ಕರ್ನಾಟಕ ಬಜೆಟ್ 2020: ಯಾವುದು ಏರಿಕೆ? ಯಾವುದು ಇಳಿಕೆ?

ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು (ಗುರುವಾರ) ಒಟ್ಟು 2,37,893 ಕೋಟಿ ರೂ. ಗಾತ್ರದ ರಾಜ್ಯ ಬಜೆಟ್ ಮಂಡಿಸಿದರು. ಬಜೆಟ್‌ನಿಂದ ಯಾವುದು ಏರಿಕೆ? ಯಾವುದು ಇಳಿಕೆಯಾಗಿದೆ ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

karnataka budget 2020 Here Is what costlier and cheaper Items

ಬೆಂಗಳೂರು, (ಮಾ.05):  1 ಗಂಟೆ 40 ನಿಮಿಷದಲ್ಲಿ ರಾಜ್ಯದ ಆಯವ್ಯಯ ಮಂಡಿಸುವ ಮೂಲಕ ಯಡಿಯೂರಪ್ಪ ಅವರು ಇತಿಹಾಸದಲ್ಲಿ ಅತಿ ಕಡಿಮೆ ಅವಧಿಗೆ ಬಜೆಟ್ ಓದಿದ ಸಿಎಂ ಎನ್ನುವ ದಾಖಲೆ ಬರೆದರು. 

ನೆರೆ, ಬರದಿಂದ 30 ಸಾವಿರ ಕೋಟಿ ನಷ್ಟ. ಕೇಂದ್ರದಿಂದ ಬರಬೇಕಿರುವ GST ಬಾಕಿ  ಇರುವ 6500 ಕೋಟಿ ರೂ.ಗೆ ಖೋತಾ, ತೆರಿಗೆ ರೂಪದಲ್ಲಿ ಕೇಂದ್ರದಿಂದ 10 ಸಾವಿರ ಕೋಟಿಗೆ ಕೊಕ್,  ರಾಜ್ಯದ ತೆರಿಗೆ ಸಂಗ್ರಹದಲ್ಲಿ 7 ಸಾವಿರ ಕೋಟಿ ಇಳಿಕೆ. ಈ ಸವಾಲುಗಳ ಮಧ್ಯೆ ಸಿಎಂ ಯಡಿಯೂರಪ್ಪ ಸಮಾಧಾನಕರ ಬಜೆಟ್ ಮಂಡಿಸಿದರು.

Karnataka Budget 2020 Live | ಅಡಿಕೆ ಬೆಳಗಾರರಿಗೆ ಬಡ್ಡಿ ಬಂಪರ್!

ಹೊಸ ಯೋಜನೆಗಳ ಘೋಷಣೆ ಮಾಡದೇ, ಹಳೆ ಭಾಗ್ಯ ಯೋಜನೆಗಳ ಕಡಿತ ಮಾಡದೇ 2 ಲಕ್ಷ 37 ಸಾವಿರ 893 ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿದರು.

ಸರ್ಕಾರದ ಬೊಕ್ಕಸಕ್ಕೆ ಆಗುವ ಹೊರೆ ತಪ್ಪಿಸಲು, ಆದಾಯ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡುವುದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಅನಿವಾರ್ಯವಾಗಿದೆ. 

ಕರ್ನಾಟಕ ಬಜೆಟ್ 2020: ಪೆಟ್ರೋಲ್, ಡೀಸೆಲ್ ದರ ಏರಿಕೆ...!

ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ಆದಾಯಕ್ಕೆ ತಂದು ಕೊಡುವ ಅಬಕಾರಿ ಇಲಾಖೆ ಪ್ರಸ್ತಾವನೆಗೆ ಮಣಿದು ನಿರೀಕ್ಷೆಯಂತೆ ಮದ್ಯದ ಮೇಲಿನ ತೆರಿಗೆ ಹೆಚ್ಚಿಸಲಾಗಿದೆ. ಮಿಕ್ಕಂತೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಾ ಏರಿಕೆಯಾಗಿದೆ. 

