ವೈದ್ಯಕೀಯ ಮತ್ತು ಉನ್ನತ ಶಿಕ್ಷಣಕ್ಕೆ ಸಿದ್ದರಾಮಯ್ಯ ಘೋಷಿಸಿದ ಅನುದಾನಗಳಿವು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು  ಘೋಷಣೆ ಮಾಡಿದ್ದಾರೆ.  ಶಿಕ್ಷಣ ಕ್ಷೇತ್ರಕ್ಕೆ ಬರೋಬ್ಬರಿ  44,422 ಕೋಟಿ ರೂ ಅನುದಾನ ಮೀಸಲಿಡಲಾಗಿದೆ.

Karnataka Budget 2024 List of  Medical and higher education students grants gow

ಬೆಂಗಳೂರು (ಫೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು  ಘೋಷಣೆ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಬರೋಬ್ಬರಿ  44,422 ಕೋಟಿ ರೂ ಅನುದಾನ ಮೀಸಲಿಡಲಾಗಿದೆ. ಪ್ರಮುಖ  ಹೈಲೈಟ್ಸ್ ಗಳ ಪಟ್ಟಿ ಇಲ್ಲಿದೆ.

ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಘೋಷಣೆ, ಮೆಟ್ರೋ, ಟನಲ್ ರೋಡ್‌, ಬಿಎಂಟಿಸಿಗೆ ಸಿಕ್ಕಿದ್ದೆಷ್ಟು?

ಉನ್ನತ ಶಿಕ್ಷಣಕ್ಕೆ ಸಿಕ್ಕಿದ್ದೆಷ್ಟು?

  • ರಾಜ್ಯದದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು  ಸರ್ಕಾರಿ ಮಹಿಳಾ ಪಾಲೆಟೆಕ್ನಿಕ್ ಕಾಲೇಜುಗಳ ಉನ್ನತೀಕರಣಕ್ಕೆ 30 ಕೋಟಿ ರೂ ಅನುದಾನ ಮೀಸಲು
  • ಸರ್ಕಾರಿ  ಪ್ರಥಮ ದರ್ಜೆ ಕಾಲೇಜುಗಳ ಮೂಲಭೂತ ಸೌಕರ್ಯಗಳ ಕಾಮಗಾರಿಗೆ 250 ಕೋಟಿ ರೂ ಮೀಸಲು
  •  ಸರ್ಕಾರಿ  ಪಾಲೆಟೆಕ್ನಿಕ್  ಮತ್ತು ಇಂಜಿನಿಯರಿಂಗ್ ಕಾಲೇಜುಗಳ ಕಾಮಗಾರಿಗಳಿಗೆ 120 ಕೋಟಿ ಮೀಸಲು.
  • ಶಿಕ್ಷಕರ ಮತ್ತು ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ
  • ಕೊಪ್ಪಳ, ಬೀದರ್‌, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯ ಘಟಕಗಳ ಕಾಲೇಜು ಸ್ಥಾಪನೆ
  • ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ 500 ಕೋಟಿ ರೂ  ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿ ಇದಕ್ಕಾಗಿ ರಾಜ್ಯ ಸರ್ಕಾರದಿಂದ 100 ಕೋಟಿ ರೂ ಅನುದಾನ ಮೀಸಲು
  • ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ  ಬೆೇರು-ಚಿಗುರು ಎಂಬ ವಿನೂತನ ಕಾರ್ಯಕ್ರಮ
  • ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಅದ್ಯಾಪಕರಿಗೆ ತಮ್ಮ ಆವಿಷ್ಕಾಕರಗಳಿಗೆ  ಪೇಟೆಂಟ್‌ ಪಡೆದುಕೊಳ್ಳಲು ಆರ್ಥಿಕ ನೆರವಿಗೆ  10 ಕೋಟಿ ರೂ.ಗಳ Corpus Fund ಸ್ಥಾಪನೆ
  • ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಪ್ರೇರಣಾ ಎಂಬ ಕಾರ್ಯಕ್ರಮದಡಿ ಮಾರ್ಗದರ್ಶನ
  • ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ನಿರ್ಮಾಣಕ್ಕೆ 54 ಕೋಟಿ ಅನುದಾನ ಮೀಸಲು
  • ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ 116  ಕೋಟಿ ರೂ ಮೀಸಲು

ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಘೋಷಿಸಿದ ಸಿದ್ದರಾಮಯ್ಯ, 393 ಕೋಟಿ ರೂ ಅನುದಾನ ಮೀಸಲು

ವೈದ್ಯಕೀಯ ಶಿಕ್ಷಣಕ್ಕೆ ಸಿಕ್ಕ ಕೊಡುಗೆಗಳಿವು.

  • ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಆಯುಕ್ತಾಲಯವಾಗಿ ಉನ್ನತೀಕರಿಣ
  • 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನ
  • ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನ 
  • ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಣ
  • ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ
  • ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದಲ್ಲಿ ನಿರ್ಮಾಣವಾಗಿರುವ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ. ಮೀಸಲು
  • ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆ ನೀಡಲು ಕ್ರಮ 
  • ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 Modular OT ಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
  • 10 ಕೋಟಿ ರೂ. ವೆಚ್ಚದಲ್ಲಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಪ್ರಾರಂಭ.
  • ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ Cardiac Unit ಪ್ರಾರಂಭ
  • ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಸಂಸ್ಥೆಗಳಲ್ಲಿ 64 Anaesthesia Workstation ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಕೆ 
  • ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ Human Milk Bank ಘಟಕ ಇದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು, ಮೈಸೂರು ಮತ್ತು ಬಳ್ಳಾರಿಯಲ್ಲಿ ಹೊಸ ಘಟಕಗಳನ್ನು ಸ್ಥಾಪನೆ
  • ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆ ಹಚ್ಚಲು Viral Research & Diagnostic Laboratory (VRDL ಸ್ಥಾಪನೆ
  • ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣ
Latest Videos
Follow Us:
Download App:
  • android
  • ios