ಡಿಸೆಂಬರ್ ಶುಭಾರಂಭ: ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆ!
ಡಿಸೆಂಬರ್ ಆರಂಭದಲ್ಲಿ ಇಳಿಕೆಯತ್ತ ಮುಖ ಮಾಡಿದ ಚಿನ್ನದ ದರ| ಆಭರಣ ಪ್ರೀಯರಲ್ಲಿ ಸಂತಸ ಮೂಡಿಸಿದ ಚಿನ್ನದ ದರ ಇಳಿಕೆ| ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಶೇ. 0.4ರಷ್ಟು ಇಳಿಕೆ ಕಂಡ ಚಿನ್ನದ ದರ| ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇದೀಗ 37,878 ರೂ.| ಬೆಳ್ಳಿ ಬೆಲೆಯಲ್ಲಿ ಒಟ್ಟು ಶೇ.0.74ರಷ್ಟು ಇಳಿಕೆ| ದೇಶೀಯ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆ ಇದೀಗ 44,736 ರೂ.| ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 1,461.15 ಡಾಲರ್|
ನವದೆಹಲಿ(ಡಿ.02): ನವೆಂಬರ್ ತಿಂಗಳಲ್ಲಿ ಹೆಚ್ಚು ಕಡಿಮೆ ಹಾವು-ಏಣಿ ಆಟವಾಡಿದ್ದ ಆಭರಣ ದರ, ಡಿಸೆಂಬರ್ ಆರಂಭದಲ್ಲಿ ಗಮನಾರ್ಹ ಇಳಿಕೆ ಕಾಣುವ ಮೂಲಕ ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ.
ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಚಿನ್ನದ ಬೆಲೆಯಲ್ಲಿ ಶೇ.0.4ರಷ್ಟು ಇಳಿಕೆ ಕಂಡಿದೆ. ಈ ಮೂಲಕ 10 ಗ್ರಾಂ ಚಿನ್ನದ ಬೆಲೆ ಇದೀಗ 37,878 ರೂ. ಆಗಿದೆ.
ಕಳೆದ 10 ದಿನಗಳಲ್ಲಿ ಒಟ್ಟು 8 ದಿನಗಳಲ್ಲಿ ಚಿನ್ನದ ದರ ಇಳಿಕೆಯಾಗಿದ್ದು, ವರ್ಷದ ಆರಂಭದಲ್ಲಿ ಅಂದರೆ ಫಬ್ರವರಿ 2019ಕ್ಕೆ ಹೋಲಿಸಿದರೆ ಒಟ್ಟು 2,100 ರೂ. ಇಳಿಕೆ ಕಂಡಿದೆ.
ಇದೇ ವೇಳೆ ಬೆಳ್ಳಿ ಬೆಲೆಯಲ್ಲೂ ಗಮನಾರ್ಹ ಇಳಿಕೆ ಕಂಡಿದ್ದು, ಒಟ್ಟು ಶೇ.0.71ರಷ್ಟು ಇಳಿಕೆ ದಾಖಲಾಗಿದೆ. ಈ ಮೂಲಕ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 44,736 ರೂ. ಆಗಿದೆ.
ಮತ್ತೆ ಇಳಿಯಿತು ಬೆಳ್ಳಿ, ಬಂಗಾರ: ಕಷ್ಟವಾಗದು ಸಿಂಗಾರ!
ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಗಮನಾರ್ಹ ಇಳಿಕೆ ಕಂಡಿದ್ದು, ಒಟ್ಟು ಶೇ.0.3ರಷ್ಟು ಇಳಿಕೆ ದಾಖಲಾಗಿದೆ. ಈ ಮೂಲಕ ಒಂದು ಔನ್ಸ್ ಚಿನ್ನದ ಬೆಲೆ 1,461.15 ಡಾಲರ್ ಆಗಿದೆ.
ಚೆಲುವೆಯ ಅಂದದ ಮೊಗಕೆ: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ!
ಡಿಸೆಂಬರ್ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: