ಏಕಾಏಕಿ ಕುಸಿದ ಚಿನ್ನ ಮತ್ತು ಬೆಳ್ಳಿದರ| ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಕುಸಿತ| ಸ್ಥಳೀಯ ವರ್ತಕರಿಂದ ಬೇಡಿಕೆ ಕಡಿಮೆ| 10 ಗ್ರಾಂ ಚಿನ್ನದ ಬೆಲೆಯಲ್ಲಿ 115 ರೂ. ಇಳಿಕೆ| ಬೆಳ್ಳಿ ಬೆಲೆಯಲ್ಲೂ ಗಮನಾರ್ಹ ಇಳಿಕೆ| ಒಂದು ಕೆಜೆ ಬೆಳ್ಳಿ ಬೆಲೆಯಲ್ಲಿ 130 ರೂ. ಇಳಿಕೆ
ನವದೆಹಲಿ(ಜ.24): ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತ ಹಾಗೂ ಸ್ಥಳೀಯ ವರ್ತಕರಿಂದ ಬೇಡಿಕೆ ಕಡಿಮೆಯಾದ ಕಾರಣ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇಂದಿನ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆಯಲ್ಲಿ 115 ರೂ. ಕಡಿಮೆಯಾಗಿದೆ. ಹೀಗಾಗಿ ಇಂದಿನ ಚಿನ್ನದ ಬೆಲೆ 33,210 ರೂ. ಆಗಿದೆ.

ಅದೇ ರೀತಿ ಬೆಳ್ಳಿ ಬೆಲೆಯೂ ಇಳಿಮುಖವಾಗಿದ್ದು ಒಂದು ಕೆ.ಜಿ ಬೆಳ್ಳಿ ಬೆಲೆ 40,160 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 130 ರೂ. ಇಳಿಕೆಯಾಗಿದೆ.
