Karnataka Budget 2023: ಸ್ವಿಗ್ಗಿ, ಜೊಮೊಟೊ ಡೆಲಿವರಿ ಬಾಯ್‌ಗಳಿಗೆ ಭರ್ಜರಿ ಕೊಡುಗೆ: 4 ಲಕ್ಷ ರೂ. ವಿಮೆ ಸೌಲಭ್ಯ

ರಾಜ್ಯದ ಇ-ಕಾಮರ್ಸ್‌ ಗಿಗ್‌ ವರ್ಕರ್ಸ್‌ಗಳಾದ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಇತರೆ ಸಂಸ್ಥೆಗಳ ನೌಕರರಿಗೆ (ಡೆಲಿವರಿ ಬಾಯ್‌ಗಳಿಗೆ) 4 ಲಕ್ಷ ರೂವರೆಗೆ ವಿಮೆ ಕಂತನ್ನು ಸರ್ಕಾರ ಭರಿಸಲಿದೆ. 

Karnataka Budget 2023 offer for Swiggy Zomoto delivery boys Rs 4 lakh Insurance for gig workers sat

ಬೆಂಗಳೂರು (ಜು.07)):  ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿರುವ ಗಿಗ್‌ ವರ್ಕರ್ಸ್‌ಗಳಾದ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಮುಂತಾದ ಇ-ಕಾಮರ್ಸ್ ಸಂಸ್ಥೆಗಳ ನೌಕರರಿಗೆ (ಡೆಲಿವರಿ ಬಾಯ್‌ಗಳಿಗೆ) 2 ಲಕ್ಷ ರೂ.ಗಳ ಜೀವವಿಮಾ ಹಾಗೂ 2 ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿ ಒಟ್ಟು 4 ಲಕ್ಷ ರೂ.ಗಳ ವಿಮಾ ಸೌಲಭ್ಯ ಕಲ್ಪಿಸಲಾಗುವುದು. ಸಂಪೂರ್ಣ ವಿಮಾ ಕಂತನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ 'Gig workers', ಅಂದರೆ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಮುಂತಾದ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ/ಅರೆಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ, ಇಂತಹವರಿಗೆ ಎರಡು ಲಕ್ಷ ರೂ.ಗಳ ಜೀವವಿಮಾ ಸೌಲಭ್ಯ ಹಾಗೂ ಎರಡು ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿದಂತೆ ಒಟ್ಟು ನಾಲ್ಕು ಲಕ್ಷ ರೂ.ಗಳ ವಿಮಾ ಸೌಲಭ್ಯ ಕಲ್ಪಿಸಲಾಗುವುದು ಮತ್ತು ಇದರ ಸಂಪೂರ್ಣ ವಿಮಾ ಕಂತನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ತಿಳಿಸಿದರು. 

Karnataka Budget 2023 Live Updates |ಅಬಕಾರಿ ಸುಂಕ ಹೆಚ್ಚಳ, ಮದ್ಯ ಪ್ರಿಯರಿಗೆ ಶಾಕ್.

ಕಟ್ಟಡ ಕಾರ್ಮಿಕರ ನೋಂದಣಿ ಸರಳೀಕರಣ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಫಲಾನುಭವಿಗಳು ಮತ್ತು ಅವಲಂಬಿತರಿಗೆ ಸಹಾಯಧನ ಹಾಗೂ ಸೌಲಭ್ಯಗಳನ್ನು ವಿತರಿಸಲಾಗುವುದು. ಇದುವರೆಗೂ ನೋಂದಣಿಯಾಗದೇ ಇರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ನೋಂದಾಯಿಸಲು ಕ್ರಮ ವಹಿಸಲಾಗುವುದು. ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿ ವ್ಯವಹಾರ ಸರಳೀಕರಣ ಪರಿಕ್ರಮಗಳಡಿಯಲ್ಲಿ ಇಲಾಖೆಯ ಎಲ್ಲಾ ಸೇವೆಗಳನ್ನು ಭಾಗೀದಾರರಿಗೆ ಸಮರ್ಪಕವಾಗಿ ಮತ್ತು ಸಕಾಲದಲ್ಲಿ ಸಂಪೂರ್ಣವಾಗಿ ಆನ್-ಲೈನ್ ಮೂಲಕ ಒದಗಿಸಲಾಗುವುದು. 

