* ಸ್ವಾತಂತ್ರ್ಯಕ್ಕೂ ಮೊದಲೇ ಕೈಗಾರೀಕರಣ, ಬ್ಯಾಂಕಿಂಗ್ ಬೆಂಬಲಿಸಿದ ಮೈಸೂರು ರಾಜರು* ಇಂಡಿಯಾ ಗ್ಲೋಬಲ್ ಇನ್ನೋವೇಶನ್ ಕನೆಕ್ಟ್ * ನಾವು ಸ್ಪರ್ಧೆಯನ್ನು ವೇಗವರ್ಧಕವಾಗಿ ಪರಿವರ್ತಿಸುತ್ತೇವೆ
ಬೆಂಗಳೂರು(ಜೂ.03): ಸ್ಟಾರ್ಟ್‌ಅಪ್ ಆವಿಷ್ಕಾರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಕೇವಲ ಅಗ್ರ ರಾಜ್ಯಗಳಲ್ಲಿ ಒಂದಾಗಿರದೆ ಸ್ಟಾರ್ಚ್‌ಅಪ್‌ಗಳಿಗೆ ಆಗ್ರ ತಾಣವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಗುರುವಾರ ನಗರದ ಕಾನ್ರಾಡ್ ಹೊಟೇಲ್‌ನಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ, ಕ್ಯಾಟಮರನ್ ವೆಂಚರ್ಸ್ ಮತ್ತು ಟಾಟಾ ಡಿಜಿಟಲ್‌ನ ಸಹಭಾಗಿತ್ವದಲ್ಲಿ ನಡೆದ ಇಂಡಿಯಾ ಗ್ಲೋಬಲ್ ಇನ್ನೋವೇಶನ್ ಕನೆಕ್ಟ್ ಉದ್ಘಾಟಿಸಿ ಮಾತನಾಡಿದರು. ಸ್ಟಾರ್ಟ್‌ಅಪ್‌ಗಳನ್ನು ಬೆಂಬಲಿಸುವಲ್ಲಿ ಕರ್ನಾಟಕ ಸರ್ಕಾರವು ಎಷ್ಟು ದೂರ ಬೇಕಾದರೂ ಹೋಗಲು ಸಿದ್ಧವಿದೆ. ನಾವು ಸ್ಪರ್ಧೆಯ ಬಗ್ಗೆ ಚಿಂತಿಸುವುದಿಲ್ಲ. ಇದು ನಮ್ಮನ್ನು ಮುಂದುವರಿಸುತ್ತದೆ ಮತ್ತು ಬೆಳೆಸುತ್ತದೆ. ನಾವು ಸ್ಪರ್ಧೆಯನ್ನು ವೇಗವರ್ಧಕವಾಗಿ ಪರಿವರ್ತಿಸುತ್ತೇವೆ ಎಂದು ಹೇಳಿದರು.
Electric Battery ಬೆಂಗಳೂರು ಸ್ಟಾರ್ಟ್‌ಅಪ್‌ನಿಂದ ಅತೀ ವೇಗವಾಗಿ ಚಾರ್ಜ್, ಬೆಂಕಿ ಹತ್ತಿಕೊಳ್ಳದ ಬ್ಯಾಟರಿ ಸಂಶೋಧನೆ!
ಭಾರತ ಮತ್ತು ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ಆವಿಷ್ಕಾರ ಮತ್ತು ಉದ್ಯಮಶೀಲತೆಯ ಕ್ರಿಯಾತ್ಮಕ ಕೇಂದ್ರವಾಗಿ ಕರ್ನಾಟಕ ಪ್ರೊಫೈಲ್‌ಅನ್ನು ಹೆಚ್ಚಿಸುವ ಕೊಡುಗೆ ನೀಡುವ ಮೂಲಕ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಈ ಕಾರ್ಯಕ್ರಮದಲ್ಲಿ ಅವಿಭಾಜ್ಯ ಪಾತ್ರ ವಹಿಸಿದೆ. ಸ್ವಾತಂತ್ರ್ಯ ಸಿಗುವ ಮೊದಲೇ ಕೈಗಾರೀಕರಣ, ಬ್ಯಾಂಕಿಂಗ್ ಅನ್ನು ಬೆಂಬಲಿಸಿದ ಮೈಸೂರು ಮಹಾರಾಜರು ಸ್ಟಾರ್ಟ್‌ಅಪ್ ಕ್ರಾಂತಿಯ ಬೀಜಗಳನ್ನು ಬಿತ್ತಿದರು ಎಂದರು.
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಧ್ಯಕ್ಷ ಬಿ.ವಿ.ನಾಯ್ಡು ಮಾತನಾಡಿ, ಕರ್ನಾಟಕವನ್ನು ಇನ್ನೋವೇಷನ್ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಸ್ಥಾಪಿಸಿ ಸಂಸ್ಥೆಯು ಅವಿರತವಾಗಿ ಶ್ರಮಿಸುತ್ತಿದೆ. ದೇಶದ ಅಭಿವೃದ್ಧಿ ಮತ್ತು ಡಿಜಿಟಲ್ ಆರ್ಥಿಕತೆಗೆ ಕೊಡುಗೆ ನೀಡಬಲ್ಲ ನವ ಉದ್ಯಮಗಳಿಗೆ ಉತ್ತಮ ವೇದಿಕೆಯನ್ನು ರಚಿಸಲು ನೀತಿ ನಿರೂಪಕರು ಮತ್ತು ಉದ್ಯಮದ ನಡುವೆ ಸೇತುವೆಯನ್ನು ನಿರ್ಮಿಸಲು ನಾವು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.
ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಭಾರತ, ಸಿಂಗಾಪುರ ಇಸ್ರೇಲ್, ಸ್ವಿಡ್ಜರ್ಲೆಂಡ್, ಅಮೆರಿಕ, ಜಪಾನ್, ಕೊರಿಯಾ ಮತ್ತು ಜರ್ಮನಿಯ ಅಂತಾರಾಷ್ಟ್ರೀಯ ಹೂಡಿಕೆದಾರರು, ಉದ್ಯಮಿಗಳು ಭಾಗವಹಿಸಿದ್ದಾರೆ.
