06:39 PM (IST) Feb 16

'ಎಣ್ಣೆ ಪ್ರೀಮಿಯಂ ಬ್ರ್ಯಾಂಡ್‌ಗಳ ರೇಟ್‌ ಕಡಿಮೆ ಮಾಡ್ತಿದ್ದೀವಿ..'

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಮದ್ಯದ ದರವನ್ನು ಪರಿಷ್ಕರಣೆ ಮಾಡುವ ಘೋಷಣೆ ಮಾಡಿದೆ. ಬಿಯರ್‌ ಬೆಲೆಯನ್ನು ಏರಿಕೆ ಮಾಡುವ ಸೂಚನೆ ನೀಡಿರುವ ರಾಜ್ಯ ಸರ್ಕಾರ ಎಷ್ಟು ಮಾಡಲಾಗುತ್ತದೆ ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುವುದಾಗಿ ತಿಳಿಸಿದೆ.

'ಸಾಹುಕಾರರ ಎಣ್ಣೆ-ಬಡವರ ಎಣ್ಣೆ..' ಸುದ್ದಿಗೋಷ್ಠಿಯಲ್ಲಿ ಸಿಎಂ-ಡಿಸಿಎಂ ಸಖತ್‌ ಚರ್ಚೆ!

ನೋಡ್ತಾ ಇರಿ, ಈ ಎಣ್ಣೆ ಬ್ರ್ಯಾಂಡ್‌ಗಳ ರೇಟ್‌ ಕಡಿಮೆ ಆಗುತ್ತೆ - #siddaramaiah #shorts #karnatakabudget2024

04:54 PM (IST) Feb 16

'ಉತ್ತರ ಪ್ರದೇಶಕ್ಕೆ ಕೊಡಿ, ಆದರೆ ನಮ್ಮನ್ನು ಹಸಿವಿನಲ್ಲಿ ಇಡಬೇಡಿ'

ರಾಜ್ಯ ಬಜೆಟ್ ಮಂಡನೆ ಮಾಡಿದ ಬಳಿಕ ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಉತ್ತರ ಪ್ರದೇಶ ಸೇರಿದಂತೆ ಬೇರೆ ರಾಜ್ಯಗಳಿಗೆ ಹಣ ಕೊಡಬೇಡಿ ಎಂದು ನಾನು ಎಲ್ಲಿಯೂ ಹೇಳಿಲ್ಲ. ಆದರೆ, ನಮ್ಮನ್ನು ಹಸಿದ ಹೊಟ್ಟೆಯಲ್ಲಿ ಇಡಬೇಡಿ ಅಷ್ಟೇ. ಚಿನ್ನದ ಕೋಳಿಯನ್ನು ಕೊಯ್ದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. 

ಬಿಜೆಪಿಗರ ತಲೆಯಲ್ಲಿ ರಾಜಕೀಯ ನಂಜಿದೆ, ನಿಜ ಮಾತನಾಡಿದ್ರೆ ಅವರಿಗೆ ಉರಿ ಎಂದ ಸಿದ್ದರಾಮಯ್ಯ

04:44 PM (IST) Feb 16

ಬಾಕಿ ನೀರಾವರಿ ಯೋಜನೆಗಳ ಪೂರ್ಣಕ್ಕೆ ಆದ್ಯತೆ

ಇಂದು ಮಂಡನೆಯಾದ ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಜಲಸಂಪನ್ಮೂಲ ಹಾಗೂ ನೀರಾವರಿ ಕ್ಷೇತ್ರಗಳಲ್ಲಿ ಬಾಕಿ ಉಳಿದಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಆದ್ಯತೆ ನೀಡಿದ್ದಾರೆ. 

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

03:49 PM (IST) Feb 16

ಸಿದ್ದರಾಮಯ್ಯರಿಗೆ ಡಿಕೆಶಿ ಅಭಿನಂದನೆ

ಡಿಸಿಎಂ ಡಿಕೆಶಿ ಹೇಳಿಕೆ.

