Asianet Suvarna News Asianet Suvarna News

LPG Cylinder Price Cut:ಎಲ್ ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್; ಸಿಲಿಂಡರ್ ಬೆಲೆಯಲ್ಲಿ 198ರೂ. ಇಳಿಕೆ

*19 ಕೆಜಿ ಎಲ್ ಪಿಜಿ ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ
*ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ
*ಕಳೆದ ತಿಂಗಳು ಕೂಡ  ಎಲ್ ಪಿಜಿ ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

LPG Cylinder Price Cut on July 1 19Kg Commercial Cylinder Becomes Cheaper Know Rates
Author
Bangalore, First Published Jul 1, 2022, 9:06 AM IST | Last Updated Jul 1, 2022, 9:06 AM IST

ನವದೆಹಲಿ (ಜು.1): ತಿಂಗಳ ಮೊದಲ ದಿನ ಎಲ್ ಪಿಜಿ (LPG) ಸಿಲಿಂಡರ್ (Cylinder) ಬೆಲೆಯಲ್ಲಿ ವ್ಯತ್ಯಾಸವಾಗೋದು ಸಾಮಾನ್ಯ. ಇಂದು (ಶುಕ್ರವಾರ) ಕೂಡ ನವದೆಹಲಿಯಲ್ಲಿ 19 ಕೆಜಿ ಎಲ್ ಪಿಜಿ ಕಮರ್ಷಿಯಲ್ ಸಿಲಿಂಡರ್ (commercial cylinder) ಬೆಲೆಯಲ್ಲಿ (Pice) 198ರೂ. ಇಳಿಕೆ ಮಾಡಲಾಗಿದೆ. ಆದರೆ, ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 

ಶುಕ್ರವಾರದಿಂದಲೇ ಜಾರಿಗೆ ಬರುವಂತೆ ದೆಹಲಿಯಲ್ಲಿ 19 ಕೆಜಿ ಎಲ್ ಪಿಜಿ ಕಮರ್ಷಿಯಲ್ ಸಿಲಿಂಡರ್  ಬೆಲೆಯಲ್ಲಿ 198ರೂ. ಇಳಿಕೆಯಾಗಿದೆ. ಕೋಲ್ಕತ್ತದಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 182ರೂ. ಇಳಿಕೆಯಾಗಿದೆ. ಇನ್ನು ಮುಂಬೈನಲ್ಲಿ 190.50ರೂ. ಕಡಿಮೆಯಾಗಿದ್ರೆ, ಚೆನ್ನೈನಲ್ಲಿ 187 ರೂ. ತಗ್ಗಿದೆ. ಪೆಟ್ರೋಲಿಯಂ ಕಂಪನಿ ಇಂಡಿಯನ್ ಆಯಿಲ್ ಕೂಡ ಕರ್ಮಷಿಯಲ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಇಳಿಕೆಯಿಂದ ಸ್ವಲ್ಪ ಮಟ್ಟಿನ ನೆಮ್ಮದಿ ಸಿಕ್ಕಿದೆ. 

ಉದ್ಯಮಸ್ನೇಹಿ ವಾತಾವರಣ: ದೇಶದಲ್ಲಿ ಕರ್ನಾಟಕ ಟಾಪರ್‌

ಜೂನ್ 1ರಂದು ಕೂಡ ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಲಾಗಿತ್ತು.  ಆಗ 19 ಕೆಜಿ ಎಲ್ ಪಿಜಿ (LPG) ಕಮರ್ಷಿಯಲ್ ಸಿಲಿಂಡರ್ (commercial cylinder) ಬೆಲೆಯಲ್ಲಿ 135ರೂ. ಇಳಿಕೆ ಮಾಡಲಾಗಿತ್ತು. 

