Asianet Suvarna News Asianet Suvarna News

ಹೇಗಿದೆ ಇಂದು ನಿಮ್ಮ ನಗರದಲ್ಲಿ ಬೆಳ್ಳಿ ಬಂಗಾರದ ದರ

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಕಳೆದ 4 -5 ದಿನಗಳಿಂದ ಚಿನ್ನದ ದರದಲ್ಲಿ ನಿರಂತರ ಇಳಿಕೆಯಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...

gold rate falls continuously what is the gold and silver price in your city on October 6th 2023 akb
Author
First Published Oct 6, 2023, 10:43 AM IST | Last Updated Oct 6, 2023, 10:43 AM IST

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಕಳೆದ 4 -5 ದಿನಗಳಿಂದ ಚಿನ್ನದ ದರದಲ್ಲಿ ನಿರಂತರ ಇಳಿಕೆಯಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5250
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5723

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 42,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 45,784

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 52,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 57,230

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  5,25,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,72,300

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 52,500 ಆಗಿದ್ದರೆ ಚೆನ್ನೈ  52,850, ಮುಂಬೈ 52,500 ಹಾಗೂ ಕೋಲ್ಕತ್ತಾದಲ್ಲಿ 52,500 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  52,650 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 690 ರೂ. 6900 ಹಾಗೂ ರೂ. 69,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ.  73,500 ಆಗಿದ್ದರೆ,  ಮುಂಬೈನಲ್ಲಿ ರೂ. 73,000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 70,600 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 70,600 ಆಗಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

Latest Videos
Follow Us:
Download App:
  • android
  • ios