ಮೊದಲು ನಾನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸ್ತೇನೆ. 15 ನೇ ಬಜೆಟ್ ದೇಶಕ್ಕೆ ಮಾದರಿ ಬಜೆಟ್. 3 ಲಕ್ಷ ಕೋಟಿ 71 ಸಾವಿರ ಕೋಟಿ. ಈ ಬಜೆಟ್ ಆತ್ಮವಿಶ್ವಾಸ ಎಷ್ಟಿತ್ತು ಅಂದ್ರೆ, ವಿಪಕ್ಷಗಳು ಕೂರಲಿಲ್ಲ.ಇಷ್ಟು ಅಭಿವೃದ್ಧಿ ಮಾಡಿದ್ರಲ್ಲಾ ಅಂತ ಕೈ ಹೊಸಕಿಕೊಂಡು ಹೊರಗೆ ಹೋದ್ರು.81 ರಿಂದ ಅಸೆಂಬ್ಲಿಯಲ್ಲಿ ಇದ್ದೀನಿ‌. ಯಾವುದೇ ವಿಪಕ್ಷಗಳು ಆಡಳಿತ ಮಾಡಿದ್ದಾರೆ.ಯಾರೂ ಕೂಡ ಬಜೆಟ್ ಬಾಯ್ಕಾಟ್ ಮಾಡಿ ಹೊರಗೆ ಬಂದಿಲ್ಲ. ಬಾಯ್ಕಾಟ್ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ. ಬಜೆಟ್ ಪಾಸ್ ಮಾಡಿಲ್ಲ.ಸರ್ಕಾರಿ ನೌಕರರಿಗೆ ಸಂಬಳ ಕೊಡಬೇಕು, ಮಹಿಳೆಯರಿಗೆ 2 ಸಾವಿರ ಕೊಡಬೇಕು.ಮನೆಗೆ ವಿದ್ಯುತ್ ಶಕ್ತಿ ನೀಡಬೇಕು.ಎಲ್ಲೆಡೆ ಉಚಿತವಾಗಿ ಬಸ್ಸಲ್ಲಿ ಓಡಾಡ್ತಿದ್ದಾರೆ ಅವರಿಗೆ ಅವಮಾನ ಮಾಡಿದ್ದಾರೆ.ರಾಜ್ಯದ ಜನತೆಗೆ ಅವಮಾನ ಮಾಡಿದ ವಿಶೇಷ ಒ್ರಕರಣ ನಡೆದಿದೆ.ಎಲ್ಲಾ ಬಿಜೆಪಿ, ಜೆಡಿಎಸ್‌ ಶಾಸಕರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ.

03:22 PM (IST) Feb 16

ಹುಬ್ಬಳ್ಳಿ- ಧಾರವಾಡಕ್ಕೆ ಸಿಕ್ಕಿದ್ದೇನು?

- ಬೆಣ್ಣಿಹಳ್ಳದ ಪ್ರವಾಹ ತಡೆಗೆ ತಡೆಗೋಡೆ ನಿರ್ಮಾಣಕ್ಕೆ ಅಸ್ತು
- ಖಾಸಗಿ ಸಹಭಾಗಿತ್ವದಲ್ಲಿ ಹುಬ್ಬಳ್ಳಿಗೆ bio cng plant ಸ್ಥಾಪನೆ; ಈ ಮೂಲಕ ಶೂನ್ಯ ತ್ಯಾಜ್ಯ ಮಾರುಕಟ್ಟೆಯನ್ನಾಗಿ ಪರಿವರ್ತನೆ
- ಧಾರವಾಡದ ವಾಲ್ಮಿ ಸಂಸ್ಥೆಯ ಉನ್ನತೀಕರಣಕ್ಕೆ ಅಸ್ತು
- ಧಾರವಾಡದಲ್ಲಿ ತೀವ್ರ ಅಸ್ವಸ್ಥೆಯಿಂದ ಬಳಲುವ ರೋಗಿಗಳಿಗಾಗಿ ಕ್ರಿಟಿಕಲ್ ಕೇರ್ ಬ್ಲಾಕ್ ನಿರ್ಮಾ
- ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಜೆ ವ್ಯಾಪ್ತಿಯಲ್ಲಿ ತಡರಾತ್ರಿ 1ರವರೆಗೆ ವ್ಯಾಪಾರ ವಹಿವಾಟುವಿಗೆ ಅಸ್ತು
- ಹುಬ್ಬಳಿ- ಧಾರವಾಡಗಳಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ಅಭಿವೃದ್ಧಿ
- ರೈಲ್ವೆ ಅಭಿವೃದ್ಧಿ ಯೋಜನೆಗಳಿಗೆ 9 ಸಶವಿರ ಕೋಟಿಗೂ ಹೆಚ್ಚು ಅನುದಾನ ನೀಡಲು ಭರವಸೆ
- ಮುಂಬೈ- ಬೆಂಗಳೂರು ಎಕನಾಮಿಕ್ ಕಾರಿಡಾರ್ ವ್ಯಾಪ್ತಿಗೆ ಬರುವ ಧಾರವಾಡ ಜಿಲ್ಲೆಯಲ್ಲಿ 6 ಸಾವಿರ ಎಕರೆ ಪ್ರದೇಶದ ಕೈಗಾರಿಕಾ ನೋಡ್
- ಧಾರವಾಡದಲ್ಲಿ ವಿಜ್ಞಾನ ಕೇಂದ್ರದಲ್ಲಿ ತಾರಾಲಯ ಕಾರ್ಯರಂಭ ಮಾಡಲಿದೆ

03:16 PM (IST) Feb 16

ಸಂಚಾರ ದಟ್ಟಣೆ ನಿರ್ವಹಿಸಲು ಬೆಳಗಾವಿಗೆ ಮೇಲ್ಸುತೆವೆ

ಬೆಳಗಾವಿ: 2024-25ರ ಕರ್ನಾಟಕ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

03:15 PM (IST) Feb 16

ಬಜೆಟ್ ನಲ್ಲಿ ಕೊಡಗಿಗೆ ಸಿಕ್ಕಿದ್ದು...

