ಕರ್ನಾಟಕ ಬಜೆಟ್ 2020: ಪೆಟ್ರೋಲ್, ಡೀಸೆಲ್ ದರ ಏರಿಕೆ...!
ಕರ್ನಾಟಕ ಬಜೆಟ್ 2020ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ಬೆಂಗಳೂರು, (ಮಾ. 05): ರಾಜ್ಯದಲ್ಲಿ ಅಬಕಾರಿ ಮೇಲಿನ ಸುಂಕ ತೆರಿಗೆ ಏರಿಕೆ ಜತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನ ಸಹ ಏರಿಕಯಾಗಿದೆ.
ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗುರುವಾರ 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಕರ್ನಾಟಕ ರಾಜ್ಯದ ಈ ಬಾರಿಯ ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂ. ಆಗಿದೆ.
Karnataka Budget 2020 Live | ಸಣ್ಣ, ಅತಿಸಣ್ಣ ರೈತರಿಗೆ ಬಂಪರ್ ಕೊಡುಗೆ!
ಡೀಸೆಲ್ ಮೇಲಿನ ತೆರಿಗೆ ಶೇ.21ರಿಂದ ಶೇ.24ಕ್ಕೆ ಏರಿಕೆ ಮಾಡಿದ್ದು, ಇದರಿಂದ ಪ್ರತಿ ಲೀಟರ್ ಡೀಸೆಲ್ ಗೆ 1.59 ರೂಪಾಯಿ ಹೆಚ್ಚಳವಾಗಲಿದೆ.
ಇನ್ನು ಪೆಟ್ರೋಲ್ ಮೇಲಿನ ತೆರಿಗೆ ಶೇ.32ರಿಂದ ಶೇ.35ಕ್ಕೆ ಏರಿಕೆ ಮಾಡಿದ್ದು, ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ಗೆ 1.60 ರೂಪಾಯಿ ಹೆಚ್ಚಳವಾಗಲಿದೆ.
ಕರ್ನಾಟಕ ಬಜೆಟ್ 2020: ಅಬಕಾರಿ ಮೇಲಿನ ಸುಂಕ ಹೆಚ್ಚಳ, ಎಣ್ಣೆ ಪ್ರಿಯರಿಗೆ ಬಿಗ್ ಶಾಕ್
#Newsin100Seconds I ಕ್ಷಣದ ಪ್ರಮುಖ ಸುದ್ದಿಗಳು
"