ನವದೆಹಲಿ(ಸೆ.05): ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ದರ, ಇಂದು ಕೊಂಚ ಇಳಿಕೆ ಕಾಣುವ ಮೂಲಕ ಆಭರಣ ಪ್ರೀಯರಲ್ಲಿ ಸಂತಸ ಮೂಡಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಇಳಿಕೆ ಕಂಡ ಪರಿಣಾಮ, ದೇಶೀಯ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ತುಸು ಇಳಿಕೆ ಕಂಡು ಬಂದಿದೆ.

ಅದರಂತೆ ಬೆಂಗಳೂರಿನಲ್ಲಿ ಇಂದಿನ ಚಿನ್ನದ ದರದತ್ತ ಗಮನ ಹರಿಸುವುದಾದರೆ..

10 ಗ್ರಾಂ 22 ಕ್ಯಾರೆಟ್ ಚಿನ್ನ: 36,960 ರೂ. 
10 ಗ್ರಾಂ 24 ಕ್ಯಾರೆಟ್ ಚಿನ್ನ: 40,310 ರೂ.

1 ಕೆಜಿ ಬೆಳ್ಳಿ: 50,500 ರೂ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಶೇ.0.5ರಷ್ಟು ಕುಸಿತ ಕಂಡಿದ್ದು, ಪ್ರತಿ ಔನ್ಸ್’ಗೆ 1.544 ಯುಎಸ್ ಡಾಲರ್ ಆಗಿದೆ.  ಇದೇ ಅಕ್ಟೋಬರ್’ನಲ್ಲಿ ಅಮೆರಿಕ ಮತ್ತು ಚೀನಾ ನಡುವೆ ವ್ಯಾಪಾರ ಪುನರಾರಂಭಗೊಳ್ಳಲಿದ್ದು,  ಚಿನ್ನದ ದರದಲ್ಲಿ ವ್ಯತ್ಯಾಸವಾಗುವ ಸಂಭವವಿದೆ.