*ಜಿಲ್ಲಾಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆಹಚ್ಚಲು ವೈರಲ್ ರೀಸರ್ಚ್ ಮತ್ತು ಡೈಯಾಗನೋಸ್ಟಿಕ್ ಲ್ಯಾಬೋರೇಟರಿ ಸ್ಥಾಪನೆ 
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ ಕಾರ್ಡಿಯಾಕ್ ಯೂನಿಟ್ ಆರಂಭ 
*ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಚಟುವಟಿಕೆ ಆಧಾರಿತ ಪರಿಸರವನ್ನು ಒದಗಿಸಲು ಈಗಾಗಲೇ ಅನುಮೋದನೆಗೊಂಡಿರುವ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳನ್ನು ಮಡಿಕೇರಿಯಲ್ಲಿ ನಿರ್ಮಿಸುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪ 
*ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣ
*ವಿರಾಜಪೇಟೆಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣವನ್ನು ನಿರ್ಮಾಣ 
*ಅಂದಾಜು 36 ಕೊಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ನಿರ್ಮಾಣವಾಗಲಿರುವ ಸ್ಥಳಗಳ ಪಟ್ಟಿಯಲ್ಲಿ ಮಡಿಕೇರಿಗೂ ಸ್ಥಾನ

02:38 PM (IST) Feb 16

ಕರಾವಳಿ ಕಡೆಗೆ ಕಣ್ಣು ಬಿಟ್ಟ ಸಿಎಂ

ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ ನೀಡಲಾಗುವುದು. ಬಂದರು, ರೈಲು ಮತ್ತು ವಿಮಾನ ಸಂಪರ್ಕವನ್ನು ಒದಗಿಸುವ ಮೂಲಕ ಕೆಲವು ವರ್ಷಗಳಲ್ಲಿ ಅಂದಾಜು 20,000 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸುವ ಗುರಿ ಹೊಂದಿದ್ದೇವೆ.
* ಸಾಗರಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ಉದ್ದೇಶದಿಂದ ಅಂದಾಜು 1,017 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 26 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇವುಗಳ ಪೈಕಿ ರಾಜ್ಯದ ಪಾಲು 530 ಕೋಟಿ ರೂ.ಗಳಾಗಿದೆ. ಮುಂದುವರೆದು, ಇನ್ನೂ 1,145 ಕೋಟಿ ರೂ. ಮೊತ್ತದ 12 ಕಾಮಗಾರಿಗಳ ವಿಸ್ತೃತ ಯೋಜನಾ ವರದಿಗಳನ್ನು ಕೇಂದ್ರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.
• ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸಾಮರ್ಥ್ಯದ ಮತ್ತು ೪,೨೦೦ ಕೋಟಿ ರೂ. ಅಂದಾಜು ಯೋಜನಾ ವೆಚ್ಚದ ಹೊಸ ಆಳಸಮುದ್ರ ಸರ್ವಋತು ಬಂದರನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. 
• ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಅಂದಾಜು ೩೦೪೮ ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಎರಡನೇ ಬೃಹತ್ ಬಂದರಿನ ಅಭಿವೃದ್ಧಿಗೆ ಅಂತರಾಷ್ಟ್ರೀಯ ಟೆಂಡರ್ ಅನ್ನು ಕರೆಯಲಾಗಿದೆ.
• ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಾಲ್ಕು ಬರ್ತ್ಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.
• ಕಾರವಾರ, ಹಳೆ ಮಂಗಳೂರು ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಸುಗಮ ಸಂಚಾರಕ್ಕಾಗಿ ಹೂಳೆತ್ತುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಗೊಳ್ಳಲಾಗುತ್ತಿದೆ.
• ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುತ್ತಿದೆ.
• ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆ ಕಾಮಗಾರಿಯನ್ನು ಕೈಗೊಳ್ಳಲಾಗುವುದು. 
• ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯ ತೊಡಕುಗಳನ್ನು ನಿವಾರಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. 
*ಮುರ್ಡೇಶ್ವರದಲ್ಲಿ ಮತ್ಸ್ಯ ಸಂಶೋಧನಾ ಸಂಸ್ಥೆ ಹಾಗೂ ಹೊರಬಂದರು.

02:38 PM (IST) Feb 16

ಬಜೆಟ್ ನಲ್ಲಿ ಗದಗ ಜಿಲ್ಲೆಗೆ ಸಿಕ್ಕಿದ್ದೇನು ?

* ಗದಗನಲ್ಲಿ ನೂತನವಾಗಿ ನಿಮಿರ್ಸಿದ 450 ಹಾಸಿಗೆಗಳ ಆಸ್ಪತ್ರೆಗೆ ವೈದ್ಯಕಿಯ ಉಪಕರಣ ಮತ್ತು ಪಿಠೋಪಕರಣ ಖರೀದಿಗೆ ಅನುದಾನ (ಗದಗ, ಕೊಪ್ಪಳ, ಚಾಮರಾಜ ನಗರ ಸೇರಿ 150 ಕೋಟಿ)
* ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ
* ಜಿಲ್ಲೆಯ ರೋಣ ಪಟ್ಟಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ 150 ಕೋಟಿ ವೆಚ್ಚದಲ್ಲಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಸ್ಥಾಪನೆ.
* ಜಿಲ್ಲೆಯ ರೋಣ & ಮಲ್ಲಾಪುರ ರಸ್ತೆ ಅಭಿವೃದ್ಧಿ
* ಗದಗ ಜಿಲ್ಲಾಸ್ಪತ್ರೆಯಲ್ಲಿ 10 ಕೋಟಿ ವೆಚ್ಚದಲ್ಲಿ ಸುಪರ್ ಸ್ಪೆಷಾಲಿಟಿ ಕಾಡಿರ್ಕ್ ಟಕ ಸ್ಥಾಪನೆ ಮತ್ತು ಅನಸ್ತೆಷಿಯಾ ಘಟಕ
* ಗದಗ ಜಿಲ್ಲೆಯ ಜಾಲವಾಡಗಿ ಏತ ನೀರಾವರಿಗೆ ಅನುದಾನ
* ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೀತಲ ಘಟಕ ನಿರ್ಮಾಣ
* ಜವಳಿ ಪಾರ್ಕ್, ಶಿರಹಟ್ಟಿ ಯಲ್ಲಿ 100 ಹಾಸಿಗೆ ಸಾಮರ್ಥ್ಯ ತಾಲೂಕು ಆಸ್ಪತ್ರೆ ನಿರ್ಮಾಣ.

