ಕೇಂದ್ರ ಸರ್ಕಾರವು ದೇಶದಲ್ಲಿ ಈರುಳ್ಳಿ ಬೆಲೆಯನ್ನು ನಿಯಂತ್ರಣಕ್ಕಾಗಿ ರಫ್ತಿನ ಮೇಲೆ ಶೇ.40ರಷ್ಟುಸುಂಕವನ್ನು ವಿಧಿಸಿರುವುದನ್ನು ವಿರೋಧಿಸಿ ದೇಶದ ಅತಿ ದೊಡ್ಡ ಈರುಳ್ಳಿ ಸಗಟು ಮಾರುಕಟ್ಟೆಯಾದ ನಾಸಿಕ್‌ ಮತ್ತು ಜಿಲ್ಲೆಯಾದ್ಯಂತ ಇರುವ ಎಪಿಎಂಸಿ ಮಂಡಿ ವರ್ತಕರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.

ನಾಸಿಕ್‌: ಕೇಂದ್ರ ಸರ್ಕಾರವು ದೇಶದಲ್ಲಿ ಈರುಳ್ಳಿ ಬೆಲೆಯನ್ನು ನಿಯಂತ್ರಣಕ್ಕಾಗಿ ರಫ್ತಿನ ಮೇಲೆ ಶೇ.40ರಷ್ಟುಸುಂಕವನ್ನು ವಿಧಿಸಿರುವುದನ್ನು ವಿರೋಧಿಸಿ ದೇಶದ ಅತಿ ದೊಡ್ಡ ಈರುಳ್ಳಿ ಸಗಟು ಮಾರುಕಟ್ಟೆಯಾದ ನಾಸಿಕ್‌ ಮತ್ತು ಜಿಲ್ಲೆಯಾದ್ಯಂತ ಇರುವ ಎಪಿಎಂಸಿ ಮಂಡಿ ವರ್ತಕರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಹೀಗಾಗಿ ಮಾರುಕಟ್ಟೆಯಲ್ಲಿ ಹರಾಜು ಪ್ರಕ್ರಿಯೆ ಸ್ಥಗಿತಗೊಂಡಿದೆ. ದೇಶದಲ್ಲಿ ಈರುಳ್ಳಿ ಬೆಳೆ ಈ ವರ್ಷ ಚೆನ್ನಾಗಿದೆ. ಕೇಂದ್ರ ಸರ್ಕಾರಕ್ಕೆ ಯಾವುದೋ ಸಂಸ್ಥೆ ಸುಳ್ಳು ವರದಿ ನೀಡಿದೆ. ಈ ಕ್ರಮವನ್ನು ಕೂಡಲೇ ಹಿಂಪಡೆಯಬೇಕು ಎಂದು ಮುಖಂಡರೊಬ್ಬರು ತಿಳಿಸಿದರು. ಈ ನಡುವೆ ಸರ್ಕಾರದ ಕ್ರಮ ಖಂಡಿಸಿ ರೈತರು ಕೂಡಾ ರಾಜ್ಯದ ಹಲವೆಡೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ದೇಶಿಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಮತ್ತು ಪೂರೈಕೆಯನ್ನು ಸಮತೋಲನದಲ್ಲಿರಿಸುವ ಉದ್ದೇಶದಿಂದ ಡಿ.31, 2023ರವರೆಗೆ ಈರುಳ್ಳಿ ರಫ್ತು ಮೇಲೆ ಸರ್ಕಾರವು ಶೇ.40ರಷ್ಟು ತೆರಿಗೆಯನ್ನು ವಿಧಿಸಿ ಎಂದು ಆಗಸ್ಟ್ 19 ರಂದು ಸರ್ಕಾರ ಆದೇಶ ಹೊರಡಿಸಿತ್ತು. ಸುಂಕ ಹೆಚ್ಚಿಸಿದ್ದರಿಂದ ಈರುಳ್ಳಿ ರಫ್ತು ಕಡಿಮೆಯಾಗಿ, ದೇಶೀಯ ಮಾರುಕಟ್ಟೆಯಲ್ಲೇ ಅದು ಉಳಿದುಕೊಳ್ಳುತ್ತದೆ. ಹೀಗಾಗಿ ಯಾವುದೇ ಕೊರತೆಯಾಗಲು ಸಾಧ್ಯವಿಲ್ಲ ಎಂಬ ಉದ್ದೇಶದಿಂದ ಹಣಕಾಸು ಸಚಿವಾಲಯ ಈ ಆದೇಶ ಹೊರಡಿಸಿದೆ.

