ದೀಪಾವಳಿಗೆ ತೆರೆ| ಹಬ್ಬ ಮುಗಿದ ಬೆನ್ನಲ್ಲೇ ಇಳಿಕೆ ಕಂಡ ಚಿನ್ನ| ಸತತ ಎರಡನೇ ದಿನವೂ ಚಿನ್ನದ ದರ ಇಳಿಕೆ| ಇಲ್ಲಿದೆ ನೋಡಿ ಇಂದಿನ ಗೋಲ್ಡ್ ರೇಟ್ 

ಬೆಂಗಳೂರು(ನ.18) ಭಾರತದಲ್ಲಿ ಅತಿ ಹೆಚ್ಚು ಸಡಗರದಿಂದ ಆಚರಿಸಲಾಗುವ ದೀಪಾವಳಿ ಹಬ್ಬ ಕೊನೆಗೊಂಡಿದೆ. ಹಬ್ಬದ ಮೂಡ್‌ನಲ್ಲಿದ್ದ ಜನರು ಈಗ ಆಫೀಸ್ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕಿದೆ. ರಜೆಯ ಮೂಡ್‌ನಲ್ಲಿದ್ದ ಮಕ್ಕಳು ಮತ್ತೆ ತರಗತಿ, ಪಾಠ ಎಂದು ಓದಿನ ಕಡೆ ಗಮನ ಕೊಡಬೇಕಿದೆ. ಹೀಗಿರುವಾಗ ಬೇಜಾರಾದವರಿಗೆ ಖುಷಿ ಕೊಟ್ಟಿದ್ದು ಮಾತ್ರ ಚಿನ್ನದ ದರ. ದೀಪಾವಳಿಗೂ ಮೊದಲು ಏರುತ್ತಲೇ ಸಾಗಿದ್ದ ಚಿನ್ನ ಕಳೆದೆರಡು ದಿನದಿಂದ ಇಳಿಕೆಯಾಗಲಾರಂಭಿಸಿದೆ. ಹೌದು ಕೊರೋನಾ ನಡುವೆ ಏರಿದ್ದ ಚಿನ್ನದ ರೇಟ್ ಹಬ್ಬ ಮುಗಿಯುತ್ತಿದ್ದಂತೆಯೇ ಕುಸಿದಿದೆ.

Add Asianetnews Kannada as a Preferred SourcegooglePreferred

ಬಿಸ್ಕೆಟ್ ತಿನ್ನೋರಿಗೆ 40 ಲಕ್ಷ ಸ್ಯಾಲರಿ ಕೊಡುತ್ತೆ ಈ ಕಂಪನಿ, ಜೊತೆಗೆ 35 ರಜೆ: ಹೀಗೆ ಅಪ್ಲೈ ಮಾಡಿ!

ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ 300 ರೂ. ಕುಸಿದು 47,300 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರದಲ್ಲೂ 300 ರೂ. ಇಳಿಕೆಯಾಗಿ 51,630 ರೂಪಾಯಿ ಆಗಿದೆ. 

ಇನ್ನು ಇತ್ತ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಒಂದು ಕೆ. ಜಿ. ಬೆಳ್ಳಿ ದರ 64,500ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.