02:37 PM (IST) Feb 16

ಬೆಂಗಳೂರಿನಗೆ ಕೊಡುಗೆ: ಸಿಎಂ ಅಭಿನಂದಿಸಿದಿ ಎಸ್ಟಿ ಸೋಮಶೇಖರ್

ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆ.

ಬೆಂಗಳೂರಿನ ಬಗ್ಗೆ ಮಾತಾಡ್ತೇನೆ. ಸಿಎಂ, ಡಿಸಿಎಂಗೆ ಅಭಿನಂಧನೆ ಹೇಳ್ತೆನೆ. 5 ಕಸದ ಘಟನ ಇದ್ವು, ಅವುಗಳನ್ನ ಹೊರಗೆ ಹಾಕುವ ಬಗ್ಗೆ ಹೇಳಿದ್ದಾರೆ. ಜನರ ಸಂಕಷ್ಟ ನಿವಾರಣೆಗೆ ಸಿಎಂ ಕ್ರಮ ತೆಗೆದುಕೊಂಡಿದ್ದಾರೆ. ನೂರತ್ತಳ್ಳಲಿಗೆ ಕಾವೇರಿ ನೀರಿನ ಸೌಲಭ್ಯ ಮಾಡುವ ಭರವಸೆ ನೀಡಿದ್ದಾರೆ. ಸಂಚಾರ ಸಮಸ್ಯೆ ನಿವಾರಣೆ ಬಗ್ಗೆ ಹೇಳಿದ್ದಾರೆ. ವೈಟ್ ಟ್ಯಾಪಿಂಗ್ ಬಗ್ಗೆ ಕ್ಲಿಯರ್ ಮಾಡುವ ಬಗ್ಗೆ ಹೇಳಿದ್ದಾರೆ...

02:35 PM (IST) Feb 16

ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ.

* ನವಲಿ ಸಮಾನಾಂತರ ಜಲಾಶಯ ಅನುಷ್ಠಾನ ಸಂಬಂಧ ತೆಲಂಗಾಣ, ಆಂದ್ರಪ್ರದೇಶದ ಜತೆ ಸಮಾಲೋಚನೆ ಪ್ರಕ್ರಿಯೆಯಲ್ಲಿದ್ದು, ಯೋಜನೆ ಚಾಲನೆಗೆ ಆದ್ಯತೆ.

* ಕೊಪ್ಪಳದ 450 ಹಾಸಿಗೆ ಆಸ್ಪತ್ರೆಗೆ ಪೀಠೋಪಕರಣ ಖರೀದಿಗೆ ಅನುದಾನ. 

* ಯಲಬುರ್ಗಾ ಹಾಗೂ ಕುಕನೂರು ತಾಲೂಕಿನ 38 ಕೆರೆಗಳನ್ನು ತುಂಬಿಸುವ ಯೋಜನೆ ಮತ್ತು ಕೆರೆ/ ಬ್ರಿಡಜ್ ಕಂ ಬ್ಯಾರೇಜ್ ಯೋಜನೆ ಕೈಗೆತ್ತಿಕೊಳ್ಳಲಾಗುವುದು. 

* ಯಲಬುರ್ಗಾ ಎಪಿಎಂಸಿಯಲ್ಲಿ ಶೀತಲಗೃಹ ನಿರ್ಮಾಣ.

* ಕೆಕೆಆರ್ ಡಿಬಿಯಿಂದ ವಿವಿ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು. 

* ಆರೋಗ್ಯ ಇಲಾಖೆ : ಪ್ರಸಕ್ತ ಸಾಲಿನಲ್ಲಿ ಕ್ರಿಟಿಕಲ್ ಕೇರ್ ಸ್ಥಾಪಿಸಲಾಗುವುದು. 

* ಕೊಪ್ಪಳದ ತಳಕಲ್ ನಲ್ಲಿ ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ.

02:26 PM (IST) Feb 16

ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ.

* ನವಲಿ ಸಮಾನಾಂತರ ಜಲಾಶಯ ಅನುಷ್ಠಾನ ಸಂಬಂಧ ತೆಲಂಗಾಣ, ಆಂದ್ರಪ್ರದೇಶದ ಜತೆ ಸಮಾಲೋಚನೆ ಪ್ರಕ್ರಿಯೆಯಲ್ಲಿದ್ದು, ಯೋಜನೆ ಚಾಲನೆಗೆ ಆದ್ಯತೆ.

