ಕರ್ನಾಟಕ ಬಜೆಟ್ 2024: ಕೃಷಿ ಸಂಬಂಧಿತ ಎಲ್ಲ ಇಲಾಖೆಗಳ ಸಮನ್ವಯಕ್ಕೆ'ಕೃಷಿ ಅಭಿವೃದ್ಧಿ ಪ್ರಾಧಿಕಾರ' ರಚನೆ

ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ಸಮನ್ವಯ ಸಾಧಿಸಲು 'ಕೃಷಿ ಅಭಿವೃದ್ಧಿ ಪ್ರಾಧಿಕಾರ' ರಚನೆ ಮಾಡಲಾಗುತ್ತದೆ

Karnataka Budget 2024 Agriculture Development Authority to monitor all agriculture departments sat

ಬೆಂಗಳೂರು (ಫೆ.16): ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ,  ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಈ ಮೂಲಕ ರಾಜ್ಯದ ಕೃಷಿ ಸಂಬಂಧಿತ ಎಲ್ಲ ಇಲಾಖೆಗಳನ್ನು ಮೇಲ್ವಿಚಾರಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯಯ ಅವರೇ ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಈ ಮೂಲಕ ಕೃಷಿ ಸಂಬಂಧಿತ ಎಲ್ಲ ಇಲಾಖಾ ಸಚಿವರನ್ನು ನಿಯಂತ್ರಣದಲ್ಲಿಡಲು ಮುಂದಾಗಿದ್ದಾರೆ. ಇನ್ನು ಕಾಂಗ್ರೆಸ್ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು. ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ (Community Seed Bank) ಅನ್ನು ಸ್ಥಾಪಿಸಲಾಗುವುದು.

ಕರ್ನಾಟಕ ಬಜೆಟ್ 2024 ಲೈವ್ ಅಪ್‌ಡೇಟ್ಸ್‌ : ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ 

ನಮ್ಮ ಮಿಲ್ಲೆಟ್‌ ಹೊಸ ಕಾರ್ಯಕ್ರಮ ಜಾರಿ:
ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಸ್‌ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು.  ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ 1,000 ದಂತೆ ಒಟ್ಟು 5,000 ಸಣ್ಣ ಸರೋವರಗಳನ್ನು (ಕೆರೆಗಳನ್ನು) ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು.

ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಮಾಡಲಾಗುವುದು. ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ e-SAP ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲು ಕ್ರಮ ವಹಿಸಲಾಗುವುದು. ರೈತ ಉತ್ಪಾದಕ ಸಂಸ್ಥೆಗಳನ್ನು (FPO) ಇನ್ನಷ್ಟು ಸದೃಢ ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ಪೂರಕವಾದ ತರಬೇತಿ, ಮಾರ್ಗದರ್ಶನ ಹಾಗೂ ಬೆಂಬಲ ನೀಡುವ Agri Accelerator Platform ಮೂಲಕ ಕೃಷಿ ವಲಯದ Start-up ಗಳನ್ನು ಉತ್ತೇಜಿಸಲಾಗುವುದು.

ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲ  ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು. 

ಕೃಷಿಗಾಗಿ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ; ಮಂಡ್ಯದಲ್ಲಿ ವಿಸಿ ಫಾರ ...

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (8) ಸಂಸ್ಥೆಯನ್ನು ಬಲಪಡಿಸಲು ಕ್ರಮವಹಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕಾಗಿ PMFME ಯೋಜನೆಯಡಿಯಲ್ಲಿ 80 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಕೃಷಿ ನಾವೀನ್ಯತೆಯ ಯುಗದಲ್ಲಿ ಪಾರಂಪರಿಕ ಕೃಷಿ ಪದ್ಧತಿಯಲ್ಲಿ ಗಣನೀಯ ಬದಲಾವಣೆಗಳಾಗಿದ್ದು, ಉಪಗ್ರಹ ಚಿತ್ರ, ಸೆನ್ಸರ್‌ಗಳ ಬಳಕೆ  ಮತ್ತು ಮಶೀನ್ ಲರ್ನಿಂಗ್ ನಂತಹ (Machine Learning) ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ಒಂದು ದತ್ತಾಂಶವನ್ನು ಅಭಿವೃದ್ಧಿಪಡಿಸಲಾಗುವುದು. 

Latest Videos
Follow Us:
Download App:
  • android
  • ios