Asianet Suvarna News Asianet Suvarna News

Gold Silver Price Today: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ದೇಶದಲ್ಲಿ ಇಳಿಕೆಯಾದ ಬೆಳ್ಳಿ ದರ

ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
 

gold and silver price november 28th 2022 in karnataka ash
Author
First Published Nov 28, 2022, 11:09 AM IST

Gold Rate on November 28th 2022: ಇತ್ತೀಚೆಗೆ ಬಂಗಾರ (Gold), ಬೆಳ್ಳಿ (Silver) ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಇನ್ನು, ಮಹಿಳೆಯರು ಸಾಮಾನ್ಯವಾಗಿ ಆಭರಣ  (Jewellery) ಪ್ರಿಯರಾಗಿದ್ದು, ಈ ಹಿನ್ನೆಲೆ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಹಾಗೆ, ಬಂಗಾರದ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಅರಳುತ್ತದೆ. ಈ ಹಿನ್ನೆಲೆ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇಂದು ದೇಶದಲ್ಲಿ ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಆದರೆ ಬೆಳ್ಳಿಯ ಬೆಲೆ ಇಳಿಕೆಯಾಗಿದೆ. ಆದರೆ, ಬೆಂಗಳೂರಲ್ಲಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಇದನ್ನು ಓದಿ: Petrol, Diesel Price Today: ರಾಯಚೂರಿನಲ್ಲಿ ಇಳಿಕೆ, ಚಿತ್ರದುರ್ಗದಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ದರ

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,861
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,303

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,888
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 42,424

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,610
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 53,030

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,86,100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,30,300

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ.    48,610 ರೂ. ಆಗಿದ್ದು, ನಿನ್ನೆ ಸಹ ಇಷ್ಟೇ ಬೆಲೆ ಇತ್ತು ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 49,210, ರೂ. 48,560, ರೂ. 48,560 ಇದ್ದು, ಚೆನ್ನಯ ಹೊರತುಪಡಿಸಿ ಉಳಿದೆಡೆ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಸೋಮವಾರ 48,710 ರೂ. ಆಗಿದ್ದು, ನಿನ್ನೆ ಸಹ ಇಷ್ಟೇ ದರ ಇತ್ತು.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಂಗಳೂರು, ಚೆನ್ನೈ ಹೊರತುಪಡಿಸಿ ಉಳಿದೆಡೆ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಬೆಂಗಳೂರು, ಚೆನ್ನೈ ಬಿಟ್ಟು ಬಹುತೇಕ ಪ್ರಮುಖ ನಗರಗಳಲ್ಲಿ ಬೆಲೆ ಕಡಿಮೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 675, ರೂ. 6,750 ಹಾಗೂ ರೂ. 67,500 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 67,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 61,500, ಕೋಲ್ಕತ್ತದಲ್ಲಿ ರೂ. 61,500 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 61,500 ಆಗಿದ್ದು, ನಿನ್ನೆಗಿಂತ ದರ ಕಡಿಮೆಯಾಗಿದೆ.

Follow Us:
Download App:
  • android
  • ios