ಚಿನ್ನದ ದರದಲ್ಲಿ ಅಲ್ಪ ಇಳಿಕೆ| ಹಾವು ಏಣಿ ಆಟವಾಡುತ್ತಿದ್ದ ಬಂಗಾರ ದರ ಕೊಂಚ ಇಳಿಕೆ, ಬೆಳ್ಳಿ ಬೆಲೆಯೂ ಕುಸಿತ| ಇಲ್ಲಿದೆ ನೋಡಿ ಅ. 01 ಗೋಲ್ಡ್ ರೇಟ್

ಬೆಂಗಳೂರು(ಅ.01): ಕೊರೋನಾತಂಕ ನಡುವೆ ಚಿನ್ನದ ಬೇಡಿಕೆ ಕಡಿಮೆ ಇದ್ದರೂ ಉದ್ಯಮಗಳು ನೆಲ ಕಚ್ಚಿದ ಪರಿಣಾಮ ಅನೇಕ ಮಂದಿ ಹಳದಿ ಲೋಹದಲ್ಲಿ ಹೂಡಿಕೆ ಮಾಡಿದ್ದರು. ಇದರ ಪರಿಣಾಮವೆಂಬಂತೆ ಬಂಗಾರ ದರ ಮಹಾಮಾರಿ ನಡುವೆಯೂ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು. ಸದ್ಯ ಚಿನ್ನದ ಬೆಲೆಯಲ್ಲಿ ಏರಿಳಿತವಾಗತೊಡಗಿದ್ದ ಚಿನ್ನ ಇಂದು ಕೊಂಚ ಇಳಿಕೆಯಾಗಿದೆ.

Add Asianetnews Kannada as a Preferred SourcegooglePreferred

ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ: ಚಿನ್ನ, ಬೆಳ್ಳಿ ದರವೇನು ಅನ್ನೋರಿಗೆ ಇಲ್ಲಿದೆ ಉತ್ತರ!

ಇಂದು ಗುರುವಾರ ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 130 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಲೆ 47,550 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 130 ರೂಪಾಯಿ ಇಳಿಕೆ ಕಂಡಿದ್ದು, 51,880 ರೂಪಾಯಿ ಆಗಿದೆ. 

ಇನ್ನು ಇತ್ತ ಬೆಳ್ಳಿ ದರದಲ್ಲಿ 300 ರೂ. ಇಳಿಕೆಯಾಗಿ. ಒಂದು ಕೆ. ಜಿ ಬೆಳ್ಳಿಯ ಬೆಲೆ 60,700 ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.