Asianet Suvarna News Asianet Suvarna News

ನಿರ್ಮಾಣ ಹಂತದ ಫ್ಲ್ಯಾಟ್‌ ಜಿಎಸ್‌ಟಿ ಶೇ.5 ಕ್ಕೆ ಇಳಿಕೆ?

ನಿರ್ಮಾಣ ಹಂತದ ಫ್ಲ್ಯಾಟ್‌ ಜಿಎಸ್‌ಟಿ ಶೇ.5ಕ್ಕಿಳಿಯುವ  ನಿರೀಕ್ಷೆ | ಇದೇ ಜನವರಿ 10ರಂದು ಸರಕು-ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿ ಸಭೆ ನಡೆಯಲಿದೆ. | ಈ ಸಭೆಯಲ್ಲಿ ಮಹತ್ತರ ನಿರ್ಧಾರ ಸಾಧ್ಯತೆ 

GST Council  consider 5% GST on under construction flats on Jan 10
Author
Bengaluru, First Published Jan 3, 2019, 11:34 AM IST

ನವದೆಹಲಿ (ಜ. 03):  ಇದೇ ಜನವರಿ 10ರಂದು ಸರಕು-ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿ ಸಭೆ ನಡೆಯಲಿದೆ. ಸಭೆಯಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲ್ಯಾಟ್‌ ಹಾಗೂ ಮನೆಗಳ ಮೇಲೆ ಹೇರಲಾಗುವ ಜಿಎಸ್‌ಟಿಯನ್ನು ಶೇ.12ರಿಂದ ಶೇ.5ಕ್ಕೆ ಇಳಿಸುವ ಸಾಧ್ಯತೆ ಇದೆ.

ಇದೇ ವೇಳೆ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಮೇಲಿನ ಜಿಎಸ್‌ಟಿ ವಿನಾಯಿತಿ ಮಿತಿಯನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಮೇಲಿನ ಜಿಎಸ್‌ಟಿ ವಿನಾಯಿತಿ ಮಿತಿ 20 ಲಕ್ಷ ರು.ಗಳಿಗೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವಿತ್ತ ಸಚಿವ ಅರುಣ್‌ ಜೇಟ್ಲಿ ಹೇಳಿದ್ದರು.

ಕಳೆದ ಡಿ.22ರಂದು ನಡೆದ ಸಭೆಯಲ್ಲಿ ಜಿಎಸ್‌ಟಿ ಮಂಡಳಿಯು 23 ಸರಕುಗಳ ತೆರಿಗೆಯನ್ನು ಶೇ.28ರಿಂದ ಶೇ.18ಕ್ಕೆ ಇಳಿಸಿತ್ತು.

Follow Us:
Download App:
  • android
  • ios