ರಾಜ್ಯ ಸರ್ಕಾರವು ವೈದ್ಯಕೀಯ ಶಿಕ್ಷಣ ಬಲಪಡಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ. 177 ಕೋಟಿ ರೂ. ವೆಚ್ಚದಲ್ಲಿ 114 ಮಾಡ್ಯುಲರ್ ಆಪರೇಷನ್ ಥಿಯೇಟರ್, ಗದಗದಲ್ಲಿ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯುನಿಟ್, ಕಲಬುರಗಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪಿಸಲಾಗಿದೆ. ಬಾಗಲಕೋಟೆ ಮತ್ತು ಕೋಲಾರದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಮೈಸೂರು, ಕಲಬುರಗಿಯಲ್ಲಿ ಎಂಡೋಕ್ರೈನಾಲಜಿ ಕೇಂದ್ರಗಳು, ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳು ಮತ್ತು ಕೊಪ್ಪಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಯಾಗಲಿವೆ.

ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಕೆಳಕಂಡ ಉಪಕ್ರಮಗಳನ್ನು ತೆಗೆದುಕೊಂಡಿದ್ದು, ಸಿದ್ದರಾಮಯ್ಯ ಜತಮ್ಮ ಬಜೆಟ್‌ ನಲ್ಲಿ ವಿಶೇಷ ಯೋಜನೆಗಳನ್ನು ಮಂಡಿಸಿದ್ದಾರೆ.

177 ಕೋಟಿ ರೂ. ಮೊತ್ತದಲ್ಲಿ 114 Modular Operation Theater ಗಳನ್ನು, 34 ಕೋಟಿ ರೂ. ವೆಚ್ಚದಲ್ಲಿ 64 Anaesthesia Work Station ಗಳನ್ನು ಸ್ಥಾಪಿಸಲಾಗಿದೆ.

ಗದಗ ಮೆಡಿಕಲ್ ಕಾಲೇಜಿನಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಿಎಂ ಭರ್ಜರಿ ಕೊಡುಗೆ: ಶಿಕ್ಷಣಕ್ಕೆ ಬಂಪರ್, ಹಜ್ ಯಾತ್ರೆಗೆ ಆಫರ್!

ಕಲಬುರಗಿಯಲ್ಲಿ 92 ಕೋಟಿ ರೂ. ವೆಚ್ಚದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಹಾಗೂ 304 ಕೋಟಿ ರೂ. ವೆಚ್ಚದ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. 

26 ಕೋಟಿ ರೂ. ವೆಚ್ಚದ ನೆಪ್ರೊ-ಯುರಾಲಾಜಿ ಪೂರ್ಣಗೊಳಿಸಿ ಸಮರ್ಪಿಸಲಾಗುವುದು. ಸಂಸ್ಥೆಯ ಸಾರ್ವಜನಿಕರ ಬೆಂಗಳೂರಿನ ಕಟ್ಟಡವನ್ನು ಸೇವೆಗೆ

ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜನ್ನು ಹಾಗೂ ಕೋಲಾರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜನ್ನು ಆರಂಭಿಸಲು ಉದ್ದೇಶಿಸಲಾಗಿದೆ.

ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸ‌ರ್ ಪತ್ತೆ ವಿಭಾಗವನ್ನು ಆರಂಭಿಸಲಾಗುವುದು.

Karnataka Budget 2025-26: ರಾಜ್ಯದ ಅಭಿವೃದ್ಧಿಗೆ 6 ಆಯಾಮ; ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಗ್ಯಾರಂಟಿಗಾಗಿ ₹233 ಕೋಟಿ ಹಂಚಿಕೆ

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು.

2025-26 ಸಾಲಿನಲ್ಲಿ ಸಾರ್ವಜನಿಕರಿಗೆ ಸುಧಾರಿತ ಆರೋಗ್ಯ ಸೇವೆಯನ್ನು ಒದಗಿಸಲು ಈ ಕೆಳಕಂಡಂತೆ ಹೊಸ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

ರಾಜ್ಯದ 22 ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯ ಮತ್ತು ಮಾನವ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು.

ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ (Endocrinology) ಕೇಂದ್ರಗಳನ್ನು ಆರಂಭಿಸಲಾಗುವುದು.

ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ತಲಾ 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು.

ರಾಯಚೂರಿನ ರಾಜೀವ ಗಾಂಧಿ ಸೂಪರ್ ಸ್ಪೆಷಾಲಿಟ ಆಸ್ಪತ್ರೆಯ ಆವರಣದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫರೆಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪಿಸಲಾಗುವುದು.

ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ತಲಾ ಆರು ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನರ್ಸಿಂಗ್ ಕಾಲೇಜುಗಳನ್ನು ಆರಂಭಿಸಲಾಗುವುದು. KKRDB ಅನುದಾನದಲ್ಲಿ ಇಲಾಖೆಯಲ್ಲಿ ಖಾಲಿಯಿರುವ Critical Vacancy ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಆದ್ಯತೆಯ (Rationalize) ಮೇಲೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.