Asianet Suvarna News Asianet Suvarna News

Gold Silver Price Today: ಆಭರಣ ಪ್ರಿಯರಿಗೆ ಶುಭ ಸುದ್ದಿ: ಅಂತೂ ಇಳಿಕೆಯಾಯ್ತು ಬಂಗಾರದ ಬೆಲೆ..!

ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

gold and silver price november 29th 2022 in karnataka ash
Author
First Published Nov 29, 2022, 12:52 PM IST

Gold Rate on November 29th 2022: ದೇಶದಲ್ಲಿ ಜನಸಂಖ್ಯೆ ಹೆಚ್ಚಿದಂತೆ ಸುಭ ಸಮಾರಂಭಗಳ ಸಂಖ್ಯೆಯೂ ಹೆಚ್ಚಿರುತ್ತದೆ. ಇನ್ನು, ಮಹಿಳೆಯರು ಸಾಮಾನ್ಯವಾಗಿ ಆಭರಣ  (Jewellery) ಪ್ರಿಯರಾಗಿದ್ದು, ಈ ಹಿನ್ನೆಲೆ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಹಾಗೆ, ಬಂಗಾರದ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಅರಳುತ್ತದೆ. ಈ ಹಿನ್ನೆಲೆ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ (Gold), ಬೆಳ್ಳಿ (Silver) ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇಂದು ದೇಶದಲ್ಲಿ (India) ಬಂಗಾರದ ದರ ಇಳಿಕೆಯಾಗಿದ್ದು, ಆದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಇದನ್ನು ಓದಿ: Petrol, Diesel Price Today: ಚಿತ್ರದುರ್ಗದಲ್ಲಿ ಇಳಿಕೆ, ಉತ್ತರ ಕನ್ನಡದಲ್ಲಿ ಏರಿಕೆಯಾದ ಪೆಟ್ರೋಲ್‌, ಡೀಸೆಲ್‌ ದರ

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,851
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,293

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,808
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 42,344

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,510
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,930

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,85,100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,29,300

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ.    48,510 ರೂ. ಆಗಿದ್ದು, ನಿನ್ನೆಗಿಂತ ಬೆಲೆಯಲ್ಲಿ ಇಳಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 49,160, ರೂ. 48,460, ರೂ. 48,460 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಮಂಗಳವಾರ 48,610 ರೂ. ಆಗಿದ್ದು, ನಿನ್ನೆಗಿಂತ ದರ ಕಡಿಮೆಯಾಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರದಲ್ಲಿ ಕಡಿಮೆಯಾಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 681, ರೂ. 6,810 ಹಾಗೂ ರೂ. 68,100 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 68,100 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 61,400, ಕೋಲ್ಕತ್ತದಲ್ಲಿ ರೂ. 61,400 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 61,400 ಆಗಿದ್ದು, ನಿನ್ನೆಯ ದರ ಸಹ ಇಷ್ಟೇ ಇತ್ತು.

Follow Us:
Download App:
  • android
  • ios