ಕಳೆದ ವರ್ಷ ಭಾರತ 30.5 ಲಕ್ಷ ಕೋಟಿ ರು. ಮೌಲ್ಯದ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡಿ ಸಾರ್ವಕಾಲಿಕ ದಾಖಲೆ ಬರೆದಿದೆ ಎಂಬ ಸುದ್ದಿಯ ಬೆನ್ನಲ್ಲೇ ಇದೀಗ ಅತಿಹೆಚ್ಚು ವಸ್ತುಗಳನ್ನು ರಫ್ತು ಮಾಡಿದ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 3ನೇ ಸ್ಥಾನದಲ್ಲಿದೆ ಎಂಬ ಸಂಗತಿ ಬೆಳಕಿಗೆ ಬಂದಿದೆ.

ನವದೆಹಲಿ (ಮಾ.26): ಕಳೆದ ವರ್ಷ ಭಾರತ 30.5 ಲಕ್ಷ ಕೋಟಿ ರು. ಮೌಲ್ಯದ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡಿ ಸಾರ್ವಕಾಲಿಕ ದಾಖಲೆ ಬರೆದಿದೆ ಎಂಬ ಸುದ್ದಿಯ ಬೆನ್ನಲ್ಲೇ ಇದೀಗ ಅತಿಹೆಚ್ಚು ವಸ್ತುಗಳನ್ನು ರಫ್ತು ಮಾಡಿದ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 3ನೇ ಸ್ಥಾನದಲ್ಲಿದೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ನೀತಿ ಆಯೋಗ ಸಿದ್ಧಪಡಿಸಿದ ರಫ್ತು ಸನ್ನದ್ಧತೆ ಸೂಚ್ಯಂಕ-2021ರಲ್ಲಿ ಗುಜರಾತ್‌ ನಂ.1, ಮಹಾರಾಷ್ಟ್ರ ನಂ.2 ಹಾಗೂ ಕರ್ನಾಟಕ ನಂ.3 ಸ್ಥಾನ ಪಡೆದಿವೆ. 

ಈ ರಾಜ್ಯಗಳು 2021-22ನೇ ಸಾಲಿನಲ್ಲಿ ವಿದೇಶಗಳಿಗೆ ಅತಿಹೆಚ್ಚು ಸರಕುಗಳನ್ನು ರಫ್ತು ಮಾಡಿದ ರಾಜ್ಯಗಳಾಗಿವೆ ಎಂದು ವರದಿ ಹೇಳಿದೆ. ರಫ್ತು ಸನ್ನದ್ಧತೆ ಸೂಚ್ಯಂಕವನ್ನು ಇನ್‌ಸ್ಟಿಟ್ಯೂಟ್‌ ಆಫ್‌ ಕಾಂಪಿಟಿಟಿವ್‌ನೆಸ್‌ನ ಜೊತೆಗೂಡಿ ನೀತಿ ಆಯೋಗ ಸಿದ್ಧಪಡಿಸಿದೆ. ವ್ಯಾಪಾರ ನೀತಿ, ವಾಣಿಜ್ಯ ಪರಿಸರ, ರಫ್ತು ಪರಿಸರ ಹಾಗೂ ರಫ್ತು ಸಾಧನೆ ಎಂಬ ನಾಲ್ಕು ಅಂಶಗಳನ್ನು ಪ್ರಮುಖವಾಗಿ ಇಲ್ಲಿ ಪರಿಗಣಿಸಲಾಗಿದೆ. ಜೊತೆಗೆ ರಫ್ತು ಉತ್ತೇಜನಾ ನೀತಿ ಮತ್ತು ಉದ್ದಿಮೆಗಳನ್ನು ನಡೆಸಲು ಇರುವ ವಾತಾವರಣದಂತಹ ಇನ್ನೂ 11 ಅಂಶಗಳನ್ನು ಪರಿಗಣಿಸಲಾಗಿದೆ. 

5 ತಿಂಗಳಲ್ಲಿ ತೈಲ ಕಂಪನಿಗಳಿಗೆ ₹19000 ಕೋಟಿ ಖೋತಾ: ಮೂಡೀಸ್‌

ಈ ಎಲ್ಲ ಅಂಶಗಳಲ್ಲಿ ಒಟ್ಟಾರೆಯಾಗಿ ಗುಜರಾತ್‌ ಸತತ 2ನೇ ವರ್ಷವೂ ನಂ.1 ಸ್ಥಾನ ಪಡೆದಿದೆ. ನಂತರದ ಸ್ಥಾನಗಳನ್ನು ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಹರ್ಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಂಜಾಬ್‌, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಪಡೆದಿವೆ. ಲಕ್ಷದ್ವೀಪ, ಅರುಣಾಚಲ ಪ್ರದೇಶ, ಮಿಜೋರಾಂ, ಲಡಾಖ್‌ ಮತ್ತು ಮೇಘಾಲಯ ಕೊನೆಯ ಸ್ಥಾನಗಳಲ್ಲಿವೆ.

