Asianet Suvarna News Asianet Suvarna News

Gold Silver Price Today: ಮತ್ತೆ ತುಟ್ಟಿಯಾಯ್ತು ಬಂಗಾರದ ಬೆಲೆ: ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

gold and silver price november 27th 2022 in karnataka ash
Author
First Published Nov 27, 2022, 10:54 AM IST

Gold Rate on November 27th 2022: ಮಹಿಳೆಯರು ಸಾಮಾನ್ಯವಾಗಿ ಆಭರಣ  (Jewellery) ಪ್ರಿಯರಾಗಿದ್ದು, ಈ ಹಿನ್ನೆಲೆ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಇನ್ನು, ಇತ್ತೀಚೆಗೆ ಬಂಗಾರ (Gold), ಬೆಳ್ಳಿ (Silver) ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಬಂಗಾರದ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಅರಳುತ್ತದೆ. ಈ ಹಿನ್ನೆಲೆ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇಂದು ದೇಶದಲ್ಲಿ ಬಂಗಾರದ ದರ ಅಲ್ಪ ಏರಿಕೆ ಕಂಡಿದ್ದು, ಆದರೆ ಬೆಳ್ಳಿಯ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಇದನ್ನು ಓದಿ: Petrol, Diesel Price Today: ಭಾನುವಾರ ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ವಿವರ ಹೀಗಿದೆ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,861
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,303

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,888
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 42,424

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,610
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 53,030

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,86,100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,30,300

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ.    48,610 ರೂ. ಆಗಿದ್ದು, ನಿನ್ನೆಗಿಂತ ದರ ಹೆಚ್ಚಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 49,260, ರೂ. 48,560, ರೂ. 48,560 ಇದ್ದು, ನಿನ್ನೆಗಿಂತ ಬೆಲೆ ಹೆಚ್ಚಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಭಾನುವಾರ 48,710 ರೂ. ಆಗಿದ್ದು, ನಿನ್ನೆಯ ದರಕ್ಕಿಂತ ಹೆಚ್ಚಾಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರದಲ್ಲಿ ಏರಿಕೆಯಾಗಿದ್ದರೂ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 675, ರೂ. 6,750 ಹಾಗೂ ರೂ. 67,500 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 67,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 61,800, ಕೋಲ್ಕತ್ತದಲ್ಲಿ ರೂ. 61,800 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 61,800 ಆಗಿದ್ದು, ನಿನ್ನೆ ಸಹ ಇಷ್ಟೇ ದರ ಇತ್ತು.

Follow Us:
Download App:
  • android
  • ios