ಮುಂಬೈ :  ಜಾಗತಿಕವಾಗಿ ನಿರಂತರವಾಗಿ ಹಳದಿ ಲೋಹದ ಬೆಲೆಯಲ್ಲಿ  ಏರಿಳಿತ ಕಂಡು ಬರುತ್ತದೆ.  

ಇದೀಗ ನೀವು ಚಿನ್ನ ಕೊಳ್ಳಬೇಕು ಎಂದುಕೊಂಡಿದ್ದರೆ ನಿಮಗಿದು ಉತ್ತಮ ಸಮಯ.  ಇದೀಗ ಮತ್ತೊಮ್ಮೆ ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ. ಬೇಡಿಕೆಯಲ್ಲಿ ಕುಸಿತ ಕಂಡು ಬಂದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿಯೂ ಕೂಡ ಇಳಿಕೆಯಾಗಿದೆ. 

10 ಗ್ರಾಂ ಚಿನ್ನದ ಬೆಲೆಯಲ್ಲಿ ಶೇ.0.8ರಷ್ಟು ಇಳಿಮುಖವಾಗಿದೆ. ಇದರಿಂದ 10 ಗ್ರಾಂ ಚಿನ್ನದ ಬೆಲೆ 29,934 ರು.ನಷ್ಟಾಗಿದೆ. 

ಚಿನ್ನದ ಮಾರುಕಟ್ಟೆಯ ವ್ಯವಹಾರದಲ್ಲಿ ಏರಿಳಿತ ಕಂಡು ಬಂದಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. ಕಳೆದ ಸೋಮವಾರವಷ್ಟೇ  17 ತಿಂಗಳಲ್ಲೇ ಅತ್ಯಂತ ಕಡಿಮೆ ಪ್ರಮಾಣಕ್ಕೆ ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿತ್ತು.