ಕರ್ನಾಟಕ ಬಜೆಟ್ 2020: ಅಬಕಾರಿ ಮೇಲಿನ ಸುಂಕ ಹೆಚ್ಚಳ, ಎಣ್ಣೆ ಪ್ರಿಯರಿಗೆ ಬಿಗ್ ಶಾಕ್

ಯಾವೆಲ್ಲ ವಸ್ತುಗಳು ಏರಿಕೆಯಾಗಿವೆ? ಯಾವೆಲ್ಲ ಕಡಿಮೆಯಾಗಿದೆ ಎನ್ನುವುದನ್ನ ನೋಡುವುದಾದ್ರೆ, ಇಳಿಕೆಗಿಂತ ಏರಿಕೆಗಳದ್ದೇ ಜಾಸ್ತಿಯಾಗಿದೆ. ಅದರಲ್ಲೂ ಹೆಚ್ಚಾಗಿ ಸೇಲಾಗುವ ಪೆಟ್ರೋಲ್, ಡಿಸೇಲ್ ಹಾಗೂ ಮದ್ಯ ದರ ಏರಿಕೆಯಾಗಿದೆ.

ಯಾವುದು ಏರಿಕೆ? 
* ಮದ್ಯದ ಮೇಲಿನ ಅಬಕಾರಿ ಸುಂಕ ಶೇ 6 ರಷ್ಟು ಹೆಚ್ಚಳ. 
* ಅಬಕಾರಿ ಸುಂಕ 17 ಸ್ಲ್ಯಾಬ್ ಗಳಿಗೆ ಶೇ 15 ರಿಂದ ಶೇ 34ಕ್ಕೆ ಏರಿಕೆ 
* ಮದ್ಯ, ತಂಬಾಕು ಉತ್ಪನ್ನಗಳು, ಸಿಗರೇಟು, ಬೀಡಿ ಬೆಲೆ ಏರಿಕೆ 
* ಡೀಸೆಲ್ ಮೇಲಿನ 32 ರಿಂದ 35 ರಷ್ಟು ಸೆಸ್ ಏರಿಕೆ (ಡೀಸೆಲ್ ಪ್ರತಿ ಲೀಟರ್ ಬೆಲೆ 1.59 ರೂ ಏರಿಕೆ) 
* ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಶೇ 32ರಿಂದ 35ಕ್ಕೇರಿಕೆ (ಪೆಟ್ರೋಲ್ ಪ್ರತಿ ಲೀಟರ್ ಬೆಲೆ 1.60 ರೂ ಏರಿಕೆ) 
* ಖಾಸಗಿ ಸೇವಾ ವಾಹನ ತೆರಿಗೆಯನ್ನು ಪ್ರತಿ ಚದರ ಮೀಟರ್​ಗೆ ಶೇ.50ರಷ್ಟು ಹೆಚ್ಚಳ
* ವಿದ್ಯುತ್ ದರ ಹೆಚ್ಚಳ ಪ್ರತಿ ಯೂನಿಟ್ ಮೇಲೆ 10ರಿಂದ 20 ಪೈಸೆ ಏರಿಕೆ ಮುಂದುವರಿಕೆ. 
* ವಿದ್ಯುತ್ ಮೇಲಿನ ತೆರಿಗೆ ಶೇ.6ರಿಂದ ಶೇ.9ಕ್ಕೆ ಏರಿಕೆ ಮುಂದುವರಿಕೆ 

ಯಾವುದು ಇಳಿಕೆ? 
* ಮನೆ ಖರೀದಿ ಮಾಡಿದ ರಿಜಿಸ್ಟ್ರೇಶನ್ ತೆರಿಗೆ ಶೇ.5ರಿಂದ ಶೇ.2ಕ್ಕೆ ಇಳಿಕೆ
* ಸಿರಿಧಾನ್ಯಗಳಾದ ನವಣೆ, ಸಾಮೆ, ಅರಕ ಹಾಗೂ ಬರಗು ಮೇಲಿನ ಹಿಟ್ಟುಗಳಿಗೆ ತೆರಿಗೆ ವಿನಾಯ್ತಿ, ರೈತರಿಗೆ ಹೆಕ್ಟೇರಿಗೆ 10 ಸಾವಿರ ರು ಅನುದಾನ.
* ದ್ವಿದಳ ಧಾನ್ಯ, ತೆಂಗಿನ ಕಾಯಿ ಸಿಪ್ಪೆಯ ಮೇಲಿನ ತೆರಿಗೆ ವಿನಾಯಿತಿ ಮುಂದುವರಿಕೆ. 

ಮಾರ್ಚ್ 4ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Latest Videos
Follow Us:
Download App:
  • android
  • ios