ಗೃಹ ಬಳಕೆ ಸಿಲಿಂಡರ್ ಬೆಲೆ ಸ್ಥಿರ
ಮೇನಲ್ಲಿ ಎರಡು ಬಾರಿ ಏರಿಕೆ ಕಂಡಿದ್ದ ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ (domestic LPG cylinder) ಬೆಲೆಯಲ್ಲಿ ಮಾತ್ರ ಇಂದು ಯಾವುದೇ ಬದಲಾವಣೆಯಾಗಿಲ್ಲ. 14.2 ಕೆಜಿ ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ ಮೇ 19ರಂದು ಎಷ್ಟಿತ್ತೋ ಅಷ್ಟೇ ಇದೆ.  ಪ್ರಸ್ತುತ ರಾಜ್ಯದಲ್ಲಿ 14.2 ಕೆಜಿ ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 1,002 ರೂ.ಇದೆ. ದೇಶಾದ್ಯಂತ ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ದರ ಸಾವಿರದ ಗಡಿ ದಾಟಿದೆ. ಆದರೆ, ಕೇಂದ್ರ ಸರ್ಕಾರ ಇತ್ತೀಚೆಗೆ ಬಡ ವರ್ಗದ ಜನರಿಗೆ ಎಲ್ ಪಿಜಿ (LPG) ಸಬ್ಸಿಡಿಯನ್ನು (Subsidy) ಘೋಷಿಸಿದೆ.  ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (Pradhan Mantri Ujjwala Yojana) 9 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಪ್ರತಿ ಎಲ್ ಪಿಜಿ ಸಿಲಿಂಡರ್  (12 ಸಿಲಿಂಡರ್ ತನಕ) ಮೇಲೆ 200ರೂ. ಸಬ್ಸಿಡಿ (Subsidy) ಘೋಷಿಸಲಾಗಿದೆ. ಇದ್ರಿಂದ ಗೃಹ ಬಳಕೆ ಸಿಲಿಂಡರ್ ಕಡಿಮೆ ದರದಲ್ಲಿ ಬಡ ವರ್ಗದವರಿಗೆ ಲಭ್ಯವಾಗಲಿದೆ.

GST Rates Revised:ಜಿಎಸ್ ಟಿ ದರ ಪರಿಷ್ಕರಣೆ; ಯಾವುದು ದುಬಾರಿ, ಯಾವುದು ಅಗ್ಗ? ಇಲ್ಲಿದೆ ಮಾಹಿತಿ

ಕಚ್ಚಾ ತೈಲ ಬೆಲೆ ಏರಿಕೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯೇರಿಕೆ ಪರಿಣಾಮ ಭಾರತದಲ್ಲಿ ತೈಲ ಕಂಪನಿಗಳು ಎಲ್ ಪಿಜಿ ಬೆಲೆಯೇರಿಕೆ ಮಾಡಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು. ಮೇನಲ್ಲಿ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಎರಡು ಬಾರಿ ಏರಿಕೆ ಮಾಡಿದ ಪರಿಣಾಮ ಪ್ರತಿ ಸಿಲಿಂಡರ್ ದರ ದೇಶದ ಎಲ್ಲ ಪ್ರಮುಖ ನಗರಗಳಲ್ಲಿ ಸಾವಿರದ ಗಡಿ ದಾಟಿವೆ. ಇನ್ನು ಭಾರತದಲ್ಲಿ ಇಂಧನ ದರ ಸುಮಾರು ಒಂದು ತಿಂಗಳಿಂದ ಸ್ಥಿರವಾಗಿದೆ. ಸಾಮಾನ್ಯವಾಗಿ ತಿಂಗಳ ಮೊದಲ ದಿನ ಪೆಟ್ರೋಲಿಯಂ ಕಂಪನಿಗಳು ದರ ಏರಿಕೆ ನಿರ್ಧಾರ ಪ್ರಕಟಿಸುತ್ತವೆ. ಆದ್ರೆ ಜುಲೈ 1ರಂದು ಇಂಧನ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹೀಗಾಗಿ ಜನಸಾಮಾನ್ಯರಿಗೆ ಸ್ವಲ್ಪ ಮಟ್ಟಿನ ನಿರಾಳತೆ ಸಿಕ್ಕಿದೆ. 

ಮೇ 21ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು.ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕಲು ಸರ್ಕಾರ ಪೆಟ್ರೋಲ್ ದರವನ್ನು ಪ್ರತಿ ಲೀಟರ್ ಗೆ 8ರೂ. ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್ ಗೆ 6 ರೂ. ಕಡಿತಗೊಳಿಸಿತ್ತು. 
 

Latest Videos
Follow Us:
Download App:
  • android
  • ios