ಆದಾಯ ತೆರಿಗೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.
ನವದೆಹಲಿ, (ಸೆ.24): ಆದಾಯ ತೆರಿಗೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. 2018-19ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಹಾಗೂ ಆಡಿಟ್ ವರದಿ ಸಲ್ಲಿಕೆ ಮಾಡಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಮೊದಲಿಗೆ ಆಗಸ್ಟ್ 30ರ ವರೆಗೆ ಇದ್ದ ಅವಧಿಯನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಆ ದಿನಾಂಕವನ್ನು ಅಕ್ಟೋಬರ್ 15ರ ವರೆಗೆ ವಿಸ್ತರಣೆ ಮಾಡಲಾಗಿದೆ.
Scroll to load tweet…
ತೆರಿಗೆದಾರರ ಮನವಿ ಪುರಸ್ಕರಿಸಿರುವ ಕೇಂದ್ರ ಹಣಕಾಸು ಇಲಾಖೆ, ಆದಾಯ ತೆರಿಗೆ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದು, ಆದಾಯ ತೆರಿಗೆ ತುಂಬದವರು ಸದುಪಯೋಗ ಮಾಡಿಕೊಳ್ಳಬಹುದು.