ಈರುಳ್ಳಿ ಬೇಗ ಕೊಳೆವುದನ್ನು ತಪ್ಪಿಸಲು ವಿಕಿರಣ ಚಿಕಿತ್ಸೆ; ಗಾಮಾ ಕಿರಣ ಹರಿಸಿ ಆಯಸ್ಸು ಹೆಚ್ಚಿಸಲು ಪ್ಲ್ಯಾನ್‌

ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಲಿದ್ದು ಪೂರೈಕೆಯಲ್ಲಿ ಕೊರತೆಯಾಗಲಿದೆ ಎಂಬ ವರದಿಗಳ ಬೆನ್ನಲ್ಲೇ ಆ.11 ರಂದು ಸರ್ಕಾರವು ಸಂಗ್ರಹಿಸಿಟ್ಟಿದ್ದ 3ಲಕ್ಷ ಟನ್‌ ಈರುಳ್ಳಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಅದಾಗ್ಯೂ ಇತ್ತೀಚೆಗೆ ದೇಶದಲ್ಲಿ ಟೊಮೆಟೋ ಪೂರೈಕೆಯಲ್ಲಿ ಕೊರತೆಯಾಗಿ ಬೆಲೆ ಏರಿಕೆ ಬಿಸಿ ತಟ್ಟಿದಂತೆ ಈರುಳ್ಳಿ ಬೆಲೆಯಲ್ಲೂ ವ್ಯತ್ಯಯವಾಗದಿರಲಿ ಎಂದು ಕೇಂದ್ರ ಈ ನಿರ್ಧಾರ ಕೈಗೊಂಡಿದೆ.

ದೆಹಲಿಯಲ್ಲಿ ಕೇಜಿಗೆ 25ರು. ಗಳಂತೆ ಸಬ್ಸಿಡಿ ದರಕ್ಕೆ ಈರುಳ್ಳಿ ಮಾರಾಟ

ಭಾರತೀಯ ರಾಷ್ಟ್ರೀಯ ಗ್ರಾಹಕರ ಸಹಕಾರಿ ಒಕ್ಕೂಟವು (ಎನ್‌ಸಿಸಿಎಫ್‌) ಸೋಮವಾರದಿಂದ ದೆಹಲಿಯಲ್ಲಿ ಕೇಜಿಗೆ 25ರು.ಗಳಂತೆ ಈರುಳ್ಳಿಯನ್ನು ಸಬ್ಸಿಡಿ ದರದಲ್ಲಿ ಮಾರಾಟ ಮಾಡಲಿದೆ. ಸರ್ಕಾರಿ ಬಫರ್‌ ಸ್ಟಾಕ್‌ನಿಂದ ಈರುಳ್ಳಿಯನ್ನು ಮಾರಾಟ ಮಾಡಲಾಗುತ್ತದೆ. ದೆಹಲಿಯಲ್ಲಿ 10 ಮೊಬೈಲ್‌ ವ್ಯಾನ್‌ಗಳ ಮೂಲಕ ಮತ್ತು 2 ಮಾರಾಟ ಮಳಿಗೆಗಳ ಮೂಲಕ ಚಿಲ್ಲರೆ ಈರುಳ್ಳಿ ಮಾರಾಟ ಪ್ರಾರಂಭಿಸಲಾಗುತ್ತದೆ. 2 ದಿನಗಳ ಬಳಿಕ ಆಂಧ್ರ ಪ್ರದೇಶ, ಹಿಮಾಚಲ ಪ್ರದೇಶ, ಅಸ್ಸಾಂ ಮತ್ತು ತೆಲಂಗಾಣಗಳಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಸಿಸಿಎಫ್‌ ಸರ್ಕಾರದ ಪರವಾಗಿ ಈಗಾಗಲೇ ಸಬ್ಸಿಡಿ ಬೆಲೆಯಲ್ಲಿ ಟೊಮೆಟೋ ಮಾರಾಟ ಮಾಡುತ್ತಿದೆ.

