Asianet Suvarna News Asianet Suvarna News

Karnataka Budget 2023: ಮೇಕೆದಾಟು, ಭದ್ರಾ ಮೇಲ್ದಂಡೆ, ಎತ್ತಿನಹೊಳೆ.. ಜಲಸಂಪನ್ಮೂಲಕ್ಕೆ ಸರ್ಕಾರ ಇಟ್ಟಿದ್ದೆಷ್ಟು!

Karnataka Budget 2023 for Water Resources: ರಾಜ್ಯ ಸರ್ಕಾರ ನೀರಾವರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದೊಡ್ಡ ಮಟ್ಟದ ಶ್ರಮವಹಿಸಿದೆ. ಜಲಸಂಪನ್ಮೂಲ ಇಲಾಖೆಯ ಅಡಿ ಬರುವ ಯೋಜನೆಗಳಿಗೆ ಸರ್ಕಾರ ಸಾಕಷ್ಟು ಅನುದಾನ ಘೋಷಣೆ ಮಾಡಿದೆ.
 

Karnataka Budget 2023 Mekedatu Yettinahole project upper bhadra allocation from Siddaramaiah san
Author
First Published Jul 7, 2023, 4:44 PM IST

ಬೆಂಗಳೂರು (ಜು.7): 2023ರ ಏಪ್ರಿಲ್‌1ರವರೆಗೆ ಜಲಸಂಪನ್ಮೂಲ ಇಲಾಖೆಯ ಅಡಿ ಅನುಮೋದನೆ ಮಾಡಲಾಗಿರುವ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ಒದಗಿಸಬೇಕಾಗಿದೆ. ಈ ಯೋಜನೆಗಳ ವೆಚ್ಚವು, ಕಾಮಗಾರಿ ಹಾಗೂ ಭೂಸ್ವಾಧೀನ ವೆಚ್ಚ ಹೆಚ್ಚಳದ ಕಾರಣ 25 ಸಾವಿರದಿಂದ 40 ಸಾವಿರ ಕೋಟಿಯಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಸಿದ್ಧರಾಮಯ್ಯ ಬಜೆಟ್‌ ಭಾಷಣದಲ್ಲಿ ಹೇಳಿದರು. ಇದರಿಂದಾಗಿ ಪ್ರಗತಿಯಲ್ಲಿರುವ 940 ಕೋಟಿ ರೂ. ಬಾಕಿ ಮೊತ್ತದ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸರ್ಕಾರ ಆದ್ಯತೆ ನೀಡಲಿದೆ ಎಂದಿದ್ದಾರೆ.  770 ಕೋಟಿ ರೂ. ವೆಚ್ಚದಲ್ಲಿ 899 ಕೆರೆ ತುಂಬಿಸುವ 19 ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಎತ್ತಿನಹೊಳೆ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸಲು, ಮೇಕೆದಾಟು ಯೋಜನೆಗೆ ಅರಣ್ಯ ಭೂಮಿ ಸ್ವಾಧೀನ, ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಬಜೆಟ್‌ನಲ್ಲಿ ತಿಳಿಸಲಾಗಿದೆ.

ಕಳೆದ 6 ತಿಂಗಳ ಅವಧಿಯಲ್ಲಿ22548 ಕೋಟಿ ರೂಪಾಯಿ ವೆಚ್ಚದ 1274 ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ವರ್ಷ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ, ಸುಮಾರು 25948 ಹೆಕ್ಟೇರ್‌ ನೀರಾವರಿ ಸಾಮರ್ಥ್ಯ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಕುಲಹಳ್ಳಿ-ಹನ್ನೂರು, ತಿಮ್ಮಾಪುರ ಸಸಾಲಟ್ಟಿ-ಶಿವಲಿಂಗೇಶ್ವರ ಮತ್ತು ಮಂಟೂರು ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಸುಮಾರಿ 39, 134 ಹೆಕ್ಟೇರ್‌ ಅಚ್ಚುಕಟ್ಟು ಸ್ಥಿರೀಕರಣ ಮಾಡಲಾಗುತ್ತದೆ.

