Asianet Suvarna News Asianet Suvarna News

ರಾಜ್ಯದಲ್ಲಿ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ಗ್ರೀನ್ ಸಿಗ್ನಲ್; ಆದರ್ಶ ವಿದ್ಯಾಲಯಗಳಲ್ಲಿ ಪಿಯು ಕಾಲೇಜು ಆರಂಭ

ರಾಜ್ಯದ ಎಲ್ಲ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರು ಹಾಗೂ ಪಿಯು ಕಾಲೇಜುಗಳಿಗೆ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಜೊತೆಗೆ, ಆದರ್ಶ ಶಾಲೆಗಳನ್ನು ಪಿಯು ಕಾಲೇಜಿಗೆ ಮೇಲ್ದರ್ಜೆಗೇರಿಸಲಾಗುವುದು.

Karnataka Budget 2024 teachers and lecturers recruitment Adarsh Vidyalaya will upgrade to PUC sat
Author
First Published Feb 16, 2024, 12:46 PM IST

ಬೆಂಗಳೂರು (ಫೆ.16): ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಆದರ್ಶ ವಿದ್ಯಾಲಯಗಳನ್ನು ಇನ್ನುಮುಂದೆ ಪದವಿ ಪೂರ್ವ ಹಂತದವರೆಗೆ ಉನ್ನತೀಕರಣ ಮಾಡಲಾಗುತ್ತದೆ. ಆದರ್ಶ ವಿದ್ಯಾಲಯಗಳಲ್ಲಿ ಪಿಯುಸಿ ವಿಜ್ಷಾನ (ಸೈನ್ಸ್) ಮತ್ತು ವಾಣಿಜ್ಯ (ಕಾಮರ್ಸ್) ವಿಭಾಗಗಳನ್ನು ತೆರೆಯಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭಿಸಲಾಗುವುದು. ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ತಲಾ 10 ಲಕ್ಷ ರೂ. ನಂತೆ ಅನುದಾನ ಒದಗಿಸಲಾಗುವುದು.

ಕರ್ನಾಟಕ ಬಜೆಟ್ 2024: ಶಾಲಾ- ಪಿಯು ಕಾಲೇಜುಗಳಿಗೆ 850 ಕೋಟಿ ರೂ.; 2000 ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಆರಂಭ

20,000 ವಿದ್ಯಾರ್ಥಿಗಳಿಗೆ NEET/JEE/CET ತರಬೇತಿ: 
ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 20,000 ವಿದ್ಯಾರ್ಥಿಗಳಿಗೆ NEET/JEE/CET ತರಬೇತಿ ಕಾರ್ಯಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ.

ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು/ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಈ ಮೂಲಕ ಶಿಕ್ಷಕ ಹಾಗೂ ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗ ಅವಕಾಶ ನೀಡಿದ್ದಾರೆ.

ಕರ್ನಾಟಕ ಬಜೆಟ್ 2024 ಲೈವ್ ಅಪ್‌ಡೇಟ್ಸ್‌ : ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ 

ಇನ್ನುಮುಂದೆ ರಾಜ್ಯ ಶಿಕ್ಷಣ ನೀತಿ ಜಾರಿ:  ಕಳೆದ ಆಯವ್ಯಯದಲ್ಲಿ ಘೋಷಿಸಿರುವಂತೆ, ರಾಜ್ಯದ ಅಸ್ಮಿತೆ ಮತ್ತು ಸಂಸ್ಕೃತಿಗೆ ಅನುಗುಣವಾಗಿ, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡನ್ನು ಸಿದ್ಧಪಡಿಸಲು ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ರಚಿಸಲಾಗಿದೆ. ಆಯೋಗವು ಶೀಘ್ರದಲ್ಲಿಯೇ ವರದಿಯನ್ನು ಸಲ್ಲಿಸಲಿದ್ದು, ಅದರಂತೆ ಪರಿಶೀಲಿಸಿ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು.

ಮಹಿಳಾ ಕಾಲೇಜುಗಳ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು: ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯರ ದಾಖಲಾತಿಯನ್ನು ಹೆಚ್ಚಿಸುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡುತ್ತಾ ಬಂದಿದೆ. ಹಿಂದಿನ ಅಧಿಕಾರಾವಧಿಯಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡುವ ಮಹತ್ತರ ತೀರ್ಮಾನವನ್ನು ಕೈಗೊಂಡಿತ್ತು. ಇದೀಗ ಇನ್ನೊಂದು ಹೆಜ್ಜೆ ಮುಂದಿಡುತ್ತಾ ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಸರ್ಕಾರಿ ಮಹಿಳಾ - ಪಾಲಿಟೆಕ್ನಿಕ್‌ಗಳ ಉನ್ನತೀಕರಣಕ್ಕಾಗಿ ಒಟ್ಟು 30 ಕೋಟಿ ರೂ. ಅನುದಾನ ಒದಗಿಸಲಾಗುವುದು.

Follow Us:
Download App:
  • android
  • ios