* ಕೊಪ್ಪಳದ 450 ಹಾಸಿಗೆ ಆಸ್ಪತ್ರೆಗೆ ಪೀಠೋಪಕರಣ ಖರೀದಿಗೆ ಅನುದಾನ. 

* ಯಲಬುರ್ಗಾ ಹಾಗೂ ಕುಕನೂರು ತಾಲೂಕಿನ 38 ಕೆರೆಗಳನ್ನು ತುಂಬಿಸುವ ಯೋಜನೆ ಮತ್ತು ಕೆರೆ/ ಬ್ರಿಡಜ್ ಕಂ ಬ್ಯಾರೇಜ್ ಯೋಜನೆ ಕೈಗೆತ್ತಿಕೊಳ್ಳಲಾಗುವುದು. 

* ಯಲಬುರ್ಗಾ ಎಪಿಎಂಸಿಯಲ್ಲಿ ಶೀತಲಗೃಹ ನಿರ್ಮಾಣ.

* ಕೆಕೆಆರ್ ಡಿಬಿಯಿಂದ ವಿವಿ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು. 

* ಆರೋಗ್ಯ ಇಲಾಖೆ : ಪ್ರಸಕ್ತ ಸಾಲಿನಲ್ಲಿ ಕ್ರಿಟಿಕಲ್ ಕೇರ್ ಸ್ಥಾಪಿಸಲಾಗುವುದು. 

* ಕೊಪ್ಪಳದ ತಳಕಲ್ ನಲ್ಲಿ ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ.

02:25 PM (IST) Feb 16

ಹಾವೇರಿ ಜಿಲ್ಲೆಗೆ ಸಿಕ್ಕಿದ್ದೇನು?

* ರಾಣೆಬೆನ್ನೂರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೀತಲಗೃಹ.
* ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭಿಸಲಾಗುವುದು.
* ಹಾವೇರಿ ವಿಜ್ಞಾನ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಪೂರ್ಣಗೊಳಿಸಲಾಗುವುದು.
* ತ್ರಿಪದಿಗಳ ಮೂಲಕ ಜೀವನಸಾರವನ್ನು ಹೇಳಿದ ವಚನಕಾರ ಸರ್ವಜ್ಞನ ಸ್ಮಾರಕವನ್ನು ಹಿರೇಕೆರೂರ ತಾಲೂಕಿನಲ್ಲಿ ಅಭಿವೃದ್ಧಿಪಡಿಸಲಾಗುವುದು.

01:58 PM (IST) Feb 16

ಈಗ ಕರಾವಳಿಯ ನೇತ್ರಾವತಿ, ಗುರುಪುರ ನದಿಗಳಲ್ಲಿ ಜಲಮೆಟ್ರೋ ಸೇವೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಪ್ರಮುಖ ಹೈಲೈಟ್ಸ್ ಗಳ ಪಟ್ಟಿ ಇಲ್ಲಿದೆ.

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

01:27 PM (IST) Feb 16

ದೇವಸ್ಥಾನದ 500 ಕೋಟಿಯಲ್ಲಿ 330 ಕೋಟಿ ರೂ ವಕ್ಫ್, ಕ್ರಿಶ್ಚಿಯನ್‌ಗೆ ದಾನ, ಬಜೆಟ್ ವಿರುದ್ಡ ಆಕ್ರೋಶ!

ಕರ್ನಾಟಕದ ದೇವಸ್ಥಾನಗಳಿಂದ ಸರಿಸುಮಾರು 500 ಕೋಟಿ ರೂ ಆದಾಯ ಸಂಗ್ರಹವಾಗುತ್ತಿದೆ. ಈ ಪೈಕಿ 330 ಕೋಟಿ ರೂಪಾಯಿ ಹಣವನ್ನು ಹಜ್ ಭವನ ನಿರ್ಮಾಣ, ವಕ್ಫ್ ಬೋರ್ಡ್ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ ನೀಡಲಾಗಿದೆ. ಇದು ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಸರ್ಕಾರದಿಂದ ದೇವಸ್ಥಾನಗಳನ್ನು ಮುಕ್ತಿಗೊಳಿಸಿ ಹೋರಾಟ ಮತ್ತೆ ಶುರುವಾಗಿದೆ.

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

01:21 PM (IST) Feb 16

ಕೌಶಲ್ಯಾಭಿವೃದ್ಧಿಗೆ ಆದ್ಯತೆ

211. ನಿರುದ್ಯೋಗಿ ಯುವಜನರಲ್ಲಿ ಭರವಸೆ ತುಂಬಿ, ಉದ್ಯೋಗ ಪಡೆದುಕೊಳ್ಳುವತ್ತ ಬೆಂಬಲ ನೀಡುವ ಯೋಜನೆ ಯುವನಿಧಿ. ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಡಿಬಿಟಿ ಮೂಲಕ ನೆರವು ವರ್ಗಾಯಿಸಲಾಗುತ್ತಿದೆ.

