ಕೊರೋನಾ ನಡುವೆ ಚಿನ್ನದ ಬೇಡಿಕೆ ಕಡಿಮೆ ಇದ್ದರೂ ಏರುತ್ತಿದೆ ಚಿನ್ನದ ಬೆಲೆ| ಕಳೆದೊಂದು ವಾರದಿಂದ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ| ಇಲ್ಲಿದೆ ಸೆ. 21ರ ಗೋಲ್ಡ್‌ ರೇಟ್

 ಬೆಂಗಳೂರು(ಸೆ.21): ಕೊರೋನಾ ನಡುವೆ ಚಿನ್ನದ ಬೇಡಿಕೆ ಕಡಿಮೆ ಇದ್ದರೂ ಉದ್ಯಮಗಳು ನೆಲ ಕಚ್ಚಿದ ಪರಿಣಾಮ ಅನೇಕ ಮಂದಿ ಹಳದಿ ತಾಮ್ರದಲ್ಲಿ ಹೂಡಿಕೆ ಮಾಡಿದ್ದರು. ಇದರ ಪರಿಣಾಮವೆಂಬಂತೆ ಬಂಗಾರ ದರ ಮಹಾಮಾರಿ ನಡುವೆಯೂ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು. ಹೀಗಿದ್ದರೂ ಕಳೆದ ಕೆಲ ದಿನಗಳಿಂದ ಏರಿಕೆ, ಇಳಿಕೆಯಾಗುಡುತ್ತಿದ್ದ ಚಿನ್ನದ ದರ ಗ್ರಾಹಕರನ್ನು ಗೊಂದಲಕ್ಕೀಡು ಮಾಡಿತ್ತು. ಆದರೀಗ ಮತ್ತೆ ಚಿನ್ನದ ಇಳಿಕೆಯಾಗಿದೆ.

Add Asianetnews Kannada as a Preferred SourcegooglePreferred

ಚಿನ್ನ ಖರೀದಿಗೆ ಮುನ್ನ ಇವತ್ತಿನ ದರ ಒಮ್ಮೆ ನೋಡಿ, ಇಲ್ಲಿದೆ ಸೆ. 20ರ ಗೋಲ್ಡ್‌ ರೇಟ್!

ಇಂದು ಸೋಮವಾರ ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 180 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಲೆ 48,950 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 170 ರೂಪಾಯಿ ಇಳಿಕೆ ಕಂಡಿದ್ದು, 53,400 ರೂಪಾಯಿ ಆಗಿದೆ. 

ಇನ್ನು ಇತ್ತ ಬೆಳ್ಳಿ ದರದಲ್ಲೂ 900ರೂ. ಇಳಿಕೆಯಾಗಿದ್ದು, ಒಂದು ಕೆ. ಜಿ ಬೆಳ್ಳಿಯ ಬೆಲೆ 67,000 ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.