ಕಾರ್ಮಿಕ ಆಸ್ಪತ್ರೆಗಳಲ್ಲಿ ಆಯುರ್ವೇದ ವಿಭಾಗ ಆರಂಭ: ರಾಜ್ಯದಲ್ಲಿನ ಎಲ್ಲಾ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳಲ್ಲಿ ಆಯುರ್ವೇದ, ಹೋಮಿಯೋಪಥಿ ಮತ್ತು ಯೋಗ ಕೇಂದ್ರಗಳು ಒಳಗೊಂಡ ಆಯುಷ್ ವಿಭಾಗವನ್ನು ಮೂರು ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಿದೆ. ಆರು ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳಲ್ಲಿ (ESIC) ಒಟ್ಟು 35 ಬೆಡ್‌ಗಳ ಸಾಮರ್ಥ್ಯದ ಐ.ಸಿ.ಯು/ಎಂ.ಐ.ಸಿ.ಯು ಗಳನ್ನು 13 ಕೋಟಿ ರೂ. ವೆಚ್ಚದಲ್ಲಿ, ಆರು ಆಸ್ಪತ್ರೆಗಳಲ್ಲಿ 25 ಡಯಾಲಿಸಿಸ್ ಘಟಕಗಳನ್ನು 5 ಕೋಟಿ ರೂ. ವೆಚ್ಚದಲ್ಲಿ, ಎರಡು ಆಸ್ಪತ್ರೆಗಳಲ್ಲಿ ಹೊಸ ಲೆವೆಲ್-2 ಟ್ರಾಮಾ ಕೇರ್ ಸೆಂಟರ್‌ಗಳನ್ನು 24 ಕೋಟಿ ರೂ. ವೆಚ್ಚದಲ್ಲಿ, ನಾಲ್ಕು ಆಸ್ಪತ್ರೆಗಳಲ್ಲಿ ಮಾಡ್ಯುಲಾರ್ ಓ.ಟಿ. ಗಳನ್ನು ಎಂಟು ಕೋಟಿ ರೂ. ವೆಚ್ಚದಲ್ಲಿ ಮತ್ತು ರೋಗ ಪತ್ತೆ ಹಚ್ಚುವ ಕೇಂದ್ರಗಳ ಉನ್ನತೀಕರಣವನ್ನು 35 ಕೋಟಿ ರೂ. ವೆಚ್ಚದಲ್ಲಿ ಸೇರಿದಂತೆ ಒಟ್ಟು 85 ಕೋಟಿ ರೂ. ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು. 

ಯುವನಿಧಿ ಯೋಜನೆಗೆ ಅನುದಾನವೇ ಇಲ್ಲ: ಶಿಕ್ಷಣ ಪಡೆದು ಉದ್ಯೋಗ ಹಿಡಿದು ಜೀವನದಲ್ಲಿ ಉನ್ನತಿಯನ್ನು ಸಾಧಿಸುವ ಕನಸು ಹೊಂದಿರುವ ಯುವಜನರು, ನಿರೀಕ್ಷೆಯಂತೆ ಉದ್ಯೋಗ ಪಡೆಯಲು ಸಾಧ್ಯವಾಗದ ಸಂದರ್ಭದಲ್ಲಿ ಅವರಿಗೆ ಬೆನ್ನೆಲುಬಾಗಿ ನಿಲ್ಲುವ ಆಶಯದೊಂದಿಗೆ ನಮ್ಮ ಪ್ರಣಾಳಿಕೆಯ ಐದನೇ ಗ್ಯಾರಂಟಿ ಯೋಜನೆಯಾದ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ನಿರುದ್ಯೋಗ ಭತ್ಯೆ ನೀಡುವ 'ಯುವನಿಧಿ' ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ನಾಡಿನ ಯುವಜನರು ಅಡ್ಡದಾರಿ ಹಿಡಿಯದಂತೆ, ಅತ್ಮಸ್ಥೆರ್ಯದಿಂದ ತಮ್ಮ ಬದುಕಿನಲ್ಲಿ ಗಟ್ಟಿಯಾಗಿ ನೆಲೆ ಕಂಡುಕೊಳ್ಳಲು ಸಮಯಾವಕಾಶ, ಆರ್ಥಿಕ ನೆರವನ್ನು ನೀಡುವುದು, ಆತ್ಮವಿಶ್ವಾಸವನ್ನು ತುಂಬುವುದು ಈ ಯೋಜನೆಯ ಉದ್ದೇಶವಾಗಿದೆ. 

