ಗಣನೀಯವಾಗಿ ಏರುತ್ತಿದ್ದ ಚಿನ್ನದ ಬೆಲೆ| ಏರಿಕೆಯಾಗಿದ್ದ ಚಿನ್ನ ಬೆಳ್ಳಿ ದರಕ್ಕೆ ಬ್ರೇಕ್| ಇಲ್ಲಿದೆ ನೋಡಿ ಅ. 26ರ ಗೋಲ್ಡ್ ರೇಟ್

ಬೆಂಗಳೂರು(ಅ. 26): ಕೊರೋನಾತಂಕ ನಡುವೆ ಚಿನ್ನದ ಬೇಡಿಕೆ ಕಡಿಮೆ ಇದ್ದರೂ ಉದ್ಯಮಗಳು ನೆಲ ಕಚ್ಚಿದ ಪರಿಣಾಮ ಅನೇಕ ಮಂದಿ ಹಳದಿ ಲೋಹದಲ್ಲಿ ಹೂಡಿಕೆ ಮಾಡಿದ್ದರು. ಇದರ ಪರಿಣಾಮವೆಂಬಂತೆ ಬಂಗಾರ ದರ ಮಹಾಮಾರಿ ನಡುವೆಯೂ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು. ಸದ್ಯ ಚಿನ್ನದ ಬೆಲೆಯಲ್ಲಿ ಏರಿಳಿತವಾಗತೊಡಗಿದ್ದು, ಗ್ರಾಹಕರಲ್ಲೂ ಖರೀದಿಸಬೇಕಾ? ಬೇಡವಾ? ಎಂಬ ಗೊಂದಲದಲ್ಲಿದ್ದರು. ಸದ್ಯ ಏರಿಕೆಯಾಗದೆ ತಟಸ್ಥವಾಗಿದ್ದ ಚಿನ್ನದ ದರ ಇಂದು ಕೂಡಾ ಯಾವುದೇ ಬದಲಾವಣೆ ಕಂಡಿಲ್ಲ. ಈ ಮೂಲಕ ಚಿನ್ ಕೊಳ್ಲೋರಿಗೆ ಕೊಂಚ ಖುಷಿಯಾಗಿದೆ.

Add Asianetnews Kannada as a Preferred SourcegooglePreferred

ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರ 47,000 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 51,270 ರೂಪಾಯಿ ಆಗಿದೆ. 

ಇನ್ನು ಇತ್ತ ಬೆಳ್ಳಿ ದರ ಕೊಂಚ ಕುಸಿದಿದೆ. ಒಂದು ಕೆ. ಜಿ. ಬೆಳ್ಳಿ ದರ 1,000ರೂ. ಕುಸಿದಿದ್ದು, 61,500ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.