ನವದೆಹಲಿ(ಸೆ.25): ಕಳೆದ ಕೆಲವು ದಿನಗಳಿಂದ ಇಳಿಕೆಯತ್ತ ಮುಖ ಮಾಡಿದ್ದ ಚಿನ್ನ, ಬೆಳ್ಳಿ ದರದಲ್ಲಿ ಇಂದು ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ನಿರಾಶೆ ಮೂಡಿಸಿದೆ.

ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಚಿನ್ನದ ದರದಲ್ಲಿ ಇಂದು 37 ರೂ. ಏರಿಕೆ ಕಂಡಿದ್ದು, 10 ಗ್ರಾಂ ಚಿನ್ನಕ್ಕೆ 38,145 ರೂ. ಆಗಿದೆ. 

ಅದರಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಶೇ.0.50ರಷ್ಟು ಏರಿಕೆ ಕಂಡಿದ್ದು, ಪ್ರತಿ ಔನ್ಸ್’ಗೆ 1,553 ಡಾಲರ್ ಆಗಿದೆ.

ಇನ್ನು ಬೆಳ್ಳಿ ಬೆಲೆಯಲ್ಲೂ ಗಣನೀಯ ಏರಿಕೆ ಕಂಡಿದ್ದು, ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 179 ರೂ. ಹೆಚ್ಚಾಗಿ ಇದೀಗ 48,201 ರೂ. ಆಗಿದೆ.