ಬೆಲೆ ಏರಿಕೆ ಕಡಿವಾಣಕ್ಕೆ ಹೆಚ್ಚುವರಿ 2 ಲಕ್ಷ ಟನ್‌ ಈರುಳ್ಳಿ ಸಂಗ್ರಹ: ಕೇಂದ್ರ

ನವದೆಹಲಿ: ಟೊಮೆಟೋ ಬೆನ್ನಲ್ಲೇ ಈರುಳ್ಳಿ ಬೆಲೆ ಏರಿಕೆಯಾಗುತ್ತಿದ್ದು, ಇದನ್ನು ಎದುರಿಸಲು ಹೆಚ್ಚುವರಿಯಾಗಿ 2 ಲಕ್ಷ ಟನ್‌ ಈರುಳ್ಳಿ ಸಂಗ್ರಹ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬೆಲೆ ನಿಯಂತ್ರಣದ ನಿಟ್ಟಿನಲ್ಲಿ ಇತ್ತೀಚೆಗೆ ಕೇಂದ್ರ ಸರ್ಕಾರ ಮಾರುಕಟ್ಟೆಗೆ 3 ಲಕ್ಷ ಟನ್‌ ಈರುಳ್ಳಿ ಬಿಡುಗಡೆ ಮಾಡಿತ್ತು, ಜೊತೆಗೆ ಈರುಳ್ಳಿ ರಫ್ತಿಗೆ ಶೇ.40ರಷ್ಟು ತೆರಿಗೆ ಹಾಕಿತ್ತು. ಅದರ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಸಾಧ್ಯತೆ ಊಹಿಸಿರುವ ಸರ್ಕಾರ ಹೆಚ್ಚುವರಿ ಸಂಗ್ರಹಕ್ಕೆ ಮುಂದಾಗಿದೆ.

ಸಮಯಕ್ಕೆ ಸರಿಯಾಗಿ ಬಾರದ ಮಳೆ‌, ಈರುಳ್ಳಿ ಬಿತ್ತನೆ ಮಾಡದ ರೈತ, ಬೆಲೆ ಗಗನಕ್ಕೇರುವ ಸಾಧ್ಯತೆ!

2023-24ನೇ ಸಾಲಿನಲ್ಲಿ 3 ಲಕ್ಷ ಟನ್‌ ಸಂಗ್ರಹ ಮಾಡಲು ನಿರ್ಧರಿಸಿದ್ದ ಕೇಂದ್ರ ಸರ್ಕಾರ ಅದನ್ನು ಇದೀಗ 5 ಲಕ್ಷ ಟನ್‌ಗೆ ಏರಿಸಿದೆ. ಹೀಗಾಗಿ ಹಾಲಿ ಇರುವ ಅಂದಾಜು 3 ಲಕ್ಷ ಟನ್‌ ಜೊತೆಗೆ ಹೊಸದಾಗಿ 2 ಲಕ್ಷ ಟನ್‌ ಈರುಳ್ಳಿಯನ್ನು ನ್ಯಾಫೆಡ್‌ ಹಾಗೂ ಎನ್‌ಸಿಸಿಎಫ್‌ಗಳ ಮೂಲಕ ಸಂಗ್ರಹಕ್ಕೆ ಮುಂದಾಗಿದೆ. ಹೆಚ್ಚುವರಿಯಾಗಿ ಸಂಗ್ರಹಿಸಿರುವ ಈರುಳ್ಳಿಯನ್ನು ದೇಶದಲ್ಲಿ ಯಾವ ಪ್ರದೇಶದಲ್ಲಿ ಬೆಲೆ ಹೆಚ್ಚಿದೆಯೋ ಅಲ್ಲಿ ನ್ಯಾಫೆಡ್‌ ಕೇಂದ್ರಗಳಲ್ಲಿ ಮಾರಾಟ ಮಾಡಲು ನಿರ್ಧರಿಸಿದೆ. ಇದಕ್ಕಾಗಿ ಈಗಾಗಲೇ 1400 ಟನ್‌ ಈರುಳ್ಳಿ ಬಿಡುಗಡೆ ಮಾಡಲಾಗಿದೆ. ಕೇಂದ್ರದಿಂದ ಚಿಲ್ಲರೆ ಮಾರುಕಟ್ಟೆಗೂ ಕೇಜಿಗೆ 25 ರು.ನಂತೆ ರಿಯಾಯ್ತಿ ದರದಲ್ಲಿ ಮಾರಾಟ ಮಾಡಲಾಗುವುದು.