Asianet Suvarna News Asianet Suvarna News

ಸತತ ಎರಡನೇ ದಿನವೂ ಕುಸಿದ ಚಿನ್ನ, ಖರೀದಿ ಬಲು ಜೋರು!

ಕಳೆದೆರಡು ದಿನದಲಲ್ಲಿ ದಾಖಲೆಯ ಇಳಿಕೆ ಕಂಡ ಚಿನ್ನದ ದರ| ಬೆಳ್ಳಿ ದರವೂ ಕುಸಿತ| ಇಲ್ಲಿದೆ ನೋಡಿ ಅಕ್ಟೋಬರ್ 29ರ ದರ
 

Gold Rate In Bengaluru 29th Octobrer 2020 in Kannada pod
Author
Bangalore, First Published Oct 29, 2020, 4:52 PM IST

ಬೆಂಗಳೂರು(ಅ. 29): ಕೊರೋನಾತಂಕ ನಡುವೆ ಚಿನ್ನದ ಬೇಡಿಕೆ ಕಡಿಮೆ ಇದ್ದರೂ ಉದ್ಯಮಗಳು ನೆಲ ಕಚ್ಚಿದ ಪರಿಣಾಮ ಅನೇಕ ಮಂದಿ ಹಳದಿ ಲೋಹದಲ್ಲಿ ಹೂಡಿಕೆ ಮಾಡಿದ್ದರು. ಇದರ ಪರಿಣಾಮವೆಂಬಂತೆ ಬಂಗಾರ ದರ ಮಹಾಮಾರಿ ನಡುವೆಯೂ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು. ಸದ್ಯ ಚಿನ್ನದ ಬೆಲೆಯಲ್ಲಿ ಏರಿಳಿತವಾಗತೊಡಗಿದ್ದು, ಗ್ರಾಹಕರಲ್ಲೂ ಖರೀದಿಸಬೇಕಾ? ಬೇಡವಾ? ಎಂಬ ಗೊಂದಲದಲ್ಲಿದ್ದರು. ಸದ್ಯ ಕಳೆದೆರಡು ದಿನದಿಂದ ಚಿನ್ನದ ದರ ಇಳಿಕೆ ಕಂಡಿದ್ದು ಗ್ರಾಹಕರನ್ನು ಹಿಗ್ಗುವಂತೆ ಮಾಡಿದೆ.

ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 350 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಲೆ 47,380 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 370 ರೂಪಾಯಿ ಇಳಿಕೆ ಕಂಡಿದ್ದು, 51,690 ರೂಪಾಯಿ ಆಗಿದೆ. 

ಆದರೆ ಇತ್ತ ಬೆಳ್ಳಿ ದರ ಮಾತ್ರ 10 ರೂ. ಏರಿಕೆಯಾಗಿ. ಒಂದು ಕೆ. ಜಿ ಬೆಳ್ಳಿಯ ಬೆಲೆ 62,410 ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.

Follow Us:
Download App:
  • android
  • ios