಭರಣ (Jewellery) ಪ್ರಿಯರ ಸಂಖ್ಯೆ ಹೆಚ್ಚಿದ್ದು, ಮಹಿಳೆಯರ ಪೈಕಿ ಅಂತೂ ಬಹುತೇಕರು ಬಂಗಾರದ (Gold) ಪ್ರಿಯರು. ಇನ್ನು, ಚಿನ್ನ , ಬೆಳ್ಳಿ (Silver) ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಇನ್ನು, ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ (Gold), ಬೆಳ್ಳಿ (Silver) ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇಂದು ದೇಶದಲ್ಲಿ (India) ಬಂಗಾರದ ದರ ಮತ್ತಷ್ಟು ಏರಿಕೆಯಾಗಿದ್ದು, ಅದೇ ರೀತಿ ಬೆಳ್ಳಿಯ ಬೆಲೆ ಹೆಚ್ಚಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಇದನ್ನು ಓದಿ: Petrol, Diesel Price Today: ಯಾದಗಿರಿಯಲ್ಲಿ ಇಳಿಕೆಯಾದ, ಉತ್ತರ ಕನ್ನಡದಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ

ಒಂದು ಗ್ರಾಂ ಚಿನ್ನ (1GM)

  • 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,990
  • 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,441

ಎಂಟು ಗ್ರಾಂ ಚಿನ್ನ (8GM)

  • 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 39,920
  • 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,528

ಹತ್ತು ಗ್ರಾಂ ಚಿನ್ನ (10GM)

  • 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 49,900
  • 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 54,410

ನೂರು ಗ್ರಾಂ ಚಿನ್ನ (100GM)

  • 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,99,000
  • 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,44,100

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ.     49,900 ರೂ. ಆಗಿದ್ದು, ಶನಿವಾರಕ್ಕಿಂತ ಬೆಲೆ ಅಧಿಕವಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 50,790, ರೂ. 49,850, ರೂ. 49,850 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಭಾನುವಾರ 50,000 ರೂ. ಆಗಿದ್ದು, ಹಲವೆಡೆ ನಿನ್ನೆಗಿಂತ ಬೆಲೆ ಜಾಸ್ತಿಯಾಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಕ್ರಿಸ್ಮಸ್‌ ದಿನ ಬೆಳ್ಳಿ ದರ ಮತ್ತೆ ಗಗನಕ್ಕೇರಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಅದರಂತೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 740, ರೂ. 7,400 ಹಾಗೂ ರೂ. 74,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 71,100, ಕೋಲ್ಕತ್ತದಲ್ಲಿ ರೂ. 71,100 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಇಂದಿನ ಬೆಳ್ಳಿ ದರ ರೂ. 71,100 ಆಗಿದ್ದು, ಹಲವೆಡೆ ನಿನ್ನೆಗಿಂತ ದರ ಗಗನಕ್ಕೇರಿದೆ.

Follow Us:
Download App:
  • android
  • ios