ಬೆಂಗಳೂರು(ನ.02): ಕೊರೋನಾ ಲಾಕ್‌ಡೌನ್ ವೇಳೆ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ್ದ ಚಿನ್ನ, ಬೆಳ್ಳಿ ದರ ಕೊಂಚ ಇಳಿಕೆ ಕಂಡಿದ್ದರೂ ಹಾವೇಣಿ ಆಟ ಮುಂದುವರೆಸಿತ್ತು. ಸದ್ಯ ಕಳೆದೆರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನ ಮತ್ತೆ ಇಳಿಕೆ ಹಾದಿ ಹಿಡಿದಿದೆ. ಇದು ಹಬ್ಬ, ಸಮಾರಂಭಗಳ ಮಧ್ಯೆ ಚಿನ್ನ ಖರೀದಿಸಲು ಪ್ಲಾನ್ ಮಾಡಿದವರಿಗೆ ಕೊಂಚ ನೆಮ್ಮದಿ ನೀಡಿದೆ. ಅಷ್ಟಕ್ಕೂ ಇಂದಿನ ದರವೇನು ಅಂತೀರಾ? ಇಲ್ಲಿದೆ ವಿವರ

ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರ 20 ರೂ. ಕುಸಿದು 47,590 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರದಲ್ಲೂ 20 ರೂ. ಇಳಿಕೆಯಾಗಿ 51,920 ರೂಪಾಯಿ ಆಗಿದೆ. 

ಇನ್ನು ಇತ್ತ ಬೆಳ್ಳಿ ದರ ಕೊಂಚ ಏರಿದೆ. ಒಂದು ಕೆ. ಜಿ. ಬೆಳ್ಳಿ ದರ 1,600ರೂ. ಏರಿಕೆಯಾಗಿ, 61,700ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.