Asianet Suvarna News Asianet Suvarna News

ಚಿನ್ನ ಖರೀದಿಸಲು ಇದು ಸುಸಮಯ, ಇಂದು ಕೂಡ ಬಂಗಾರ-ಬೆಳ್ಳಿ ಬೆಲೆ ಇಳಿಕೆ!

Share Market ನಲ್ಲಿ ಚಿನ್ನ ಹೂಡಿಕೆಯು ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ.  ಇಂದು ಅಂದರೆ ಡಿಸೆಂಬರ್‌ 6ರಂದು ಚಿನ್ನದ ದರ ಮತ್ತಷ್ಟು ಇಳಿಕೆ ಕಂಡಿದೆ.

gold rate down what is the gold and silver price in your city on 5th december 2023 gow
Author
First Published Dec 6, 2023, 11:14 AM IST

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಕಳೆದ 4 -5 ದಿನಗಳಿಂದ ಚಿನ್ನದ ದರದಲ್ಲಿ ನಿರಂತರ ಇಳಿಕೆಯಾಗಿದೆ. ಹಾಗಿದ್ದರೆ ಇಂದು ದಿಸೆಂಬರ್ 6ರಂದು ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ಇಲ್ಲಿದೆ ಮಾಹಿತಿ.

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5745
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,267

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 45,960
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,136

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 57,450
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 62,670

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  5,74,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,26,700 

ಜಿಯೋ ಏರ್‌ಫೈಬರ್‌ಗೆ ಬೂಸ್ಟರ್ ಪ್ಲಾನ್ ಘೋಷಿಸಿದ ಆಕಾಶ್ ಅಂಬಾನಿ, ಅತ್ಯಂತ ಕಡಿಮೆ ದರಕ್ಕೆ 1000GB ಡೇಟಾ ಲಭ್ಯ!

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,450 ಆಗಿದ್ದರೆ ಚೆನ್ನೈ  58,150 ಮುಂಬೈ 57,450ಹಾಗೂ ಕೋಲ್ಕತ್ತಾದಲ್ಲಿ 57,450ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  57,600 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಫಸ್ಟ್ ಟೈಂ ಶ್ರೀಮಂತರ ಪಟ್ಟಿ ಸೇರಿ ನಾರಾಯಣ ಮೂರ್ತಿ, ಪ್ರೇಮ್‌ಜಿ, ಮಜುಂದಾರ್-ಶಾ ಹಿಂದಿಕ್ಕಿದ ಬೆಂಗಳೂರು ಉದ್ಯಮಿ!

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 782 ರೂ. 7820 ಹಾಗೂ ರೂ. 78,200 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ.  81,000 ಆಗಿದ್ದರೆ,  ಮುಂಬೈನಲ್ಲಿ ರೂ. 78,200 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 78,200 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 78,200 ಆಗಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

Latest Videos
Follow Us:
Download App:
  • android
  • ios