ನವದೆಹಲಿ(ಜೂ.18): 125 ದಿನಗಳಲ್ಲಿ 25 ಸ್ಕೀಮ್‌ಗಳನ್ನು ಜಾರಿಗೊಳಿಸುವುದಾಗಿ ಕೆಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಅಲ್ಲದೇ 50 ಸಾವಿರ ಕೋಟಿ ರೂ ಮೌಲ್ಯದ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ವಲಸೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದೂ ತಿಳಿಸಿದ್ದಾರೆ.

ಜೂನ್ 20ರಂದು ಪಿಎಂ ಮೋದಿ ಗರೀಬ್ ಕಲ್ಯಾಣ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ, ಗರೀಬ್ ಕಲ್ಯಾಣ ರೋಜ್ ಗಾರ್ ಅಭಿಯಾನದಡಿಯಲ್ಲಿ ಕೇಂದ್ರ ಸರ್ಕಾರ ಸುಮಾರು 50 ಸಾವಿರ ಕೋಟಿ ಮೌಲ್ಯದ ಯೋಜನೆ ಕೈಗೆತ್ತಿಕೊಂಡಿದೆ. ಇದರಲ್ಲಿ ದೇಶದ ಸಾವಿರಾರು ವಲಸೆ ಕಾರ್ಮಿಕರಿಗೆ ಉದ್ಯೋಗ ಸಿಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. 

2.8 ಲಕ್ಷ ಮಂದಿಗೆ ಉದ್ಯೋಗ, ರಾಜ್ಯಗಳ ಆದಾಯ ಹೆಚ್ಚಿಸಲು ಮೋದಿ ಮೆಗಾ ಪ್ಲಾನ್!

ಇದಕ್ಕೂ ಮೊದಲು ಕೊರೋನಾ ವೈರಸ್ ಲಾಕ್‌ಡೌನ್‌ನಿಂದ ಕೆಲಸ ಬಿಟ್ಟು ತಮ್ಮ ತವರುನಾಡಿಗೆ ತೆರಳಿರುವ ಸುಮಾರು 25 ಸಾವಿರ ವಲಸೆ ಕಾರ್ಮಿಕರನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ ಎಂದೂ ತಿಳಿಸಿದ್ದಾರೆ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ಮತ್ತು ಒಡಿಶಾದ 116 ಜಿಲ್ಲೆಗಳ 25 ಸಾವಿರ ವಲಸೆ ಕಾರ್ಮಿಕರು ಕೇಂದ್ರ ಸರ್ಕಾರದ ಈ ಅಭಿಯಾನದ ಭಾಗವಾಗಿರಲಿದ್ದಾರೆ ಎಂದು ತಿಳಿಸಿದ್ದಾರೆ. ಹೀಗಾಗಿ ಈ ಯೋಜನೆಯಿಂದ ಕರ್ನಾಟಕಕ್ಕೆ ಯಾವುದೇ ಲಾಭವಿಲ್ಲ ಎಂಬುವುದು ಸ್ಪಷ್ಟ

ಕೇಂದ್ರ ಸರ್ಕಾರದ ಈ ಯೋಜನೆಯಡಿಯಲ್ಲಿ 25 ಸಾವಿರ ವಲಸೆ ಕಾರ್ಮಿಕರು ಆರು ವಿವಿಧ ಕಾಮಗಾರಿ ಯೋಜನೆಗಳಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ವಾರ್ಷಿಕ 125 ದಿನಗಳ ಕಾಲ ಅವರಿಗೆ ಉದ್ಯೋಗ ದೊರೆಯಲಿದೆ ಎಂದು ಹೇಳಲಾಗಿದೆ.