ನವದೆಹಲಿ(ಡಿ.10): ಗಗನಕ್ಕೇರಿದ್ದ ಈರುಳ್ಳಿ ಬೆಲೆ ಇದೀಗ ಇಳಿಕೆಯತ್ತ ಮುಖ ಮಾಡಿದೆ. ಈ ಮಧ್ಯೆ ಮೂರು ದಿನಗಳಲ್ಲಿ ಒಟ್ಟು ಎರಡು ಬಾರಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲೂ ಗಮನಾರ್ಹ ಇಳಿಕೆ ಕಂಡುಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ಮೂಡಿಸಿದೆ. 

ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಚಿನ್ನದ ಬೆಲೆಯಲ್ಲಿ ಶೇ.0.19ರಷ್ಟು ಇಳಿಕೆ ಕಂಡಿದೆ. ಈ ಮೂಲಕ 10 ಗ್ರಾಂ ಚಿನ್ನದ ಬೆಲೆ ಇದೀಗ 38,035 ರೂ. ಆಗಿದೆ.

ಶುರುವಾಯಿತು ಇಳಿಕೆಯ ಪರ್ವ: ಬಂಗಾರದ ಬೆಲೆ ತುಂಬ ಅಪೂರ್ವ!

ಇದೇ ವೇಳೆ ಬೆಳ್ಳಿ ಬೆಲೆಯಲ್ಲೂ ಗಮನಾರ್ಹ ಇಳಿಕೆ ಕಂಡಿದ್ದು, ಒಟ್ಟು ಶೇ.0.30ರಷ್ಟು ಇಳಿಕೆ ದಾಖಲಾಗಿದೆ. ಈ ಮೂಲಕ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 44,666 ರೂ. ಆಗಿದೆ.

ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ, ಬೆಳ್ಳಿ ಬೆಲೆ ಕೂಡ ಕಡಿಮೆ!

ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಗಮನಾರ್ಹ ಇಳಿಕೆ ಕಂಡಿದ್ದು, ಒಟ್ಟು ಶೇ.0.1ರಷ್ಟು ಇಳಿಕೆ ದಾಖಲಾಗಿದೆ. ಈ ಮೂಲಕ ಒಂದು ಔನ್ಸ್ ಚಿನ್ನದ ಬೆಲೆ 1,478.00 ಡಾಲರ್ ಆಗಿದೆ.

ಚಿನ್ನದ ಬೆಲೆ ಲೆಕ್ಕ ಹಾಕೋದ್ಹೇಗೆ?