Asianet Suvarna News Asianet Suvarna News

Gold Silver Price Today: ವೀಕೆಂಡ್‌ನಲ್ಲಿ ಚಿನ್ನ ಕೊಳ್ಳೋ ಪ್ಲ್ಯಾನ್‌ ಇದ್ಯಾ..? ನಿಮಗಿಲ್ಲಿದೆ ಗುಡ್‌ ನ್ಯೂಸ್‌..!

ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

gold and silver price november 19th 2022 in karnataka ash
Author
First Published Nov 19, 2022, 11:39 AM IST

Gold Rate on November 19th 2022: ದೇಶದಲ್ಲಿ ಹಲವು ದಿನಗಳಿಂದ ಚಿನ್ನ (Gold), ಬೆಳ್ಳಿ (Silver) ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ದೇಶದಲ್ಲಿ ಶುಭ ಸಮಾರಂಭಗಳ ಸಂಖ್ಯೆ ಹೆಚ್ಚಿದ್ದು, ಈ ಹಿನ್ನೆಲೆ ಆಭರಣಗಳ (Jewellery) ಖರೀದಿ ಸಹ ಹೆಚ್ಚಿರುತ್ತದೆ. ಹಾಗೂ, ಮಹಿಳೆಯರು ಸಾಮಾನ್ಯವಾಗಿ ಆಭರಣ ಪ್ರಿಯರಾಗಿದ್ದು, ಈ ಹಿನ್ನೆಲೆ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಅಲ್ಲದೆ, ಚಿನ್ನ, ಬೆಳ್ಳಿ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಅರಳುತ್ತದೆ. ಈ ಹಿನ್ನೆಲೆ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ.  Aದರೆ, ಇತ್ತೀಚೆಗೆ ಕೆಲ ದಿನಗಳಿಂದ ಬಂಗಾರದ ಮೌಲ್ಯ ಹೆಚ್ಚಾಗುತ್ತಲೇ ಇದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಹಲವು ದಿನಗಳ ಬಳಿಕ ಇಂದು ದೇಶದಲ್ಲಿ ಬಂಗಾರದ ದರ ಇಳಿಕೆಯಾಗಿದೆ, ಅದೇ ರೀತಿ ಆದರೆ ಬೆಳ್ಳಿಯ ಬೆಲೆ ಸಹ ಕುಸಿತ ಕಂಡಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರ ಹೆಚ್ಚಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ..

ಇದನ್ನು ಓದಿ: Petrol, Diesel Price Today: ಉಡುಪಿಯಲ್ಲಿ ಇಳಿಕೆಯಾದ, ದಾವಣಗೆರೆಯಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ
 

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,865
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,307

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,920
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 42,456

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,650
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 53,070

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,86,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,30,700

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ.    48,650 ರೂ. ಆಗಿದ್ದು, ನಿನ್ನೆಗಿಂತ ಬೆಲೆಯಲ್ಲಿ ಇಳಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 49,250, ರೂ. 48,600, ರೂ. 48,600 ಇದ್ದು, ನಿನ್ನೆಗಿಂತ ದರ ಇಳಿಕೆಯಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಶನಿವಾರ 48,800 ರೂ. ಆಗಿದ್ದು, ನಿನ್ನೆಯ ದರಕ್ಕಿಂತ ಕಡಿಮೆಯಾಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದರೆ, ಬೆಂಗಳೂರು, ಚೆನ್ನೈನಲ್ಲಿ ಬೆಲೆ ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರದಲ್ಲಿ ಕುಸಿತ ಕಂಡಿದ್ದು, ಅದೇ ರೀತಿ ಬೆಳ್ಳಿ ದರದಲ್ಲೂ ಕುಸಿತ ಕಂಡಿದೆ. ಆದರೆ, ಬೆಂಗಳೂರು, ಚೆನ್ನೈನಲ್ಲಿ ಬೆಲೆ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 675, ರೂ. 6,750 ಹಾಗೂ ರೂ. 67,500 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 67,500 ಆಗಿದ್ದು, ದರ ಏರಿದ್ದರೆ, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 60,900, ಕೋಲ್ಕತ್ತದಲ್ಲಿ ರೂ. 60,900 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 60,900 ಆಗಿದ್ದು, ನಿನ್ನೆಗಿಂತ ಬೆಲೆ ಕುಸಿತ ಕಂಡಿದೆ..

Follow Us:
Download App:
  • android
  • ios