Asianet Suvarna News Asianet Suvarna News

Gold Silver Price Today: ದೇಶದಲ್ಲಿ ಹೆಚ್ಚಾದ ಬೆಳ್ಳಿ ದರ: ಚಿನ್ನದ ಬೆಲೆ ಹೀಗಿದೆ ನೋಡಿ..

ಇಂದು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡುತ್ತಿದ್ದೀರಾ. ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

gold silver rate september 5th 2022 in karnataka ash
Author
First Published Sep 5, 2022, 11:10 AM IST

Gold Rate on September 5th, 2022: ಶ್ರಾವಣ ಮಾಸ ಮುಗಿದ ಬಳಿಕ ದೇಶದಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆಯಾಗಿತ್ತು. ಆದರೆ, ಮತ್ತಷ್ಟು ಇಳಿಕೆಯ ನಿರೀಕ್ಷೆಯಲ್ಲಿದ್ದ ಆಭರಣ ಪ್ರಿಯರಿಗೆ ಶಾಕ್‌ ಕಾದಿದೆ. ಏಕೆಂದರೆ, ಕಳೆದ ಕೆಲ ದಿನಗಳಿಂದ ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ದರ ಮತ್ತಷ್ಟು ಹೆಚ್ಚಾಗಿದೆ. ಇನ್ನು, ನೀವು ಇಂದು ಬಂಗಾರ, ಬೆಳ್ಳಿ ಆಭರಣಗಳನ್ನು ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ (Bengaluru) ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ನೋಡೋಣ ಬನ್ನಿ..

ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದಿನ ಬೆಲೆ ವಿವರ ಹೀಗಿದೆ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,670
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,094

Petrol, Diesel Price Today: ಬೀದರ್‌ನಲ್ಲಿ ಇಳಿಕೆಯಾದ ಇಂಧನ ದರ: ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ನೋಡಿ..

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,360
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,752

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,700
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,940

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,67,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,09,400

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,700 ಆಗಿದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,220, ರೂ. 46,650, ರೂ.  46,650 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸೋಮವಾರ ಚಿನ್ನದ ಬೆಲೆ 46,800 ರೂ. ಆಗಿದ್ದು, ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದ ಹಲವು ನಗರಗಳಲ್ಲಿ ಇಂದು ಬೆಳ್ಳಿ ದರದಲ್ಲಿ ಏರಿಕೆ ಕಂಡಿದೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 582, ರೂ. 5,820 ಹಾಗೂ ರೂ. 58,200 ಗಳಾಗಿವೆ. ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 58,200 ಆಗಿದ್ದರೆ, ಮುಂಬೈನಲ್ಲಿ ರೂ. 53,220 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 53,220 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 53,220ಗೆ ಹೆಚ್ಚಾಗಿದೆ.

Follow Us:
Download App:
  • android
  • ios