Asianet Suvarna News Asianet Suvarna News

Karnataka Budget 2023 ಉತ್ತರ ಕರ್ನಾಟಕಕ್ಕೆ ಮತ್ಸ್ಯಘಮ, ಮೀನುಗಾರಿಕೆ ದೋಣಿಗೆ ಹಣ!

ರಾಜ್ಯದ ಮೀನುಗಾರರಿಗೆ ನೆರವಾಗುವ ದೃಷ್ಟಿಯಿಂದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಅದರಂತೆ ಹಾವೇರಿಯಲ್ಲಿ ಮೀನು ಪಾಲನಾ ಕೇಂದ್ರ ಹಾಗೂ ಬೈಂದೂರಿನಲ್ಲಿ ಸೀಫುಡ್‌ ಪಾರ್ಕ್‌ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.

Karnataka Budget 2023 fishing sector Haveri and seafood park in byndoor Basavaraj bommai san
Author
First Published Feb 17, 2023, 12:18 PM IST

ಬೆಂಗಳೂರು (ಫೆ.17): ಉತ್ತರ ಕರ್ನಾಟಕ ಭಾಗದಲ್ಲಿ ಮೀನು ಕೃಷಿಯನ್ನು ಉತ್ತೇಜಿಸುವ ಸಲುವಾಗಿ ಹಾವೇರಿಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಕೇಂದ್ರ ಮತ್ತು ಪಾಲಮಾ ಕೇಂದ್ರವನ್ನು ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಅದರೊಂದಿಗೆ ರಾಜ್ಯದಲ್ಲಿ ಮೀನಿನ ರಫ್ತು ಮತ್ತು ಮೌಲ್ಯವರ್ಧನೆ ಮಾಡುವ ಸಲುವಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸೀಫುಡ್‌ ಪಾರ್ಕ್‌ಅನ್ನ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಸಿಗಡಿ ಉತ್ಪನ್ನಗಳ ರಫ್ತು ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಬಜೆಟ್‌ನಲ್ಲಿ ಈಗಾಗಲೇ ರಫ್ತು ಸುಂಕವನ್ನು ದೊಡ್ಡ ಮಟ್ಟದಲ್ಲಿ ಕಡಿಮೆ ಮಾಡಲಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವ ಸಲುವಾಗಿ ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಿಗಡಿ ಕೃಷಿ ಕ್ಲಸ್ಟರ್‌ ಸ್ಥಾಪನೆ ಮಾಡುವುದಾಗಿ ಸರ್ಕಾರ ಘೋಷಣೆ ನೀಡಿದೆ.

Karnataka Budget 2023: ಮಹಿಳೆಯರಿಗೆ, ಕೃಷಿಕರ ಅಭಿವೃದ್ಧಿಗೆ ಆದ್ಯತೆ ನೀಡಿದ ಸಿಎಂ 

ರಾಜ್ಯದ 8 ಮೀನುಗಾರಿಕೆ ಬಂದರುಗಳ ನ್ಯಾವಿಗೇಷನ್‌ ಚಾನೆಲ್‌ಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಈಗಾಗಲೇ ಟೆಂಡರ್‌ಗಳನ್ನು ಕರೆಯಲಾಗಿದೆ. ಇದರಿಂದ ಮೀನಿಗಾರಿಕೆ ದೋಣಿಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

Karnataka Budget 2023-24: ಬೆಂಗಳೂರಿಗೆ 9,698 ಕೋಟಿ ರೂ. ಬಂಪರ್- 110 ಹಳ್ಳಿಗಳಿಗೆ ಕಾವೇರಿ ನೀರು ಲಭ್ಯ

