ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ: ಇಂದಿನ ಆಭರಣ ದರ..!
ಶುರುವಾಯಿತು ಚಿನ್ನದ ಬೆಲೆಯ ಇಳಿಕೆಯ ಪರ್ವ| ಸತತ ಮೂರು ದಿನಗಳಿಂದ ಇಳಿಕೆಯತ್ತ ಮುಖ ಮಾಡಿದ ಚಿನ್ನದ ದರ| ದೇಶೀಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 39,680 ರೂ.| 10 ಗ್ರಾಂ ಚಿನ್ನದ ಬೆಲೆಯಲ್ಲಿ ಇದುವರೆಗೂ 1,600 ರೂ. ಇಳಿಕೆ| ದೇಶೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ಇದೀಗ 46,419 ರೂ.| ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 1,551 ಡಾಲರ್|
ನವದೆಹಲಿ(ಜ.10): ಹೊಸ ವರ್ಷದ ಆರಂಭದಲ್ಲಿ ಏರಿಕೆಯತ್ತ ಮುಖ ಮಾಡಿದ್ದ ಚಿನ್ನ ಹಾಗೂ ಬೆಳ್ಳಿ ದರ, ಎರಡನೇ ವಾರದ ಆರಂಭದಲ್ಲಿ ಇಳಿಕೆಯತ್ತ ಮುಖ ಮಾಡಿರುವುದು ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ.
ಸಂಜೆ ಹೊತ್ತಲ್ಲಿ ಚಿನ್ನದ ಬೆಲೆ: ಕೊಳ್ಳುವ ಮೊದಲು ದರಪಟ್ಟಿ ನೋಡಿ ಇಲ್ಲೇ!
ಮಲ್ಟಿ ಕಮೋಡಿಟಿ ಎಕ್ಸಚೇಂಜ್‌ನಲ್ಲಿ ಚಿನ್ನದ ಬೆಲೆಯಲ್ಲಿ ಶೇ,38ರಷ್ಟು ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ ದೇಶೀಯ ಮಾರುಟ್ಟೆಯಲ್ಲಿ 39,680 ರೂ. ಆಗಿದೆ.
ಸತತ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದ್ದು, 10 ಗ್ರಾಂ ಚಿನ್ನದ ಬೆಲೆಯಲ್ಲಿ ಇದುವರೆಗೂ 1,600 ರೂ. ಇಳಿಕೆ ಕಂಡಿರುವುದು ವಿಶೇಷ.
ಒಟ್ಟು 2 ಸಾವಿರ ರೂ. ಇಳಿದ ಚಿನ್ನ: ಇಂದಿನ ಮಾರಾಟ ದರ..!
ಇನ್ನು ದೇಶೀಯ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆಯಲ್ಲಿ ಶೇ.34ರಷ್ಟು ಇಳಿಕೆ ಕಂಡಿಬಂದಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ಇದೀಗ 46,419 ರೂ. ಆಗಿದೆ.
ಅದರಂತೆ ಇರಾನ್-ಅಮೆರಿಕ ನಡುವಿನ ಯುದ್ಧೋನ್ಮಾದದ ಹೊರತಾಗಿಯೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಶೇ.05ರಷ್ಟು ಇಳಿಕೆ ಕಂಡುಬಂದಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 1,551 ಡಾಲರ್ ಆಗಿದೆ. ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿನ ಇಳಿಕೆ ದೇಶೀಯ ಮಾರುಕಟ್ಟೆಯಲ್ಲಿ ಹೊಸ ಚೈತನ್ಯ ತುಂಬಿರುವುದು ಸತ್ಯ.
ಜನವರಿ 10ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