ಏರಿಳಿತವಾಡುತ್ತಿದ್ದ ಚಿನ್ನದ ದರದಲ್ಲಿ ದಾಖಲೆಯ ಕುಸಿತ| ಚಿನ್ನ ಖರೀದಿಗೆ ಒಳ್ಳೆಯ ಸಮಯ| ಹೀಗಿದೆ ನೋಡಿ ಡಿಸೆಂಬರ್ 15ರ ಗೋಲ್ಡ್ ರೇಟ್

ಬೆಂಗಳೂರು(ಡಿ.15): ಭಾರತದಲ್ಲಿ ಅತಿ ಹೆಚ್ಚು ಸಡಗರದಿಂದ ಆಚರಿಸಲಾಗುವ ದೀಪಾವಳಿ ಹಬ್ಬ ಕೊನೆಗೊಂಡ ಬಳಿಕ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರ ನಿಧಾನವಾಗಿ ಏರಲಾರಂಭಿಸಿತ್ತು. ಏರಿಳಿತವಾಡುತ್ತಿದ್ದ ಚಿನ್ನ ಗ್ರಾಹಕರನ್ನು ಖರೀದಿಸಬೇಕೋ? ಬೇಡವೋ ಎಂಬ ಗೊಂದಲಕ್ಕೆ ದೂಡಿತ್ತು. ಆದರೀಗ ಏರಿಳಿತವಾಡುತ್ತಿದ್ದ ಚಿನ್ನದ ದರಕ್ಕೆ ಬ್ರೇಕ್ ಬಿದ್ದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ 45,800 ರೂಪಾಯಿ ಆಗಿದೆ.ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 49,960 ರೂಪಾಯಿ ಆಗಿದೆ. ಇನ್ನು ಇತ್ತ ಬೆಳ್ಳಿ ದರದಲ್ಲಿ ಕುಸಿತವಾಗಿದೆ.

ಒಂದು ಕೆ. ಜಿ. ಬೆಳ್ಳಿ ದರದಲ್ಲಿ 600ರೂ ಏರಿಕೆಯಾಗಿ, 63,700ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.