212. ರಾಜ್ಯದ ಮಾನವ ಸಂಪನ್ಮೂಲದ ಸಮರ್ಪಕ ಬಳಕೆ ಮಾಡಲು ಮತ್ತು ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶಗಳನ್ನು ಒದಗಿಸಲು ರಾಜ್ಯ ಕೌಶಲ್ಯ ನೀತಿಯನ್ನು ಸಿದ್ಧಪಡಿಸಲಾಗುವುದು.

213. ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ನೀಡುತ್ತಿರುವ ಕೋರ್ಸುಗಳಲ್ಲಿ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು 25,000 ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು. ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗಾಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಯುವಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುವುದು. 

214. ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿಯನ್ನು ಸ್ಥಾಪಿಸಲಾಗುವುದು 

215. ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ ಒಟ್ಟು 350 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಮೊದಲನೇ ಹಂತದ ಯೋಜನೆಯನ್ನು ಮೂರು ವರ್ಷಗಳ ಅವಧಿಯಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

216. ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕ ಹಾಗೂ ಗದಗ ಜಿಲ್ಲೆಯ ರೋಣದಲ್ಲಿ NABARD ಸಹಯೋಗದೊಂದಿಗೆ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿ ಗಳನ್ನು ಪ್ರಾರಂಭಿಸಲಾಗುವುದು. 

217. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಮೆಕ್ಯಾಟ್ರಾನಿಕ್ಸ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ರೊಬೊಟಿಕ್ಸ್ ಇತ್ಯಾದಿ ಹೆಚ್ಚುವರಿ ಡಿಪ್ಲೊಮ ಕೋರ್ಸ್ಗಳನ್ನು ವಿವಿಧ ಜಿ.ಟಿ.ಟಿ.ಸಿ ಗಳಲ್ಲಿ 
ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ 15,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

218. ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ ಸಿ.ಎನ್.ಸಿ (Computer Numerical Control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಠತಾ ಕೇಂದ್ರವನ್ನು 16 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

219. ಐ.ಟಿ.ಐ. ಮತ್ತು ಜಿ.ಟಿ.ಟಿ.ಸಿ. ವಿದ್ಯಾರ್ಥಿಗಳಿಗೆ ಉದ್ಯೋಗ ನಿಯುಕ್ತಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂವಹನ ಕೌಶಲ್ಯ ತರಬೇತಿಯನ್ನು 5 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು. ಇದರಿಂದ ಸುಮಾರು 40,000ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳಿಗೆ ಪ್ರಯೋಜನವಾಗಲಿದೆ. 

220. ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ಮತ್ತು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರಶಿಕ್ಷಣಾರ್ಥಿಗಳನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್ ಅನ್ನು ಆಯೋಜಿಸಲಾಗುವುದು. 

221. ಉದ್ಯೋಗಶೀಲತೆಯನ್ನು ಹೆಚ್ಚಿಸಲು Dual System of Training (DST) ಅನ್ನು ರಾಜ್ಯದ ಎಲ್ಲಾ ಐ.ಟಿ.ಐ ಗಳಲ್ಲಿ ಸ್ಥಳೀಯ ಕೈಗಾರಿಕೆಗಳು ಹಾಗೂ ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿ ವಿಸ್ತರಿಸಲಾಗುವುದು.

222. ರಾಜ್ಯದಲ್ಲಿ ಉದ್ಯಮಗಳ ಬೇಡಿಕೆಗೆ ಪೂರಕವಾದ ಉತ್ತಮ ಗುಣಮಟ್ಟದ ಕೌಶಲ್ಯ ಪರಿಸರ ವ್ಯವಸ್ಥೆಯನ್ನು ರಚಿಸುವತ್ತ ಗಮನಹರಿಸಲು ಸ್ಕಿಲ್ ಕನೆಕ್ಟ್ ಸಮಿಟ್ ಅನ್ನು (Skill Connect Summit) ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಆಯೋಜಿಸಲಾಗುವುದು.

223. ಕೆ.ಎಸ್.ಡಿ.ಸಿ ಅಡಿಯಲ್ಲಿ ಸ್ಥಾಪಿಸಲಾಗಿರುವ ಅಂತಾರಾಷ್ಟ್ರೀಯ ವಲಸೆ ಕೋಶದ ಮೂಲಕ ವಿದೇಶಿ ಉದ್ಯೋಗದಾತರೊಂದಿಗೆ ಸಂವಾದಗಳನ್ನು ನಡೆಸಲಾಗುತ್ತಿದೆ. ಸದರಿ ಕೋಶವನ್ನು ಬಲಪಡಿಸಿ ಉದ್ಯೋಗಾಕಾಂಕ್ಷಿಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಅಗತ್ಯ ಸಮನ್ವಯ ಕಾರ್ಯಗಳನ್ನು ಕೈಗೊಳ್ಳಲಾಗುವುದು.

224. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಸಂಸ್ಥೆಗಳಲ್ಲಿ ನೇಮಕಾತಿಗಾಗಿ ಹೊರಡಿಸಲಾಗುವ ಅಧಿಸೂಚನೆಗಳನ್ನು ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಒಂದೇ ಜಾಲತಾಣದಲ್ಲಿ ಪ್ರಕಟಿಸಲಾಗುವುದು. 

225. ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣವನ್ನು ಸಕ್ರಿಯಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ 50,000 ಎಸ್.ಹೆಚ್.ಜಿ. ಮಹಿಳಾ ಸ್ವಾಮ್ಯದ ಸೂಕ್ಷ್ಮ ಉದ್ಯಮಗಳನ್ನು ಎರಡು ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು.

226. IIM-B ಸಹಯೋಗದೊಂದಿಗೆ ಎಲ್ಲಾ 31 ಜಿಲ್ಲೆಗಳಲ್ಲಿ ಉದ್ಯಮಿಗಳನ್ನು ಉತ್ತೇಜಿಸಲು ಜಿಲ್ಲಾ ಮಟ್ಟದ ಇನ್ಕ್ಯುಬೇಶನ್ ಕೇಂದ್ರಗಳನ್ನು (DLIC) ಹಂತ ಹಂತವಾಗಿ ಸ್ಥಾಪಿಸಲಾಗುವುದು. ಮೊದಲನೇ ಹಂತದಲ್ಲಿ ಆಯ್ದ 10 ಜಿಲ್ಲೆಗಳಲ್ಲಿ ಇನ್ಕ್ಯುಬೇಶನ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

227. ಒಂದು ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಕ್ಕುಟ, ಕುರಿ ಮತ್ತು ಮೇಕೆ ಸಾಕಾಣಿಕೆ, ಜೇನು ಸಾಕಾಣಿಕೆ ಸಂಬಂಧಿಸಿದ ಕಿರು ಉದ್ದಿಮೆಗಳನ್ನು ಸ್ಥಾಪಿಸಲು ಮತ್ತು ಅವುಗಳಿಗೆ ಸೂಕ್ತ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲು 100 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.

228. ಕೆಫೆ ಸಂಜೀವಿನಿ ಎಂಬ ಮಹಿಳೆಯರೇ ನಡೆಸುವ ಕ್ಯಾಂಟೀನ್ಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 7.5೦ ಕೋಟಿ ರೂ. ವೆಚ್ಚದಲ್ಲಿ 50 ಕೆಫೆಗಳನ್ನು ಸ್ಥಾಪಿಸಲಾಗುವುದು.

229. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. ಇದರ ಜೊತೆಯಲ್ಲಿ 2500 ಕಾಫಿ ಕಿಯೋಸ್ಕ್ಗಳನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಮತ್ತು ಇದರ ಸಂಪೂರ್ಣ ನಿರ್ವಹಣೆಯನ್ನು ಎಸ್.ಹೆಚ್.ಜಿ. ಮಹಿಳೆಯರ ಮೂಲಕ ಮಾಡಲಾಗುವುದು. 

230. ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು 5 ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವ-ಸಹಾಯ ಗುಂಪುಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಿಸಲಾಗುವುದು.

231. ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ GP-SHG ಒಗ್ಗೂಡಿಸುವಿಕೆಯ ನೀತಿಯನ್ನು ಜಾರಿಗೊಳಿಸಲಾಗುವುದು.

01:20 PM (IST) Feb 16

ನೂತನ ಜಿಲ್ಲಾ ರಚನೆಗೆ ಆಸೆ ಇಟ್ಟ ಚಿಕ್ಕೋಡಿ ಜನರಿಗೆ ನಿರಾಸೆ

ಚಿಕ್ಕೋಡಿ: ಸಿದ್ದರಾಮಯ್ಯನ ಬಜೆಟಗೆ ತೀವ್ರ ನಿರಾಸೆ ವ್ಯಕ್ತಪಡಿಸಿದ ಚಿಕ್ಕೋಡಿ ಜನರು.

ನೂತನ ಜಿಲ್ಲಾ ರಚನೆಗೆ ಆಸೆ ಇಟ್ಟ ಜನರಿಗೆ ನಿರಾಸೆ.

32ನೇ ಜಿಲ್ಲಾ ರಚನೆಗೆ ಚಿಕ್ಕೋಡಿ ಜನರ ಬಹು ದಿನಗಳ ಬೇಡಿಕೆ

ಈ ಬಜೆಟ್ ನಲ್ಲಿ ಚಿಕ್ಕೋಡಿ ಜಿಲ್ಲಾ ರಚನೆಗೆ ಸರ್ಕಾರ ಮಾನ್ಯತೆ ಬರವಸೆ

ಚಿಕ್ಕೋಡಿ ಜಿಲ್ಲಾ ರಚನೆಗೆ ಮುಂದಾಗದ ಕೈ ಸರ್ಕಾರ

ಕಾಂಗ್ರೆಸ್ ಸರ್ಕಾರ ವಿರುದ್ಧ ಚಿಕ್ಕೋಡಿ ಜನರು ಆಕ್ರೋಶ

ಈ ಭಾಗದ ಕಾಂಗ್ರೆಸ್ ಶಾಸಕರ ವಿರುದ್ಧ ಕೆಂಡ ಕಾರಿದ ಚಿಕ್ಕೋಡಿ ಜನರು

ಕಳೆದ 25 ಒಂದು ವರ್ಷಗಳ ಬೇಡಿಕೆಗೆ ಸ್ಪಂದಿಸದ ಸರ್ಕಾರ.