12912 ಕೋಟಿ ರೂಪಾಯಿ ಮೊತ್ತದ ಎತ್ತಿನಹೊಳೆ ಯೋಜನೆಗೆ ಹಿಂದಿನ ಸರ್ಕಾರ ಸಕಾಲದಲ್ಲಿ ಪೂರ್ಣ ಮಾಡಿರಲಿಲ್ಲ. ಇದರ ಕಾರಣ ದರ ಹೆಚ್ಚಳಗೊಂಡು ಈ ಯೋಜನೆಯು 23252 ಕೋಟಿ ರೂಪಾಯಿ ಆಗಿದೆ. ಈ ಯೋಜನೆಯಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಿ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರಿ ಪೂರೈಸಲು ಆದ್ಯತೆಯ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ವಿವರವಾದ ಯೋಜನಾ ವರದಿ ಹಾಗೂ ತೀರುವಳಿ ಪ್ರಸ್ತಾವನೆಯನ್ನು ಜೇದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದಕ್ಕೆ ಅಗತ್ಯವಿರುವ ಭೂಮಿಯನ್ನು ಗುರುತಿಸಲಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಗಳನ್ನು ಜರುಗಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ಇನ್ನೂ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿಲ್ಲ. ಕೇಂದ್ರ ಬಜೆಟ್‌ನಲ್ಲಿ ಇದಕ್ಕೆ 5300 ಕೋಟಿ ಅನುದಾನ ಘೋಷಣೆಯಾಗಿದೆ. ಈ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು.

Karnataka Budget 2023: ಹೆಬ್ಬಾಳದಿಂದ ಸರ್ಜಾಪುರಕ್ಕೆ ಹೊಸ ಮೆಟ್ರೋ ಮಾರ್ಗ, ರಾಜಧಾನಿ ಅಭಿವೃದ್ಧಿಗೆ ಪಣ!

ಇನ್ನು ಮಹದಾಯಿ ನ್ಯಾಯಾಧೀಕರಣ ಕಳಸಾ ಮತ್ತು ಬಂಡೂರಾ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಹಂಚಿಕೆಯಾದ 3.90 ಟಿಎಂಸಿ ನೀರಿನ ಬಳಕೆಗೆ ಈಗಾಗಲೇ ಕೇಂದ್ರ ಜಲ ಆಯೋಗದ ತೀರುವಳಿ ಸಿಕ್ಕಿದೆ. ಅಗತ್ಯವಿರುವ ಅರಣ್ಯ ತೀರುವಳಿ ಪಡೆದು ಕಾಮಗಾರಿಗಳನ್ನು ಜಾರಿ ಮಾಡಲಾಗುವುದು. ಇನ್ನು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1 ಮತ್ತು 2ರ ವಿಸ್ತರಣೆ ಹಾಗೂ ಸನ್ನತಿ ಏತ ನೀರಾವರಿ ಯೋಜನೆಗಳನ್ನು ಗುರುತಿಸಲಾಗಿದೆ. ಕೇಂದ್ರ ಸರ್ಕಾರದ ಸಹಾಯಧನ ಪಡೆಯಲು ಅಗತ್ಯ ಕ್ರಮ.

Karnataka Budget 2023: ಸ್ವಿಗ್ಗಿ, ಜೊಮೊಟೊ ಡೆಲಿವರಿ ಬಾಯ್‌ಗಳಿಗೆ ಭರ್ಜರಿ ಕೊಡುಗೆ: 4 ಲಕ್ಷ ರೂ. ವಿಮೆ ಸೌಲಭ್ಯ

ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯನ್ನು ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದೊಂದಿಗೆ ಸಮಾಲೋಚಿಸಿ ಅನುಷ್ಠಾನ. ಇನ್ನು ಕೃಷ್ಣಾ ನ್ಯಾಯಾಧೀಕರಣ ತೀರ್ಪಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಹಂಚಿಕೆಯಾಗಿರುವ 130 ಟಿಎಂಸಿ ನೀರಿನ ಬಳಕೆಗೆ ಯೋಜನಾ ಕಾಮಗಾರಿಗಳ ಆದ್ಯತೆ ನೀಡಿ ಶೀಘ್ರ ಕ್ರಮ. ಕೆಸಿ ವ್ಯಾಲಿ ಮತ್ತು ಎಚ್‌ಎನ್‌ ವ್ಯಾಲಿ ಯೋಜನೆಯ 2ನೇ ಹಂತದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 296 ಕೆರೆಗಳನ್ನು ತುಂಬಿಸುವ ಯೋಜನೆಯನ್ನು 529 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನ.

Follow Us:
Download App:
  • android
  • ios