Karnataka Budget 2023: ವಕ್ಫ್‌ ಆಸ್ತಿ ರಕ್ಷಣೆಗೆ 50 ಕೋಟಿ, ಶಾದಿ ಮಹಲ್‌ ನಿರ್ಮಾಣಕ್ಕೆ 54 ಕೋಟಿ!

2023ರಲ್ಲಿ ಡಿಗ್ರಿ ಮುಗಿಸಿದವರಿಗೆ ಮಾತ್ರ ಯುವನಿಧಿ ಜಾರಿ: ಡಬಲ್ ಎಂಜಿನ್ ಎಂದು ಹೇಳಿಕೊಳ್ಳುವ ಸರ್ಕಾರಗಳ ಜನವಿರೋಧಿ ನೀತಿಯಿಂದ ಆರ್ಥಿಕತೆ ಕುಸಿದಿದ್ದು, ನಿರುದ್ಯೋಗ ಸಮಸ್ಯೆ ರಾಜ್ಯದೆಲ್ಲೆಡೆ ತಾಂಡವವಾಡುತ್ತಿದೆ. 2023 ರಲ್ಲಿ ಪದವಿ ಪಡೆದು ಆರು ತಿಂಗಳವರೆಗೂ ಉದ್ಯೋಗ ಲಭಿಸದ ಯುವಜನರಿಗೆ ಎರಡು ವರ್ಷದವರೆಗೆ ಅಥವಾ ಉದ್ಯೋಗ ಸಿಗುವವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ, ಪದವೀಧರರಿಗೆ ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಅನುಕ್ರಮವಾಗಿ ಮಾಸಿಕ 3,000 ರೂ. ಮತ್ತು 1,500 ರೂ. ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು.

12 ಐಟಿಐ ಕಾಲೇಜುಗಳಿಗೆ ಪಾರಂಪರಿಕ ಸಂಸ್ಥೆಗಳ ಭಾಗ್ಯ: ರಾಜ್ಯದಲ್ಲಿ 50 ವರ್ಷಗಳನ್ನು ಪೂರೈಸಿದ 12 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪಾರಂಪರಿಕ ಸಂಸ್ಥೆಗಳೆಂದು ಘೋಷಿಸಿ ಕೈಗಾರಿಕೆಗಳ ಬೇಡಿಕೆಗೆ ಅನುಗುಣವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಸಂಬಂಧ ನಿರ್ಮಾಣ ಕಾರ್ಯ ಹಾಗೂ ಹೊಸ ಉಪಕರಣಗಳು ಮತ್ತು ಯಂತ್ರೋಪಕರಣಗಳ ಖರೀದಿಗಾಗಿ 100 ಕೋಟಿ ರೂ.ಗಳನ್ನು ವಿನಿಯೋಗಿಸಲು ಉದ್ದೇಶಿಸಲಾಗಿದೆ. ಕೌಶಲ್ಯಾಭಿವೃದ್ಧಿ ಇಲಾಖೆಯಡಿಯಲ್ಲಿ ಇದುವರೆಗೂ ಖಾಸಗಿ ಸಂಸ್ಥೆಗಳ ಮೂಲಕ ನಡೆಯುತ್ತಿದ್ದ ಎಲ್ಲಾ ಕೌಶಲ್ಯ ತರಬೇತಿಯನ್ನು ನಮ್ಮ ITI, GTTC, Polytechnic ಸಂಸ್ಥೆಗಳ ಮೂಲಕವೇ ನೀಡಿ, Industry ಮತ್ತು Academy ಯನ್ನು ಸಮನ್ವಯಗೊಳಿಸಿ ಕೌಶಲ್ಯ ತರಬೇತಿಯನ್ನು ಹೆಚ್ಚಿನ ಸಾಂಸ್ಕೃಕರಣ ವ್ಯವಸ್ಥಿಕರಣಗೊಳಿಸಲಾಗುವುದು.

Latest Videos
Follow Us:
Download App:
  • android
  • ios