11:45 AM (IST) Feb 16

ಹಸಿವು ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಆದ್ಯತೆ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು

203. ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಕನಸಿನೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಉಚಿತ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು. ಈ ಬಾರಿ ನಾವು ನೀಡಿದ್ದ ಭರವಸೆಯಂತೆ ಹೆಚ್ಚುವರಿಯಾಗಿ ಐದು ಕೆ.ಜಿ. ಆಹಾರ ಧಾನ್ಯ ನೀಡಲು ತೀರ್ಮಾನಿಸಲಾಗಿದೆ. ಆದರೆ ಕೇಂದ್ರ ಸರ್ಕಾರದ ಅಸಹಕಾರ ಧೋರಣೆಯಿಂದಾಗಿ ಅಕ್ಕಿ ಲಭ್ಯವಾಗದ ಕಾರಣ, ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂ.ನಂತೆ ಪ್ರತಿ ಮಾಹೆ 170 ರೂ. ನೇರ ನಗದು ವರ್ಗಾವಣೆ ಮಾಡುವ ಮೂಲಕ ನಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ. ಜನವರಿ 2024ರ ಅಂತ್ಯದವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.

204. ಡಾ|| ಮನ್ಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು 2013 ರಲ್ಲಿ ಜಾರಿಗೆ ತರಲಾಯಿತು. ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಲಾಗುವುದು. ಇದರಿಂದ ಆಹಾರ ಭದ್ರತಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ, ಹಾಗೂ ಹಸಿವು ಮುಕ್ತ ಕರ್ನಾಟಕದ ನಮ್ಮ ಆಶಯವನ್ನು ಈಡೇರಿಸಲು ನೆರವಾಗಲಿದೆ.

205. ಅನ್ನ–ಸುವಿಧಾ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲಿವೆರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.

11:45 AM (IST) Feb 16

ಹಸಿವು ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಆದ್ಯತೆ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು

203. ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಕನಸಿನೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಉಚಿತ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು. ಈ ಬಾರಿ ನಾವು ನೀಡಿದ್ದ ಭರವಸೆಯಂತೆ ಹೆಚ್ಚುವರಿಯಾಗಿ ಐದು ಕೆ.ಜಿ. ಆಹಾರ ಧಾನ್ಯ ನೀಡಲು ತೀರ್ಮಾನಿಸಲಾಗಿದೆ. ಆದರೆ ಕೇಂದ್ರ ಸರ್ಕಾರದ ಅಸಹಕಾರ ಧೋರಣೆಯಿಂದಾಗಿ ಅಕ್ಕಿ ಲಭ್ಯವಾಗದ ಕಾರಣ, ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂ.ನಂತೆ ಪ್ರತಿ ಮಾಹೆ 170 ರೂ. ನೇರ ನಗದು ವರ್ಗಾವಣೆ ಮಾಡುವ ಮೂಲಕ ನಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ. ಜನವರಿ 2024ರ ಅಂತ್ಯದವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.

204. ಡಾ|| ಮನ್ಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು 2013 ರಲ್ಲಿ ಜಾರಿಗೆ ತರಲಾಯಿತು. ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಲಾಗುವುದು. ಇದರಿಂದ ಆಹಾರ ಭದ್ರತಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ, ಹಾಗೂ ಹಸಿವು ಮುಕ್ತ ಕರ್ನಾಟಕದ ನಮ್ಮ ಆಶಯವನ್ನು ಈಡೇರಿಸಲು ನೆರವಾಗಲಿದೆ.

205. ಅನ್ನ–ಸುವಿಧಾ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲಿವೆರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.

11:44 AM (IST) Feb 16

ಸೂರು ಕಲ್ಪಿಸಲು ಸಿದ್ದರಾಮಯ್ಯ ಜೋಯನೆಗಳೇನು?

ವಸತಿ
199. ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆಯನ್ನು ನಡೆಸಲಾಗುವುದು.
200. ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಫಲಾನುಭವಿಗಳು ಬಡ ಕುಟುಂಬದವರಾಗಿದ್ದು, ತಮ್ಮ ಪಾಲಿನ ವಂತಿಗೆಯಾದ ಐದು ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೇ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು 
ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು ತೀರ್ಮಾನಿಸಿದೆ. ಅದರಂತೆ ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸಲಾಗುವುದು.
201. ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ;
• Asset Monetisation, ವಸತಿ ಸೆಸ್‌ ಮತ್ತು ವಿವಿಧ ಶಾಸನ ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೊಢೀಕರಿಸಿ Karnataka Affordable Housing Fund ಅನ್ನು (KAHF) ಸ್ಥಾಪಿಸಲಾಗುವುದು. 
• ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್‌ ದರ ಪರಿಷ್ಕರಣೆ ಮಾಡುವುದು.
• ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲಾಗುವುದು.
202. ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರವು ರಿಯಲ್‌ ಎಸ್ಟೇಟ್‌ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. 2023-24 ನೇ ಸಾಲಿನಲ್ಲಿ ಡೆವಲಪರ್‌ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು.