Asianet Suvarna News Asianet Suvarna News

Karnataka Budget 2023: ವಕ್ಫ್‌ ಆಸ್ತಿ ರಕ್ಷಣೆಗೆ 50 ಕೋಟಿ, ಶಾದಿ ಮಹಲ್‌ ನಿರ್ಮಾಣಕ್ಕೆ 54 ಕೋಟಿ!

ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ ಆದ್ಯತೆ ನೀಡಲಾಗಿದೆ. ರಾಜ್ಯದಲ್ಲಿರುವ ವಕ್ಫ್‌ ಆಸ್ತಿಯ ಸಂರಕ್ಷಣೆಗೆ ಹಾಗೂ ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ಶಾದಿ ಮಹಲ್ ಹಾಗೂ ಸಮುದಾಯ ಭವನ ನಿರ್ಮಾಣ ಕಾರ್ಯ ಪೂರ್ಣ ಮಾಡಲು ಅನುದಾನ ಘೋಷಣೆಯಾಗಿದೆ.
 

Karnataka Budget 2023 minority welfare department siddaramaiah Grants san
Author
First Published Jul 7, 2023, 1:24 PM IST

ಬೆಂಗಳೂರು (ಜು.7): ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಅಲ್ಪ ಸಂಖ್ಯಾತ ಕಲ್ಯಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ರಾಜ್ಯದಲ್ಲಿರುವ 40 ಸಾವಿರಕ್ಕಿಂತಲೂ ಅಧಿಕ ವಕ್ಫ್‌ ಆಸ್ತಿಗಳ ರಕ್ಷಣೆ ಮತ್ತು ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. ಸರ್ಕಾರದ ಹಿಂದಿನ ಅವಧಿಯಲ್ಲಿ ರಾಜ್ಯಾದ್ಯಂತ ನೂರಾರು ಶಾದಿ ಮಹಲ್‌ ಮತ್ತು ಸಮುದಾಯ ಭವನಗಳನ್ನು ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿತ್ತು. ಆದರೆ, ಇದು ಪೂರ್ಣವಾಗಿರುವುದಿಲ್ಲ. ಅಂಥಾ 126 ಶಾದಿ ಮಹಲ್‌ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯ ಪೂರ್ಣ ಮಾಡಲು 54 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಅದರೊಂದಿಗೆ ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಕರ್ನಾಟಕ ಇನಾಮ್‌ ರದ್ದಿಯಾತಿ ನಿಯಮದನ್ವಯ ನೀಡಲಾಗುತ್ತಿರುವ ತಸ್ತಿಕ್‌ ಮೊತ್ತವನ್ನು 48 ಸಾವಿರ ರೂಪಾಯಿಯಿಂದ 60 ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು. ಇದರೊಂದಿ ತಸ್ತಿಕ್‌ ಪಡೆಯುತ್ತಿರುವ 868 ಸಂಸ್ಥೆಗಳಿಗೆ ಅನುಕೂಲವಾಗಲಿದೆ.

ರಾಮನಗರ,ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ,ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು 4 ಕೋಟಿ ವೆಚ್ಚದಲ್ಲಿ ಪ್ರಾರಂಭ. ಸ್ವಾವಲಂಬಿ ಸಾರಥಿ ಯೋಜನೆ ಅಡಿ ಅಲ್ಪಸಂಖ್ಯಾತ ನಿರುದ್ಯೋಗಿ ಯುವಕರಿಗೆ 4 ಚಕ್ರ ವಾಹನ ಪಡೆಯಲಿ 3‌ಲಕ್ಷ ಸಹಾಯಧನ. ರಾಜ್ಯದಲ್ಲಿ 40 ಸಾವಿರಕ್ಕಿಂತ ವಕ್ಫ ಆಸ್ತಿಗಳಿದ್ದು ಸಂರಕ್ಷಣೆ ಮತ್ತು‌ ಅಭಿವೃದ್ಧಿ ಗಾಗಿ 50. ಕೋಟಿ ಅನುದಾನ‌ ನೀಡಲಾಗುತ್ತದೆ. ಜೈನರ ಪ್ರಮುಖ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ಅನುದಾನ. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಗೆ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ. 100ಕೋಟಿ ಅನುದಾನ. ಹಜ್ ಭವನದಲ್ಲಿ‌ ಅಲ್ಪಸಂಖ್ಯಾತ ಯುವಕರಿಗೆ 10 ತಿಂಗಳ ಕಾಲ ವಸತಿ ಸಹಿತ ಐಎಎಸ್,ಕೆಎಎಸ್ ತರಬೇತಿಗಳನ್ನ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಪ್ರಾರಂಭ ಮಾಡಲಾಗುತ್ತದೆ. ಹಲಸೂರಿನಲ್ಲಿರುವ ಗುರುದ್ವಾರ ದ ಅಭಿವೃದ್ಧಿ ಗೆ 25 ಕೋಟಿ ಅನುದಾನ ನೀಡುವುದಾಗಿ ಸರ್ಕಾರ ಹೇಳಿದೆ.

Karnataka Budget 2023 Live Updates |ಅಬಕಾರಿ ಸುಂಕ ಹೆಚ್ಚಳ, ಮದ್ಯ ಪ್ರಿಯರಿಗೆ ಶಾಕ್ 

Karnataka Budget 2023: ರೈತ ವಿರೋಧಿ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು: ಕಾರಣ ಹೀಗಿದೆ..

Follow Us:
Download App:
  • android
  • ios