ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಳಿದ ಚಿನ್ನದ ದರ| ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚಿದ ಪರಿಣಾಮ| ಸ್ಥಳೀಯ ವರ್ತಕರಿಂದ ಚಿನ್ನಕ್ಕೆ ಹೆಚ್ಚಿದ ಬೇಡಿಕೆ| ಸ್ಥಳೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಕೆ| ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿದರ ಎಷ್ಟು?
ಬೆಂಗಳೂರು(ಫೆ.05): ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಹೆಚ್ಚಿದ ಹಿನ್ನೆಲೆಯಲ್ಲಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ.
ಆದರೆ ಇದಕ್ಕೆ ತದ್ವಿರುದ್ದವಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ವರ್ತಕರಿಂದ ಚಿನ್ನಕ್ಕೆ ಬೇಡಿಕೆ ಹೆಚ್ಚಾದ ಪರಿಣಾಮ, ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ.
ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನ ಇಂದಿನ ಬೆಳಗಿನ ವಹಿವಾಟಿನಲ್ಲಿ 10 ಗ್ರಾಂ ಚಿನ್ನದ ಬೆಲೆ ಶೇ.0.06ರಷ್ಟು ಏರಿಕೆಯಾಗಿ 33,486 ರೂ.ಆಗಿದೆ. ಅಲ್ಲದೇ ಒಂದು ಕೆಜಿ ಬೆಳ್ಳಿ ಬೆಲೆ ಶೇ.0.20ರಷ್ಟು ಏರಿಕೆಯಾಗಿ 40,698 ರೂ.ಆಗಿದೆ.
ಕೈಗಾರಿಕಾ ಘಟಕಗಳು ಹಾಗೂ ನಾಣ್ಯ ತಯಾರಕರಿಂದ ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ ಎನ್ನಲಾಗಿದೆ. ಅದರಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಸಾಮರ್ಥ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ದುರ್ಬಲವಾಗುತ್ತಾ ಹೋಗುವುದನ್ನು ಗಮನಿಸಬಹುದು.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ:
22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ-31,250 ರೂ.
22 ಕ್ಯಾರೆಟ್‌ನ 1ಗ್ರಾಂ ಚಿನ್ನದ ಬೆಲೆ-3125 ರೂ.
24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ-33,422 ರೂ.
1 ಕೆಜಿ ಬೆಳ್ಳಿ ಬೆಲೆ- 44,100 ರೂ.
