ನವದೆಹಲಿ(ಫೆ.01): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ಮಂಡಿಸಿದ್ದಾರೆ.

ಇನ್ನು ಈ ಬಾರಿಯ ಮಧ್ಯಂತರ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿಲಾಗಿದ್ದು, ಗ್ರಾಮೀಣ ಆರೋಗ್ಯ ಕ್ಷೇತದಲ್ಲಿ ಹಲವು ಕ್ರಾಂತಿಕಾರಕ ಬದಲಾವಣೆಗೆ ಮುನ್ನುಡಿ ಬರೆಯಲಾಗಿದೆ.

​​​​​​ಬಜೆಟ್ ಸಂಬಂಧಿ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖವಾಗಿ  ಜಗತ್ತಿನ ಅತ್ಯಂತ ದೊಡ್ಡ ಸಾರ್ವಜನಿಕ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಭಾರತ್ 50 ಕೋಟಿ ಜನರಿಗೆ ಉಪಯೋಗವಾಗಿದ್ದು, ಈ ವರೆಗೂ 10 ಲಕ್ಷ ರೂ.ವರೆಗೆ ಔಷಧೀಯ ವೆಚ್ಚ ಮಾಡಲಾಗಿದೆ ಎನ್ನಲಾಗಿದೆ. ಆಯುಷ್ಮಾನ್‌ ಭಾರತ್‌ ಯೋಜನೆ ಮೂಲಕ ಬಡವರ 3000 ಕೋಟಿ ರೂ. ಉಳಿತಾಯ ಮಾಡಲಾಗಿದ್ದು, ಜನ ಔಷಧಿ ಕೇಂದ್ರಗಳ ಮೂಲಕ ಅತಿ ಕಡಿಮೆ ದರದಲ್ಲಿ ಜನರಿಗೆ ಔಷಧಿ ಪೂರೈಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಅದರಂತೆ 5.45 ಲಕ್ಷ ಹಳ್ಳಿಗಳು ಬಹಿರ್ದೆಸೆ ಮುಕ್ತ ಎಂದು ಘೋಷಣೆ ಮಾಡಲಾಗಿದ್ದು, ಸ್ವಚ್ಛ ಭಾರತ ಅಭಿಯಾನದ ಯಶಸ್ಸಿಗೆ ಸಚಿವರು ಜನತೆಗೆ ಧನ್ಯವಾದ ಅರ್ಪಿಸಿದರು. 5 ವರ್ಷಗಳಲ್ಲಿ 1 ಕೋಟಿಗೂ ಹೆಚ್ಚು ಮನೆ ನಿರ್ಮಾಣ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಎಂದು ಸಚಿವರು ಹೇಳಿದರು. 

ಶೇ.98 ರಷ್ಟು ಗ್ರಾಮಗಳಲ್ಲಿ ನೈರ್ಮಲ್ಯ ಸಾಧಿಸಲಾಗಿದ್ದು, ಇದೇ ವೇಳೆ ಗೋವುಗಳ ರಕ್ಷಣೆಗಾಗಿ 'ರಾಷ್ಟ್ರೀಯ ಕಾಮಧೇನು ಆಯೋಗ' ರಚಿಸಲಾಗಿದ್ದು, ಯೋಜನೆಗಾಗಿ 75,000 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.