ಬೆಂಗಳೂರು(ನ.19) ಭಾರತದಲ್ಲಿ ಅತಿ ಹೆಚ್ಚು ಸಡಗರದಿಂದ ಆಚರಿಸಲಾಗುವ ದೀಪಾವಳಿ ಹಬ್ಬ ಕೊನೆಗೊಂಡಿದೆ. ದೀಪಾವಳಿಗೂ ಮುನ್ನ ಭಾರೀ ಏರಿಕೆ ಕಂಡಿದ್ದ ಚಿನ್ನದ ದರ ಇಳಿಕೆಯ ಹಾದಿ ಹಿಡಿದಿದ್ದು, ಸತತ ನಾಲ್ಕನೇ ದಿನವೂ ಬೆಲೆ ಕುಸಿದಿದೆ. ಹೌದು ಕೊರೋನಾ ನಡುವೆ ಏರಿದ್ದ ಚಿನ್ನದ ರೇಟ್ ಹಬ್ಬ ಮುಗಿಯುತ್ತಿದ್ದಂತೆಯೇ ಕುಸಿದಿದೆ.

ಬಿಸ್ಕೆಟ್ ತಿನ್ನೋರಿಗೆ 40 ಲಕ್ಷ ಸ್ಯಾಲರಿ ಕೊಡುತ್ತೆ ಈ ಕಂಪನಿ, ಜೊತೆಗೆ 35 ರಜೆ: ಹೀಗೆ ಅಪ್ಲೈ ಮಾಡಿ!

ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ 300 ರೂ. ಕುಸಿದು 47,000 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರದಲ್ಲೂ 290 ರೂ. ಇಳಿಕೆಯಾಗಿ 51,340 ರೂಪಾಯಿ ಆಗಿದೆ. 

ಇನ್ನು ಇತ್ತ ಬೆಳ್ಳಿ ದರದಲ್ಲೂ 1,300ರೂ ಇಳಿಕೆಯಾಗಿದ್ದು,. ಒಂದು ಕೆ. ಜಿ. ಬೆಳ್ಳಿ ದರ 63,200ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.