ಮೀನುಗಾರರಿಗೆ ನೆರವಾಗಲು 62 ಎಫ್‌ಎಫ್‌ಪಿಓಗಳ ಸ್ಥಾನೆ, 12,175 ಮೀನುಗಾರರಿಗೆ ಕಿಸಾನ್‌ ಕ್ರೆಡಿಟಟ್‌ ಕಾರ್ಡ್‌ ವಿತರಣೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯವನ್ನು ಉತ್ತಮ ಪಡಿಸಲು ಕರಾವಳಿ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕೃತಕ ಬಂಡೆಸಾಲುಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಸಾರ್ವಜನಿಕರಿಗೆ ಗುಣಮಟ್ಟದ ಮೀನು ಉತ್ಪನ್ನಗಳನ್ನು ಪೂರೈಸಲು ಪರಿಸರ ಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಮೀನುಗಾರರ ದೋಣಿಗೆ ಹಣ: ಮೀನುಗಾರರ ಹಾಗೂ ಅವರ ದೋಣಿಗಳ ಸುರಕ್ಷತೆಗಾಗಿ 17 ಕೋಟಿ ರೂಪಾಯಿಗಳ ಅನುದಾನದಲ್ಲಿ ಇಸ್ರೋ ಅಭಿವೃದ್ಧಿಪಡಿಸಿರುವ ಜಿಪಿಎಎಸ್‌ ಸಂವಹನ ವ್ಯವಸ್ಥೆಯನ್ನು ಎಲ್ಲಾ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ ಅಳವಡಿಸಲಾಗುತ್ತದೆ. ಇದರಿಂದ ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ದೋಣಿಗಳನ್ನು ಪತ್ತೆ ಹಚ್ಚಲು ಅನುಕೂಲವಾಗುತ್ತದೆ. ಮೀನುಗಾರರಿಗೆ ವಸತಿ ಸೌಕರ್ಯಕ್ಕೂ ಸರ್ಕಾರ ಆದ್ಯತೆ ನೀಡಿದ್ದು, ಕಳೆದ ವರ್ಷ ಮನೆಯಿಲ್ಲದ ಮೀನುಗಾರರಿಗೆ 5 ಸಾವಿರ ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದೆ. ಪ್ರಸಕ್ತ ವರ್ಷ ಈ ಯೋಜನೆಯನ್ನು 1 ಸಾವಿರ ವಸತಿ ರಹಿತ ಮೀನುಗಾರರಿಗೆ ವಿಸ್ತರಣೆ ಮಾಡಲಾಗುತ್ತದೆ.

ಮೀನುಗಾರಿಕೆ ಕ್ಷೇತ್ರಕ್ಕೆ ಬೊಮ್ಮಾಯಿ ಕೊಟ್ಟಿದ್ದೇನು..

- ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಯಲ್ಲಿ ಪೆಟ್ರೋಲ್‌/ಡೀಸೆಲ್‌ ಆಧಾರಿತ ಇಂಜಿನ್‌ ಅನ್ನು ಅಳವಡಿಸಲು ತಲಾ 50 ಸಾವಿರ ರೂ ಸಹಾಯಧನ. ಇದಕ್ಕಾಗಿ ಪ್ರಸಕ್ತ ವರ್ಷ 40 ಕೋಟಿ ಮೀಸಲು. ಈ ಪ್ರಕ್ರಿಯೆ ಪೂರ್ಣವಾಗುವವರೆಗೆ 2 ವರ್ಷಗಳವರೆಗೆ ಸೀಮೆಎಣ್ಣೆ ಸಹಾಯಧನ ವಿಸ್ತರಣೆ.

-ಮೀನುದಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಡೀಸೆಲ್‌ನ ಮಿತಿಯನ್ನು 1.5 ಲಕ್ಷ ಕಿಲೋ ಮೀಟರ್‌ನಿಂದ 2 ಲಕ್ಷ ಕಿಲೋ ಲೀಟರ್‌ಗೆ ಏರಿಕೆ. ಇದಕ್ಕಾಗಿ ಸರ್ಕಾರ 250 ಕೋಟಿ ರೂಪಾಯಿ ಮೀಸಲಿಡಲಿದೆ.

- ಮೀನುಗಾರರಿಗೆ ನೀಡುತ್ತಿರುವ ಸೀಮೆಎಣ್ಣೆ ಸಹಾಯಧನ ಸರಳೀಕರಿಸಿ ಪ್ರಸಕ್ತ ವರ್ಷದಿಂದ ಡಿಬಿಟಿ ಮುಖಾಂತರ ನೇರವಾಗಿ ಮೀನುಗಾರರ ಖಾತೆಗೆ ಜಮೆ.

- ಆಳ ಸಮುದ್ರ ಮೀನುಗಾರಿಕೆಗೆ ಉತ್ತೇಜನ ನೀಡಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ ಮತ್ಸ್ಯ ಸಿರಿ ಎಂಬ ಹೊಸ ಯೋಜನೆ ಜಾರಿ. ಆಯ್ಕೆಯಾದ ಎಲ್ಲಾ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು ದೋಣಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದೆ.

- ಉತ್ತಮ ತಳಿತ ಬಲಿತ ಬಿತ್ತನೆ ಮೀನು ಮರಿಗಳ ದಾಸ್ತಾನು ಪ್ರೋತ್ಸಾಹಿಸಲು 20 ಕೋಟಿ ರೂಪಾಯಿ ಅನುದಾನ.

- ಕಳೆದ ವರ್ಷ 10.73 ಲಕ್ಷ ಮೆಟ್ರಿಕ್‌ ಟನ್‌ ಮೀನು ಉತ್ಪಾದನೆ ಮಾಡುವ ಮೂಲಕ, ದೇಶದಲ್ಲಿಯೇ ಗರಿಷ್ಠ ಮೀನು ಉತ್ಪಾದನೆ ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.

 

 

 

 

 

Follow Us:
Download App:
  • android
  • ios