Asianet Suvarna News Asianet Suvarna News

ವಿವಿಧ ಜಾತಿ ಸಮುದಾಯಗಳಿಗೆ ಬಜೆಟ್ಟಿನಲ್ಲಿ ಇಷ್ಟಿಷ್ಟು ಕೋಟಿ ಅನುದಾನ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವರ್ಷದ ಬಜೆಟ್‌ನಲ್ಲಿ ವಿಧ ಜಾತಿ ಸಮುದಾಯಗಳಿಗೆ, ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ ಘೋಷಿಸಿದ್ದಾರೆ

Karnataka CM bsy budget allocations hindu Muslim Christ and other communities list rbj
Author
Bengaluru, First Published Mar 8, 2021, 1:25 PM IST

ಬೆಂಗಳೂರು, (ಮಾ.08): 2021ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವರ್ಷವೂ ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ ಘೋಷಿಸಿದ್ದಾರೆ.

ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದು, ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಸಮುದಾಯಗಳಿಗೆ ಮಣೆ ಹಾಕಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು  1,500 ಕೋಟಿ ಮೊತ್ತವನ್ನು ಈ ಬಾರಿಯ ಬಜೆಟ್​ನಲ್ಲಿ ಮೀಸಲಿಟ್ಟಿದ್ದಾರೆ.

Live| Karnataka Budget 2021: ಕ್ಷಣ-ಕ್ಷಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿವಿಧ ಜಾತಿ ಸಮುದಾಯಗಳಿಗೆ ಅನುದಾನ
* ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ ಇಡಲಾಗಿದೆ. 
* ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ ರೂ ಅನುದಾನ ಘೋಷಿಸಲಾಗಿದೆ. 
* ಒಕ್ಕಲಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು, ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ 500 ಕೋಟಿ ರೂ ಅನುದಾನ.
* ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ, ಆದಿಚುಂಚನಗಿರಿ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ ಪ್ರಕಟಿಸಲಾಗಿದೆ.
* ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ.
* ಅಲ್ಪಸಂಖ್ಯಾತ ಸಮುದಾಯಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು  1,500 ಕೋಟಿ ಮೊತ್ತವನ್ನು ಈ ಬಾರಿಯ ಬಜೆಟ್​ನಲ್ಲಿ ಮೀಸಲಿಡಲಾಗಿದೆ.

ಧಾರ್ಮಿಕ ಹಾಗೂ ಮಠಗಳಿಗೂ ಅನುದಾನ
* ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ  50 ಕೋಟಿ ರೂ.
* ವಿಜಯಪುರ ಜಿಲ್ಲೆ ಬಸನವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿರುವ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗೆ  5 ಕೋಟಿ, 
* ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ ಘೋಷಿಸಲಾಗಿದೆ. 
* ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗೂ ಕರ್ನಾಟಕ ಸರ್ಕಾರ  10 ಕೋಟಿ ಅನುದಾನ ಘೋಷಿಸಿದೆ ಎಂದು ಯಡಿಯೂರಪ್ಪ ತಿಳಿಸಿದರು.
* ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್.ಬೈರಪ್ಪ ಅವರ ಪರ್ವ ನಾಟಕ ಪ್ರದರ್ಶನಕ್ಕೆ 1 ಕೋಟಿ ರೂ. ಅನುದಾನ ಘೋಷಿಸಲಾಗಿದೆ. * ರಾಜ್ಯಾದ್ಯಂತ ರಂಗಾಯಣಗಳ ಮೂಲಕ ಪರ್ವ ನಾಟಕವನ್ನು ಪ್ರದರ್ಶಿಸಲಾಗುವುದು.

Follow Us:
Download App:
  • android
  • ios