ಕರ್ನಾಟಕದಲ್ಲಿ ಹೂಡಿಕೆ ದೇಶಕ್ಕೆ ಲಾಭ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಕರ್ನಾಟಕಕ್ಕೆ ಸರಸ್ವತಿ ಮತ್ತು ಲಕ್ಷ್ಮೀ ದೇವಿ ಕೃಪೆ ಹೆಚ್ಚಿದೆ. ರಾಜ್ಯದಲ್ಲಿ ಜ್ಞಾನ ಪಸರಿಸುವಂಥ ಹಲವು ಶೈಕ್ಷಣಿಕ ಸಂಸ್ಥೆಗಳಿವೆ. ಹಾಗೆಯೇ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಪ್ರಗತಿಗೆ ಅಗತ್ಯವಿರುವ ಕೈಗಾರಿಕೆಗಳು ಸೇರಿ ವಿವಿಧ ಕ್ಷೇತ್ರಗಳನ್ನು ಕರ್ನಾಟಕ ಹೊಂದಿದೆ. ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಕೊಡುಗೆ ಅಪಾರ ಎಂದು ಹೇಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು(ಫೆ.12): ದೇಶದ ಏಕತೆ, ಅಭಿವೃದ್ಧಿ, ಆರ್ಥಿಕ ಬೆಳವಣಿಗೆಗೆ ರಾಜಕೀಯ ಭಿನ್ನಾಭಿಪ್ರಾ ಯಗಳನ್ನು ಬದಿಗೊತ್ತಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲಸ ಮಾಡಬೇಕಿದೆ. ಹಾಗೆಯೇ, ಕರ್ನಾಟಕದಲ್ಲಿ ಮಾಡಲಾ ಗುವ ಹೂಡಿಕೆ ದೇಶದ ಅಭಿವೃದ್ಧಿಗೆ ಪೂರಕವಾದದ್ದಾಗಿದ್ದು, ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘೋಷಿಸಿದರು.
ಬೆಂಗಳೂರು ಅರಮನೆಯಲ್ಲಿ ಆಯೋಜಿ ಸಲಾಗಿರುವ 'ಇನ್ವೆಸ್ಟ್ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿ, ಕರ್ನಾಟಕಕ್ಕೆ ಸರಸ್ವತಿ ಮತ್ತು ಲಕ್ಷ್ಮೀ ದೇವಿ ಕೃಪೆ ಹೆಚ್ಚಿದೆ. ರಾಜ್ಯದಲ್ಲಿ ಜ್ಞಾನ ಪಸರಿಸುವಂಥ ಹಲವು ಶೈಕ್ಷಣಿಕ ಸಂಸ್ಥೆಗಳಿವೆ. ಹಾಗೆಯೇ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಪ್ರಗತಿಗೆ ಅಗತ್ಯವಿರುವ ಕೈಗಾರಿಕೆಗಳು ಸೇರಿ ವಿವಿಧ ಕ್ಷೇತ್ರಗಳನ್ನು ಕರ್ನಾಟಕ ಹೊಂದಿದೆ. ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಕೊಡುಗೆ ಅಪಾರ ಎಂದು ಹೇಳಿದರು.
ಕರ್ನಾಟಕ ದೇಶದ ಕೈಗಾರಿಕೆಯ ಬೆನ್ನೆಲುಬು: ಸಿಎಂ ಸಿದ್ದರಾಮಯ್ಯ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೆಲಸ ಭಾರತದ ಸಮಗ್ರತೆ ಮತ್ತು ಅಭಿವೃದ್ಧಿಗೆ ಪೂರಕವಾಗಿರಬೇಕು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸರ್ಕಾರ ಬರುತ್ತವೆ, ಹೋಗುತ್ತವೆ, ರಾಜ ಕೀಯ ಪಕ್ಷಗಳು ಇರುತ್ತವೆ, ಹೋಗುತ್ತವೆ, ಆದರೆ ದೇಶ ಇರಬೇಕು ಮತ್ತು ಮುನ್ನಡೆಯಬೇಕು ಎಂಬ ಅಭಿಪ್ರಾಯ ಪಟ್ಟಿದ್ದರು. ಅದನ್ನು ಎಲ್ಲರೂ ಅನುಸರಿಸಬೇಕು. ದೇಶದ ಏಕತೆ, ಅಭಿವೃದ್ಧಿ ಮತ್ತು ಆರ್ಥಿಕ ಬೆಳವಣಿಗೆಗಾಗಿ ಭಿನ್ನಾಭಿಪ್ರಾಯಗಳನ್ನು ಮರೆತು ಸರ್ಕಾರಗಳು ಒಟ್ಟಿಗೆ ಕೆಲಸ ಮಾಡಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟರು.
ಕರ್ನಾಟಕದಲ್ಲಿ ಹೂಡಿಕೆ ದೇಶಕ್ಕೆ ಲಾಭ:
ಕರ್ನಾಟಕ ವಿವಿಧತೆಯಲ್ಲಿ ಏಕತೆ ಹೊಂದಿರುವ ರಾಜ್ಯ, ಜಗತ್ತಿನಲ್ಲೇ ಮಾಹಿತಿ ತಂತ್ರಜ್ಞಾನ, ಔಷಧ ಉತ್ಪಾದನೆ, ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿ ಕೊಂಡಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಿದರೆ ಉತ್ತರ ಪ್ರದೇಶ, ಬಿಹಾರದ ಜನರಿಗೆ ಉದ್ಯೋಗ ಸಿಗುತ್ತದೆ, ನೋಯ್ಡಾ, ಕೊಯಮತ್ತೂರಿನ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಆದಾಯ ದೊರೆಯುತ್ತದೆ. ಒಟ್ಟಾರೆ ಇನ್ವೆಸ್ಟ್ ಕರ್ನಾಟಕ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಅಲ್ಲದೆ, 2047ರ ವಿಕಸಿತ ಭಾರತದ ಗುರಿಗೆ ಸಹಕಾರಿಯಾಗಲಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.
ಉದ್ಯಮಿ ಆನಂದ್ ಮಹೀಂದ್ರಾಗೆ ಕೊಡಗಿನ ಸವಿನೆನಪು; 40 ಸಾವಿರ ಕೋಟಿ ಹೂಡಿಕೆ ಭರವಸೆ!
ದಾರ್ಶನಿಕರನ್ನು ನೆನೆದ ರಾಜನಾಥ್
ತಮ್ಮ ಭಾಷಣದದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕರ್ನಾಟಕದ ದಾರ್ಶನಿಕರನ್ನು ನೆನೆದರು. ಅಲ್ಲಮಪ್ರಭು, ಅಕ್ಕಮಹಾ ದೇವಿ, ಕನಕದಾಸರು, ಪುರಂದರ ದಾಸರಂತಹ ಮಹಾನ್ ವ್ಯಕ್ತಿಗಳು ಜನಿಸಿದ ನಾಡು ಕರ್ನಾಟಕ ಎಂದರು.