ರಾಮನಗರದಲ್ಲಿ ದಕ್ಷಿಣ ಅಯೋಧ್ಯೆ, ದೇವಸ್ಥಾನ-ಮಠ ಜೀರ್ಣೋದ್ದಾರಕ್ಕೆ 1 ಸಾವಿರ ಕೋಟಿ!
ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆಯಾಗಿದೆ. ಅದರೊಂದಿಗೆ ರಾಜ್ಯದ ವಿವಿಧ ದೇವಸ್ಥಾನ ಹಾಗೂ ಮಠಗಳ ಜೀರ್ಣೋದ್ದಾರಕ್ಕೆ ಮುಂದಿನ 2 ವರ್ಷಗಳಲ್ಲಿ 1 ಸಾವಿರ ಕೋಟಿ ನೀಡುವುದಾಗಿ ಘೋಷಣೆಯಾಗಿದೆ.
ಬೆಂಗಳೂರು (ಫೆ.17): ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರವನ್ನು ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆಯಾಗಿದೆ. ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನವನ್ನು 48,000 ರೂ. ಗಳಿಂದ 60,00 ರೂ. ಗಳಿಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,71 ಸಂಸ್ಥೆಗಳಿಗೆ ಅನುಕೂಲವಾಗಲಿದೆ.
ನಂದಿ ಗಿರಿಧಾಮ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನಂದಿಬೆಟ್ಟಕ್ಕೆ ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ರೋಪ್ ವೇ ನಿರ್ಮಾಣ, ಪ್ರವಾಸಿ ಗೈಡ್‌ಗಳ ಮಾಸಿಕ ಪ್ರೋತ್ಸಾಹ ಧನ 2 ರಿಂದ 5 ಸಾವಿರಕ್ಕೆ ಏರಿಕೆ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ರೂ. ಕೋಟಿ ರೂಪಾಯಿ ಮೀಸಲಿಡಲಾಗಿದೆ.