ಶುಕ್ರವಾರ ವರದಿ ಬಿಡುಗಡೆ ಮಾಡಿದ ನೀತಿ ಆಯೋಗ ಉಪಾಧ್ಯಕ್ಷ ರಾಜೀವ್‌ ಕುಮಾರ್‌, ಭಾರತದ ರಫ್ತು ಕ್ಷೇತ್ರ ಕಳೆದ ವರ್ಷ 36% ಬೆಳೆದಿದೆ. ಇದೇ ವೇಳೆ ಜಾಗತಿಕ ಮಟ್ಟದಲ್ಲಿ ರಫ್ತು ಕ್ಷೇತ್ರ 30% ಬೆಳೆದಿದೆ. ಬಹಳ ವರ್ಷಗಳ ನಂತರ ಜಾಗತಿಕ ವ್ಯಾಪಾರದಲ್ಲಿ ಭಾರತದ ಪಾಲು 1.6%ನಿಂದ 1.7%ಗೆ ಏರಿಕೆಯಾಗಿದೆ. ವಾಹನ, ವಿದ್ಯುತ್‌ ಉಪಕರಣ, ಕಬ್ಬಿಣ ಮತ್ತು ಉಕ್ಕಿನಂತಹ ವಸ್ತುಗಳು ಇದಕ್ಕೆ ಹೆಚ್ಚು ಕೊಡುಗೆ ನೀಡಿವೆ. ಭಾರತದಿಂದ ರಫ್ತಾದ ವಸ್ತುಗಳಲ್ಲಿ 70% ಮಹಾರಾಷ್ಟ್ರ, ಗುಜರಾತ್‌, ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣ ಈ ಐದು ರಾಜ್ಯಗಳಿಂದ ಆಗಿವೆ ಎಂದು ಹೇಳಿದರು.

ಕಚ್ಚಾತೈಲ ದರ 140 ಡಾಲರ್‌ನಿಂದ 99.84 ಡಾಲರ್‌ಗೆ ಭಾರೀ ಇಳಿಕೆ: ರಷ್ಯಾ-ಉಕ್ರೇನ್‌ ಯುದ್ಧದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ವಾರಗಳಿಂದ ಭಾರೀ ಏರಿಕೆ ಕಂಡಿದ್ದ ಪ್ರತಿ ಬ್ಯಾರೆಲ್‌ ಕಚ್ಚಾ ತೈಲ ದರ ಮಂಗಳವಾರ 99.84 ಡಾಲರ್‌ಗೆ ಇಳಿಕೆಯಾಗಿದೆ. 8 ದಿನದಲ್ಲಿ 40 ಡಾಲರ್‌ನಷ್ಟುಇಳಿದಿದ್ದು ಗಮನಾರ್ಹ. ಇದರಿಂದಾಗಿ, ಕಚ್ಚಾ ವಸ್ತುಗಳ ಬೆಲೆ ಏರಿಕೆ ನಡುವೆಯೂ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದ ತೈಲ ಕಂಪನಿಗಳಿಗೆ ಇದು ಕೊಂಚ ಸಮಾಧಾನ ನೀಡಿದೆ. ಅಲ್ಲದೆ, ಈಗಾಗಲೇ 100 ರು. ದಾಟಿದ್ದ ಪೆಟ್ರೋಲ್‌ ದರ ಭಾರೀ ಏರಿಕೆ ಆಗಬಹುದು ಎಂಬ ಜನರ ಆತಂಕ ದೂರವಾಗಬಹುದು ಎಂದು ಭಾವಿಸಲಾಗಿದೆ.

ರಷ್ಯಾ-ಉಕ್ರೇನ್ ಯುದ್ಧ ಹಿನ್ನೆಲೆ, 2022ನೇ ಸಾಲಿನ ಭಾರತದ GDP ಬೆಳವಣಿಗೆ ಶೇ.4.6ಕ್ಕೆ ಇಳಿಸಿದ ವಿಶ್ವಸಂಸ್ಥೆ

ಯುದ್ಧ ಆರಂಭವಾದ 4 ದಿನದ ನಂತರ ಫೆ.28ರಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ 100 ಡಾಲರ್‌ ಗಿಂತ ಹೆಚ್ಚಾಗಿತ್ತು. ಮಾ.7ರಂದು ಮತ್ತೆ 139 ಡಾಲರ್‌ಗೆ ತಲುಪುವ ಮೂಲಕ 14 ವರ್ಷಗಳ ಗರಿಷ್ಠಕ್ಕೆ ಏರಿಕೆಯಾಗಿತ್ತು. ಆದರೆ ಮಂಗಳವಾರ ಏಕಾಏಕಿ ಶೇ.7ರಷ್ಟುದರ ತಗ್ಗಿದೆ. ಭಾರತದಲ್ಲಿ ಕಳೆದ 131 ದಿನಗಳಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಸ್ಥಿರವಾಗಿದೆ. ದೆಹಲಿ-ಜೈಪುರ ಎಲೆಕ್ಟ್ರಿಕ್‌ ಹೆದ್ದಾರಿ ನನ್ನ ಕನಸು :ಗಡ್ಕರಿ: ದೆಹಲಿ ಮತ್ತು ಜೈಪುರದಲ್ಲಿ ಭಾರತದ ಮೊಟ್ಟಮೊದಲ ಎಲೆಕ್ಟ್ರಿಕ್‌ ಹೆದ್ದಾರಿ ನಿರ್ಮಾಣ ಮಾಡುವುದು ನನ್ನ ಕನಸು ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಮಂಗಳವಾರ ಹೇಳಿದ್ದಾರೆ.